ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರವಾಹಪೀಡಿತ ತಾಲೂಕುಗಳ ರಸ್ತೆ ಅಭಿವೃದ್ಧಿಗೆ 1500 ಕೋಟಿ ರೂ. ಬಿಡುಗಡೆ

By ಬಳ್ಳಾರಿ ಪ್ರತಿನಿಧಿ
|
Google Oneindia Kannada News

ಬಳ್ಳಾರಿ, ಫೆಬ್ರವರಿ 29: ರಾಜ್ಯದಲ್ಲಿ ಇತ್ತೀಚೆಗೆ ಉಂಟಾದ ಜಲಪ್ರಳಯದಿಂದ ಹಾನಿಯಾದ, 103 ತಾಲೂಕುಗಳ ರಸ್ತೆಗಳ ದುರಸ್ತಿ ಮತ್ತು ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದಿಂದ 1500 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದ್ದಾರೆ.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಘನತ್ಯಾಜ್ಯ ಸಂಗ್ರಹ ಮತ್ತು ವಿಲೇವಾರಿ ವಾಹನಗಳ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಜ್ಯದಲ್ಲಿರುವ 6021 ಗ್ರಾ.ಪಂ.ಗಳಲ್ಲಿ 3 ಸಾವಿರಕ್ಕೂ ಹೆಚ್ಚು ಗ್ರಾ.ಪಂ.ಗಳಲ್ಲಿ ಘನತ್ಯಾಜ್ಯ ನಿರ್ವಹಣೆಗೆ ಕ್ರಮ ವಹಿಸಲಾಗುವುದು. 1281 ಗ್ರಾ.ಪಂ.ಗಳಲ್ಲಿ ಘನತ್ಯಾಜ್ಯ ಕಸ ಸಂಗ್ರಹ ಮತ್ತು ನಿರ್ವಹಣೆಗೆ ಅನುಮೋದನೆ ನೀಡಲಾಗಿದೆ" ಎಂದು ಮಾಹಿತಿ ನೀಡಿದರು.

ಸ್ವಾತಂತ್ರ್ಯ ಹೋರಾಟಗಾರರು ಪಕ್ಷಾತೀತವಾಗಿರಬೇಕು: ಸಚಿವ ಈಶ್ವರಪ್ಪಸ್ವಾತಂತ್ರ್ಯ ಹೋರಾಟಗಾರರು ಪಕ್ಷಾತೀತವಾಗಿರಬೇಕು: ಸಚಿವ ಈಶ್ವರಪ್ಪ

1500 Crores Released For Road Development Of Flood Hit Areas

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ‌ರಾಜ್ ಇಲಾಖೆಯಲ್ಲಿ ಯಾವುದೇ ರೀತಿಯ ಹಣದ ಕೊರತೆ ಇಲ್ಲ ಎಂಬುದನ್ನು ಸ್ಪಷ್ಟಪಡಿಸಿದ ಸಚಿವ ಈಶ್ವರಪ್ಪ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ-ಟಿಪ್ಪಣಿಗಳು ಸಹಜ, ಯಾರು ಕೂಡ ವೈಯಕ್ತಿಕವಾಗಿ ತೆಗೆದುಕೊಳ್ಳಬಾರದು ಎಂದು ಶಾಸಕ ಬಸವರಾಜ ಪಾಟೀಲ್ ಯತ್ನಾಳ್ ಮತ್ತು ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ನಡುವಿನ ವಾಗ್ವಾದಕ್ಕೆ ಪರೋಕ್ಷವಾಗಿ ಸಮರ್ಥನೆ ನೀಡಿದರು.

English summary
1500 Crores of rupees Released For Road Development Of Flood Hit 103 taluks said ks eshwarappa in ballari,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X