ಬಳ್ಳಾರಿಯಲ್ಲಿ ಸೋಂಕಿತನಿಗೆ ಚಿಕಿತ್ಸೆ ನೀಡಿದ ನರ್ಸ್ ಗೆ ಕೊರೊನಾ ವೈರಸ್!

ಬಳ್ಳಾರಿ, ಮೇ.26: ನೊವೆಲ್ ಕೊರೊನಾ ವೈರಸ್ ಸೋಂಕಿತನಿಗೆ ಚಿಕಿತ್ಸೆ ನೀಡಿದ ಕೊವಿಡ್-19 ಆಸ್ಪತ್ರೆಯ ನರ್ಸ್ ಗೆ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ಬೆಳಕಿಗೆ ಬಂದಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ.

ಬಳ್ಳಾರಿ ಜಿಲ್ಲೆಯ ಕೊವಿಡ್-19 ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 36 ವರ್ಷದ ನರ್ಸ್ ಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ. ಕೊರೊನಾ ವೈರಸ್ ಸೋಂಕಿತನ ಜೊತೆಗೆ ಪ್ರಾಥಮಿಕ ಸಂಪರ್ಕ ಹೊಂದಿರುವ ಹಿನ್ನೆಲೆಯಲ್ಲಿ ನರ್ಸ್ ಗೆ ಸೋಂಕು ತಗಲಿರುವ ಶಂಕೆ ವ್ಯಕ್ತವಾಗಿದೆ.

ಇದಕ್ಕೂ ಮುನ್ನ ಮಹಾರಾಷ್ಟ್ರದ ಮುಂಬೈನಿಂದ ಆಗಮಿಸಿದ 93 ಮಂದಿಯನ್ನು ನಗರದ ಬಿಸಿಎಂ ಹಾಸ್ಟೆಲ್ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಸ್ಟೆಲ್ ನಲ್ಲಿ ಇರಿಸಲಾಗಿತ್ತು. ಈ 93 ಮಂದಿ ಪೈಕಿ 11 ಜನರಲ್ಲಿ ಕೊರೊನಾ ವೈರಸ್ ಸೋಂಕು ಪಾಸಿಟಿವ್ ಎಂದು ಪತ್ತೆಯಾಗಿತ್ತು. ಆದರೆ ಅಷ್ಟರಲ್ಲೇ ಜಿಲ್ಲಾಡಳಿತವು ತೋರಿದ ದಿವ್ಯನಿರ್ಲಕ್ಷ್ಯ ಮತ್ತಷ್ಟು ಆತಂಕವನ್ನು ಹುಟ್ಟು ಹಾಕಿತ್ತು.

37 Covid-19 Positive Cases In Ballary: 36 Years Old Nurse Get Coronavirus Positive

ಕೊರೊನಾ ವಾರಿಯರ್ಸ್ ಗೆ ಕ್ವಾರೆಂಟೈನ್:

ಮುಂಬೈನಿಂದ ಬಳ್ಳಾರಿ ಜಿಲ್ಲೆಗೆ ಆಗಮಿಸಿದ 93 ಮಂದಿ ಪೈಕಿ 11 ಮಂದಿಗೆ ನೊವೆಲ್ ಕೊರೊನಾ ವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ 11 ಕೊವಿಡ್-19 ಆಸ್ಪತ್ರೆಯ ಸಿಬ್ಬಂದಿ ಹಾಗೂ 11 ಮಂದಿ ಪೊಲೀಸರನ್ನು ಕ್ವಾರೆಂಟೈನ್ ನಲ್ಲಿ ಇರಿಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+