ಬಳ್ಳಾರಿ : ಮನೆ ಕುಸಿದು ಒಂದೇ ಕುಟುಂಬದ ನಾಲ್ವರ ಸಾವು
ಬಳ್ಳಾರಿ, ಆಗಸ್ಟ್ 14 : ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿಯಲ್ಲಿ ಮನೆ ಕುಸಿದು ಬಿದ್ದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ನಡೆಸಿದೆ. ಇಬ್ಬರು ಮಕ್ಕಳು ಸೇರಿ 4 ಜನರು ಮೃತಪಟ್ಟಿದ್ದು, ಸ್ಥಳೀಯರು ಇಬ್ಬರನ್ನು ರಕ್ಷಣೆ ಮಾಡಿದ್ದಾರೆ.
ಹೂವಿನಹಡಗಲಿ ತಾಲೂಕಿನ ಮಹಾಜನದಹಳ್ಳಿಯಲ್ಲಿ ಶುಕ್ರವಾರ ಮುಂಜಾನೆ 2 ಗಂಟೆ ಸುಮಾರಿಗೆ ಮಣ್ಣಿನ ಮನೆ ಕುಸಿದು ಬಿದ್ದಿದೆ. ಅವಶೇಷಗಳ ಅಡಿ ಸಿಲುಕಿದ್ದ ವೀರಭದ್ರಪ್ಪ ಮತ್ತು ಮಂಜುನಾಥ ಅವರನ್ನು ಸ್ಥಳೀಯರು ಮತ್ತು ಅಗ್ನಿಶಾಮಕದಳದ ಸಿಬ್ಬಂದಿ ರಕ್ಷಣೆ ಮಾಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮನೆಯಲ್ಲಿ ಒಟ್ಟು ಆರು ಜನರಿದ್ದರು ಬುಳ್ಳಮ್ಮ (65), ರತ್ನಮ್ಮ (25), ಈರಮ್ಮ (2) ಕುಸುಮಾ (4) ಅವರು ಅವಶೇಶಗಳ ಅಡಿ ಸಿಲುಕಿ ಮೃತಪಟ್ಟಿದ್ದಾರೆ. ಅಗ್ನಿಶಾಮಕದಳದ ಸಿಬ್ಬಂದಿ ಮಣ್ಣನ್ನು ತೆರೆವುಗೊಳಿಸುತ್ತಿದ್ದು, ಮೃತದೇಹಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇಟ್ಟಗಿ ಪೊಲೀಸರು ಪ್ರಕರಣದ ದಾಖಲಿಸಿಕೊಂಡಿದ್ದಾರೆ. [ಮಹಾರಾಷ್ಟ್ರ : ಕಟ್ಟಡ ಕುಸಿತ ಕನ್ನಡಿಗರ ಸಾವು]












Click it and Unblock the Notifications