• search
  • Live TV
ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಳ್ಳಾರಿಯಲ್ಲಿ ಮತ್ತೆ ನಾಲ್ವರಿಗೆ ಕೊರೊನಾವೈರಸ್ ಸೋಂಕು: 64ಕ್ಕೆ ಏರಿಕೆ‌

By ಬಳ್ಳಾರಿ ಪ್ರತಿನಿಧಿ
|
Google Oneindia Kannada News

ಬಳ್ಳಾರಿ, ಜೂನ್ 7: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಹೊಸದಾಗಿ ನಾಲ್ವರಿಗೆ ಮಹಾಮಾರಿ ಕೊರೊನಾ ವೈರಸ್ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 64ಕ್ಕೇ ಏರಿಕೆಯಾಗಿದೆ.

ನೆರೆಯ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ 54 ವರ್ಷದ (ಪುರುಷ) ಹಾಗೂ ಮಹಾರಾಷ್ಟ್ರ (ಮುಂಬೈ) ಮೂಲದ 45 ವರ್ಷದ (ಮಹಿಳೆ), ಜಿಲ್ಲೆಯ ಸಂಡೂರು ತಾಲೂಕು ತೋರಣಗಲ್ಲಿನ ಜಿಂದಾಲ್ ಒಪಿಜೆ ಸೆಂಟರ್ ನಲ್ಲಿ ಕ್ವಾರಂಟೈನ್ ಇದ್ದ 48 ವರ್ಷದ ಹಾಗೂ 34 ವರ್ಷದವರಿಗೆ ಈ ಕೊರೊನಾ ವೈರಸ್ ಪಾಸಿಟಿವ್ ಇರುವುದು ದೃಢಪಟ್ಟಿದೆ.

ಬಳ್ಳಾರಿಯಲ್ಲಿ ಮೂವರು ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು!ಬಳ್ಳಾರಿಯಲ್ಲಿ ಮೂವರು ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು!

ಈ ನಾಲ್ವರು ಸೋಂಕಿತರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ತಿಳಿಸಿದ್ದಾರೆ.

ಈ ಹಿಂದೆ ಜಿಂದಾಲ್ ಒಪಿಜೆ ಸೆಂಟರ್ ನಲ್ಲಿ ಕ್ವಾರಂಟೈನ್ ಇದ್ದ ವ್ಯಕ್ತಿಯೊಂದಿಗೆ ಮೊದಲ ಸಂಪರ್ಕ ಹೊಂದಿದ್ದ‌ ಈ ಇಬ್ಬರಲ್ಲಿ ಕೊರೊನಾ ಪಾಸಿಟಿವ್ ಬಂದಿದೆ ಎಂದು ಡಿಸಿ ನಕುಲ್ ತಿಳಿಸಿದ್ದಾರೆ.

 ಮತ್ತೊಂದು ಜುಬಿಲಿಯಂಟ್ ಆಗಲಿದೆಯಾ ಬಳ್ಳಾರಿಯ ಜಿಂದಾಲ್... ಮತ್ತೊಂದು ಜುಬಿಲಿಯಂಟ್ ಆಗಲಿದೆಯಾ ಬಳ್ಳಾರಿಯ ಜಿಂದಾಲ್...

ಹೀಗಾಗಿ ಬಳ್ಳಾರಿ ಜಿಲ್ಲೆಯಲ್ಲಿ ಇದುವರೆಗೂ 43 ಮಂದಿ ಗುಣಮುಖರಾಗಿದ್ದು, ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಉಳಿದ ‌20 ಮಂದಿ ಯನ್ನು ಐಸೋಲೇಷನ್ ನಲ್ಲಿ ಇರಿಸಲಾಗಿದೆ.

English summary
Four new cases of coronavirus in Ballary district on sunday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
Desktop Bottom Promotion