• search
 • Live TV
ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಳ್ಳಾರಿಯ ಜಿಂದಾಲ್ ನಲ್ಲಿ ಕೊರೊನಾ ಸ್ಫೋಟ; ಜಿಲ್ಲೆಯಲ್ಲಿ 94ಕ್ಕೇರಿದ ಸೋಂಕಿತರ ಸಂಖ್ಯೆ

By ಬಳ್ಳಾರಿ ಪ್ರತಿನಿಧಿ
|

ಬಳ್ಳಾರಿ, ಜೂನ್ 10: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 23 ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಇದರಿಂದಾಗಿ ಜಿಲ್ಲೆಯ ಪ್ರಕರಣಗಳ ಸಂಖ್ಯೆ 94ಕ್ಕೆ ಏರಿಕೆಯಾಗಿದೆ.

   ಲಾಕ್‌ಡೌನ್ ಸಂದರ್ಭದಲ್ಲಿ ಅತಿ ಹೆಚ್ಚು ಮಾರಾಟವಾದ ಬಿಸ್ಕತ್| Parle G biscuit register Highest sale in Lockdown

   ಬಳ್ಳಾರಿ ಜಿಲ್ಲೆಯ ಜಿಂದಾಲ್ ಸಮೂಹ ಸಂಸ್ಥೆಯ ನೌಕರರಲ್ಲಿ ಕಾಣಿಸಿಕೊಂಡಿದ್ದ ಸೋಂಕಿತರ ಪ್ರಾಥಮಿಕ ಸಂಪರ್ಕ ಹೊಂದಿದ್ದ 18 ಮಂದಿಗೆ ಹಾಗೂ ಆರೋಗ್ಯ ಸೇವೆಯಲ್ಲಿ ತೊಡಗಿರುವ ಇಬ್ಬರು ಮಹಿಳೆಯರಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ನಕುಲ್ ಮಾಹಿತಿ ನೀಡಿದ್ದಾರೆ. ಅಲ್ಲದೆ ಜಿಲ್ಲೆಯ ಸಿರುಗುಪ್ಪ ಪಟ್ಟಣದಲ್ಲಿನ ಫೀವರ್ ಕ್ಲಿನಿಕ್​ನಲ್ಲಿ ತಪಾಸಣೆಗೊಳಗಾದ ಒಬ್ಬರು ಹಾಗೂ‌ ಮಹಾರಾಷ್ಟ್ರದಿಂದ ಬಳ್ಳಾರಿಗೆ ಆಗಮಿಸಿದ್ದ ಇಬ್ಬರಿಗೆ ಕೊರೊನಾ ಸೋಂಕು ಇರುವುದು ಖಾತರಿಯಾಗಿದೆ.

   ಬಳ್ಳಾರಿಯಲ್ಲಿ ಮತ್ತೆ ನಾಲ್ವರಿಗೆ ಕೊರೊನಾವೈರಸ್ ಸೋಂಕು: 64ಕ್ಕೆ ಏರಿಕೆ‌

   ಸೋಂಕಿತರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ದಿನ ಪತ್ತೆಯಾಗಿದ್ದ 23 ಪ್ರಕರಣಗಳಲ್ಲಿ 19 ಪುರುಷ ಮತ್ತು 4 ಮಹಿಳಾ ರೋಗಿಗಳಿದ್ದಾರೆ. ಜಿಂದಾಲ್​ನಲ್ಲಿ ಇನ್ನೂ ಐದು ದಿನಗಳ‌ ಕಾಲ ಕನಿಷ್ಠ ಸಿಬ್ಬಂದಿಯೊಂದಿಗೆ ಪ್ಲಾಂಟ್ ನಿರ್ವಹಿಸಲು ಸೂಚಿಸಲಾಗಿದೆ. ಅಲ್ಲದೆ ಜಿಂದಾಲ್​ನಲ್ಲಿ ಅಗತ್ಯ ಕ್ವಾರಂಟೈನ್ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಈವರೆಗೂ 49 ಮಂದಿ ಗುಣಮುಖರಾಗಿದ್ದು, ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಉಳಿದ ‌44 ಮಂದಿಗೆ ಚಿಕಿತ್ಸೆ ಮುಂದುವರೆದಿದ್ದು, 94 ಪ್ರಕರಣಗಳಲ್ಲಿ ಒಬ್ಬರು ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ.

   English summary
   23 Coronavirus positive cases reported today in ballari district. Total number raises to 94 in district
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X