ಬಳ್ಳಾರಿ ಜಿಲ್ಲೆಯಲ್ಲಿ ಇಂದು 375 ಜನರಿಗೆ ಕೊರೊನಾ ಸೋಂಕು ದೃಢ, 4 ಜನ ಸಾವು
ಬಳ್ಳಾರಿ, ಆಗಸ್ಟ್ 02: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ವೈರಸ್ ತನ್ನ ಕಬಂಧಬಾಹುವನ್ನು ಚಾಚುತ್ತಿದ್ದು, ಭಾನುವಾರ ಕೂಡಾ 375 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.
ಇದರೊಂದಿಗೆ ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6957ಕ್ಕೆ ಏರಿಕೆಯಾಗಿದ್ದು, ಇಂದು ನಾಲ್ಕು ಜನ ಸೋಂಕಿತರು ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 101 ಜನ ಕೋವಿಡ್-19 ಗೆ ಬಲಿಯಾಗಿದ್ದಾರೆ.
ಜಿಲ್ಲೆಯಲ್ಲಿ ಇಂದು 105 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ 3521 ಜನರು ಕೊರೊನಾ ವೈರಸ್ ನಿಂದ ಗುಣಮುಖರಾಗಿದ್ದಾರೆ. 3335 ಸಕ್ರಿಯ ಕೊರೊನಾ ಪ್ರಕರಣಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿಕ್ಕಮಗಳೂರಲ್ಲಿ 41 ಮಂದಿಗೆ ಕೊರೊನಾ ಪಾಸಿಟಿವ್, ಓರ್ವ ಸಾವು
ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು 41 ಜನರಿಗೆ ಕೊರೊನಾ ವೈರಸ್ ಕಾಣಿಸಿಕಂಡಿದೆ. ಅದೇ ರೀತಿ ಪಂಪಾ ನಗರದ 62 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಚಿಕ್ಕಮಗಳೂರು 30, ತರೀಕೆರೆ 5, ಕಡೂರು 4, ಮೂಡಿಗೆರೆ, ಅಜ್ಜಂಪುರದಲ್ಲಿ ತಲಾ ಒಂದು ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1087 ಕ್ಕೆ ಏರಿಕೆಯಾಗಿದೆ. ಆಸ್ಪತ್ರೆ ಮತ್ತು ಮನೆಗಳಲ್ಲಿ 614 ಮಂದಿಗೆ ಚಿಕಿತ್ಸೆ ಮುಂದುವರಿದಿದ್ದು, ಇದುವರೆಗೂ ಕೊರೊನಾ ಸೋಂಕಿನಿಂದ 22 ಮಂದಿ ಮೃತಪಟ್ಟಿದ್ದಾರೆ.












Click it and Unblock the Notifications