• search
  • Live TV
ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಳ್ಳಾರಿ ಸರ್ಕಾರಿ ಶಾಲೆಗೆ ಭಾರೀ ಸಂಖ್ಯೆಯಲ್ಲಿ ವಲಸೆ ಕಾರ್ಮಿಕರ ಮಕ್ಕಳ ದಾಖಲಾತಿ

By ಬಳ್ಳಾರಿ ಪ್ರತಿನಿಧಿ
|

ಬಳ್ಳಾರಿ, ಸೆಪ್ಟೆಂಬರ್ 24: ಗಣಿ ಜಿಲ್ಲೆಯ ‌ನೂರಾರು ವಲಸೆ ಕಾರ್ಮಿಕ ಕುಟುಂಬದ ಮಕ್ಕಳಿಗೆ ಸರ್ಕಾರಿ ಶಾಲೆಯಲ್ಲಿ ಪ್ರವೇಶಾತಿ ನೀಡುವ ಪ್ರಕ್ರಿಯೆಗೆ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಚಾಲನೆ ನೀಡಿದ್ದು, ಸುಮಾರು 1,536 ವಲಸೆ ಕಾರ್ಮಿಕ ಕುಟುಂಬದ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ಪ್ರಯತ್ನಕ್ಕೆ ಕೈಹಾಕಿ ಯಶಸ್ಸು ಕಂಡಿದೆ.

ಜಿಲ್ಲೆಯ ನಾನಾ ಸರ್ಕಾರಿ ಶಾಲೆಗಳಲ್ಲೀಗ ಅಂದಾಜು 1,536 ಮಂದಿ ವಲಸೆ ಕಾರ್ಮಿಕರು ಪ್ರವೇಶಾತಿ ಪಡೆದಿದ್ದಾರೆ. ಯಾವುದೇ ದಾಖಲಾತಿ ಪರಿಗಣಿಸದೇ ಕೇವಲ ಅವರ ಪೋಷಕರು ನೀಡಿದ ಹೇಳಿಕೆ ಮೇರೆಗೆ ಈ ದಾಖಲಾತಿ ಪ್ರಕ್ರಿಯೆ ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದಾಗಿದೆ.

ಲಾಕ್ ಡೌನ್; ವಲಸೆ ಕಾರ್ಮಿಕರ ನೋಂದಣಿಗೆ ಆಹ್ವಾನ

ಈ‌ ಲಾಕ್‌ಡೌನ್ ಎಫೆಕ್ಟ್‌ನಿಂದ ದೊಡ್ಡ ದೊಡ್ಡ ಮಹಾನಗರಗಳಿಗೆ ದುಡಿಯಲು ಹೋಗಿದ್ದ ನೂರಾರು ವಲಸೆ ಕಾರ್ಮಿಕ‌ ಕುಟುಂಬಗಳು ಗಣಿ ಜಿಲ್ಲೆಗೆ ವಾಪಸ್ ಆದ ಹಿನ್ನೆಲೆ ಅವರ ಮಕ್ಕಳನ್ನು ಸರ್ಕಾರಿ ಶಾಲೆಗೆ ಕರೆತರಬೇಕೆಂಬ ಉದ್ದೇಶದೊಂದಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಈ ಪ್ರಯತ್ನವನ್ನು ನಡೆಸಿತ್ತು. ವಲಸೆ ಕಾರ್ಮಿಕರ‌ ಮಕ್ಕಳು ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿತ ಆಗಬಾರದೆಂದು ರಾಜ್ಯ ಸರ್ಕಾರ ಇತ್ತೀಚೆಗೆ ಸೂಕ್ತ ದಾಖಲೆ ಇಲ್ಲದಿದ್ರೂ ಪರವಾಗಿಲ್ಲ, ಶಾಲೆಗೆ ದಾಖಲಾತಿ ಮಾಡಿಸಿಕೊಳ್ಳುವುದಾಗಿ ತಿಳಿಸಿತ್ತು.

Ballari: 1536 Migrant Laborer children Got Admission In Government School

ಇಷ್ಟೊಂದು ಪ್ರಮಾಣದ ವಲಸೆ ಕಾರ್ಮಿಕ ಮಕ್ಕಳನ್ನು ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಮಾಡುವ ಪ್ರಯತ್ನಕ್ಕೆ ಮುಂದಾಗಿರುವುದು ಶ್ಲಾಘನೀಯ.

English summary
Ballari District Education Department has initiated a process for admission of thousands of migrant laborers children to government schools. And it has succeeded in bringing back about 1,536 children
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X