ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಳ್ಳಾರಿ ಜನತೆಗೆ ಗುಡ್‌ನ್ಯೂಸ್: ಭಾರೀ ಇಳಿಕೆ ಕಂಡ ಕೊರೊನಾ ಸೋಂಕು

|
Google Oneindia Kannada News

ಬಳ್ಳಾರಿ, ಜೂನ್ 2: ಗಣಿನಾಡು ಬಳ್ಳಾರಿ ಹಾಗೂ ವಿಜಯನಗರ ಅವಳಿ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರ ಪ್ರಮಾಣದಲ್ಲಿ ಭಾರೀ ಇಳಿಕೆ ಕಂಡುಬಂದಿದೆ. ಈ ಹಿಂದೆ ಪ್ರತಿನಿತ್ಯ 2 ಸಾವಿರಕ್ಕೂ ಅಧಿಕ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗುತ್ತಿದ್ದವು. ಆದರೆ ಇದೀಗ 300ಕ್ಕೆ ಇಳಿಕೆಯಾಗಿದೆ.

ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಮಾಹಾಮಾರಿ ಕೊರೊನಾ ಸೋಂಕಿನ ಚೈನ್‌ಲಿಂಕ್ ಕಟ್ ಮಾಡುವಲ್ಲಿ ಜಿಲ್ಲಾಡಳಿತ ವಿಶೇಷ ಆಸಕ್ತಿ ವಹಿಸಿದೆ. ಅದರ ಪರಿಣಾಮವೇ ಕೊರೊನಾ ಸಂಖ್ಯೆಯಲ್ಲಿ ಇಳಿಮುಖವಾಗಿದೆ.

ಈ ಬೆಳವಣಿಗೆ ಬಳ್ಳಾರಿ ಜನತೆಗೆ ತುಸು ನೆಮ್ಮದಿ ತಂದಿದ್ದರೂ, ಕೊರೊನಾ ಸೋಂಕಿನ ಅಟ್ಟಹಾಸಕ್ಕೆ ಸಂಪೂರ್ಣ ‌ಬ್ರೇಕ್ ಬೀಳಬೇಕಿದೆ. ರಾಜ್ಯ ಆರೋಗ್ಯ ಇಲಾಖೆಯ ಮಂಗಳವಾರದ ವರದಿಯಲ್ಲಿ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ 399 ಪ್ರಕರಣಗಳು ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 1168 ಜನ ಸೊಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 14 ಸೋಂಕಿತರು ಮೃತಪಟ್ಟಿದ್ದಾರೆ.

399 New Coronavirus Positive Cases Reported In Ballari And Vijayanagara District On Tuesday

ಇನ್ನು ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯಲ್ಲಿ 8238 ಸಕ್ರಿಯ ಪ್ರಕರಣಗಳಿದ್ದು, ಇಲ್ಲಿವರೆಗೆ ಒಟ್ಟು 91,863 ಸೊಂಕಿತರು ಪತ್ತೆಯಾಗಿದ್ದು, ಅದರಲ್ಲಿ 82,253 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅದೇ ರೀತಿ ಅವಳಿ ಜಿಲ್ಲೆಯಲ್ಲಿ ಒಟ್ಟು 1352 ಜನ ಸೊಂಕಿತರು ಸಾವನ್ನಪ್ಪಿದ್ದಾರೆ.

English summary
In Tuesday's report, 399 new Covid-19 cases were reported in Ballari and Vijayanagara districts and 1168 people were cured and released from hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X