• search
  • Live TV
ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಳ್ಳಾರಿಯಲ್ಲಿ ಒಂದೇ ದಿನ‌ 107 ಕೊರೊನಾ ವೈರಸ್ ಪಾಸಿಟಿವ್ ಕೇಸ್ ಪತ್ತೆ

By ಬಳ್ಳಾರಿ ಪ್ರತಿನಿಧಿ
|
Google Oneindia Kannada News

ಬಳ್ಳಾರಿ, ಜೂನ್ 30: ಗಣಿ ನಾಡು ಬಳ್ಳಾರಿ ಜಿಲ್ಲೆಯಲ್ಲಿ ಹೊಸದಾಗಿ 107 ಕೊರೊನಾ ವೈರಸ್ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, ಇದರಿಂದ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 880 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಮಂಗಳವಾರ ಒಂದೇ ದಿನ 107 ಮಂದಿಗೆ ಮಹಾಮಾರಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಆ ಪೈಕಿ 50 ಮಂದಿ ಜಿಂದಾಲ್ ಕಾರ್ಖಾನೆ ನೌಕರರ ಸೋಂಕಿತರ ಪ್ರೈಮರಿ ಹಾಗೂ ಸೆಕೆಂಡರಿ ಸಂಪರ್ಕ ಹೊಂದಿರುವವರು ಎಂದು ಗುರುತಿಸಲಾಗಿದೆ.

ಕೊರೊನಾ ರೋಗಿಗಳ ಶವಸಂಸ್ಕಾರ ವಿಡಿಯೋ; ತನಿಖೆಗೆ ಬಳ್ಳಾರಿ ಡಿಸಿ ಆದೇಶಕೊರೊನಾ ರೋಗಿಗಳ ಶವಸಂಸ್ಕಾರ ವಿಡಿಯೋ; ತನಿಖೆಗೆ ಬಳ್ಳಾರಿ ಡಿಸಿ ಆದೇಶ

ಹೀಗಾಗಿ ಕೇವಲ ಜಿಂದಾಲ್ ಕಾರ್ಖಾನೆ ಒಂದರಲ್ಲೇ ಈವರೆಗೆ ಅಂದಾಜು 450 ಮಂದಿ ನೌಕರರಿಗೆ ಮಹಾಮಾರಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. 409 ಮಂದಿ ಗುಣಮುಖರಾಗಿದ್ದಾರೆ. 29 ಮಂದಿ ಸಾವನ್ನಪ್ಪಿದ್ದು, 442 ಸಕ್ರೀಯ ಪ್ರಕರಣಗಳಿವೆ.

ಬಳ್ಳಾರಿಯಲ್ಲಿ ಕೊರೊನಾ ವೈರಸ್ ಅಟ್ಟಹಾಸ ಹಿನ್ನೆಲೆಯಲ್ಲಿ ಜನರು ಸ್ವಯಂ ಪ್ರೇರಣೆಯಿಂದ ಲಾಕ್ ಡೌನ್ ಮಾಡಲು ಮುಂದಾಗಿದ್ದಾರೆ.

ನಾಳೆಯಿಂದ ಲಾಕ್ ಡೌನ್ ಮಾಡಲು ಸ್ಥಳೀಯರು ತಯಾರಾಗಿದ್ದಾರೆ.

ಬಳ್ಳಾರಿ ಜಿಲ್ಲೆಯ ಸಂಡೂರು ಪಟ್ಟಣ ಸೇರಿದಂತೆ ಜಿಂದಾಲ್ ಕಾರ್ಖಾನೆ ಸುತ್ತಮುತ್ತಲಿನಲ್ಲಿರುವ ಗ್ರಾಮಗಳಿಂದ ಲಾಕ್ ಡೌನ್ ಮಾಡಲು ನಿರ್ಧಾರ ಮಾಡಿದ್ದಾರೆ. ಅಗತ್ಯ ಸೇವೆ ಹೊರತುಪಡಿಸಿ, ಉಳಿದಂತೆ ಎಲ್ಲವನ್ನೂ ಬಂದ್ ಮಾಡಲಾಗುತ್ತದೆ.

ಗಣಿಜಿಲ್ಲೆಯಲ್ಲಿ ಇಂದು ಒಂದೇ ದಿನ ಕೊರೊನಾ ಸೋಂಕಿಗೆ ಎಂಟು ಬಲಿಗಣಿಜಿಲ್ಲೆಯಲ್ಲಿ ಇಂದು ಒಂದೇ ದಿನ ಕೊರೊನಾ ಸೋಂಕಿಗೆ ಎಂಟು ಬಲಿ

ಬೆಳಿಗ್ಗೆ 7 ಗಂಟೆಯಿಂದ 11 ಗಂಟೆವರೆಗೂ ಮಾತ್ರ ವಾಣಿಜ್ಯ ವ್ಯವಹಾರಕ್ಕೆ ಅವಕಾಶ ನೀಡಲಾಗಿದ್ದು, 11 ಗಂಟೆಯ ನಂತರ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರುತ್ತದೆ.

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ತುರ್ತು ಸಭೆ ಕರೆಯಲಾಗಿದೆ. ಸಭೆಯಲ್ಲಿ ಜಿಲ್ಲಾಧಿಕಾರಿ ಎಸ್.ಎಸ್ ನಕುಲ್, ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್, ಶಾಸಕ ಸೋಮಶೇಖರ್ ರೆಡ್ಡಿ ಭಾಗಿಯಾಗಿದ್ದಾರೆ.

ಈ ಸಂದರ್ಭದಲ್ಲಿ ಬಳ್ಳಾರಿಯ ಕೊರೊನಾ ಸೋಂಕಿತ ಮೃತರ ಸಾಮೂಹಿಕ ಅಂತ್ಯಸಂಸ್ಕಾರ ವಿಚಾರವಾಗಿ ಬಳ್ಳಾರಿ ಜಿಲ್ಲಾಡಳಿತ ಬಹಿರಂಗ ಕ್ಷಮೆಯಾಚಿಸಿದೆ.

ಈ ಬಗ್ಗೆ ಮಾಧ್ಯಮಗಳಲ್ಲಿ ಬೆಳಿಗ್ಗೆಯಿಂದ ವರದಿ ಪ್ರಸಾರವಾಗಿದ್ದು, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ಅವರ ನೇತೃತ್ವದ‌ ಕೊರೊನಾ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

ಬಳ್ಳಾರಿ ಜಿಲ್ಲಾಡಳಿತದಿಂದ ಘಟನೆ ಬಗ್ಗೆ ಮೃತರ ಕುಟುಂಬ ಮತ್ತು ಬಳ್ಳಾರಿ ಜನರ ಬಳಿ ಕ್ಷಮೆಯಾಚನೆ ಮಾಡಲಾಗಿದೆ. ಅಂತ್ಯ ಸಂಸ್ಕಾರದಲ್ಲಿ ನಿರ್ಲಕ್ಷ್ಯ ವಹಿಸಿದ ಸಿಬ್ಬಂದಿಯನ್ನು ಬದಲಾವಣೆ ಮಾಡಬೇಕು, ಅಂತ್ಯ ಸಂಸ್ಕಾರಕ್ಕೆ ನುರಿತ ಮತ್ತು ತರಬೇತಿ ಪಡೆದ ಸಿಬ್ಬಂದಿ ನೇಮಕಾತಿಗೆ ನಿರ್ಧಾರ ಕೈಗೊಳ್ಳಲಾಯಿತು. ಇನ್ಮುಂದೆ ಈ ರೀತಿಯ ಘಟನೆ ಮರುಕಳಿಸದಂತೆ ಎಚ್ಚರ ವಹಿಸುವಂತೆ ಸಚಿವ ಆನಂದ ಸಿಂಗ್ ಆದೇಶಿಸಿದರು.

English summary
A total of 107 coronavirus positive cases have been detected in Ballary district on Tuesday, total number of infected cases to 880.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X