• search
 • Live TV
ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

86ಕ್ಕೇರಿದ ಬಳ್ಳಾರಿಯ ಜಿಂದಾಲ್ ಕಾರ್ಖಾನೆ ಸೋಂಕಿತರ ಸಂಖ್ಯೆ

By ಬಳ್ಳಾರಿ ಪ್ರತಿನಿಧಿ
|

ಬಳ್ಳಾರಿ, ಜೂನ್ 11: ಕೊರೊನಾ ವೈರಸ್ ಪ್ರಕರಣಗಳು ಬಳ್ಳಾರಿ ಜಿಲ್ಲೆಯಲ್ಲಿ ಹೆಚ್ಚಾಗುತ್ತಿದ್ದು, ಜಿಲ್ಲೆಗೆ ಜಿಂದಾಲ್ ಉಕ್ಕು ಕಂಪನಿ ಕಂಟಕವಾಗಿ ಪರಿಣಮಿಸಿದೆ. ಇಂದು ಒಂದೇ ದಿನ ಜಿಂದಾಲ್ ನಲ್ಲಿ 46 ಪ್ರಕರಣಗಳು ದಾಖಲಾಗುವ ಮೂಲಕ ಜಿಂದಾಲ್ ನೌಕರರಲ್ಲಿ ಈವರೆಗೂ ದಾಖಲಾಗಿರುವ ಸೋಂಕಿತರ ಸಂಖ್ಯೆ 86ಕ್ಕೆ ಏರಿಕೆ ಆಗಿದೆ.

   Modi addressed the nation for the first time after lockdown been lifted | Narendra Modi

   ಬಳ್ಳಾರಿ ಜಿಲ್ಲೆಯ ತೊರಣಗಲ್ ಬಳಿ ಇರುವ ಜಿಂದಾಲ್ ಸಮೂಹ ಸಂಸ್ಥೆಯಲ್ಲಿ 33 ಸಾವಿರಕ್ಕೂ ಅಧಿಕ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಲಾಕ್ ಡೌನ್ ಆರಂಭ ಆಗಿನಿಂದಲೂ ಜಿಂದಾಲ್ ಕಂಪನಿಯನ್ನು ಸಂಪೂರ್ಣವಾಗಿ ಮುಚ್ಚುವಂತೆ ಸ್ಥಳೀಯರು ಆಗ್ರಹ ಮಾಡಿದ್ದರು. ಆದರೆ ಇಷ್ಟು ದಿನ ಜಿಂದಾಲ್ ನಲ್ಲಿ ಒಂದೇ ಒಂದು ಪ್ರಕರಣ ಪತ್ತೆ ಆಗಿರಲಿಲ್ಲ. ಕಳೆದ ಒಂದು ವಾರದಿಂದ ಜಿಂದಾಲ್ ನಲ್ಲಿ ಕೊರೊನಾ ವೈರಸ್ ಪ್ರಕರಣಗಳು ಕಂಡುಬರುತ್ತಿವೆ.

   ಬಳ್ಳಾರಿಯ ಜಿಂದಾಲ್ ನಲ್ಲಿ ಕೊರೊನಾ ಸ್ಫೋಟ; ಜಿಲ್ಲೆಯಲ್ಲಿ 94ಕ್ಕೇರಿದ ಸೋಂಕಿತರ ಸಂಖ್ಯೆ

   ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 147 ಇದ್ದು, ಇದರಲ್ಲಿ ಜಿಂದಾಲ್ ಸೋಂಕಿತರ ಸಂಖ್ಯೆ 86 ಆಗಿದೆ. ಕಳೆದ ಎರಡು ದಿನಗಳಿಂದ ಜಿಂದಾಲ್ ನಲ್ಲಿ ಸೋಂಕಿತರ ಪ್ರಮಾಣ ಹೆಚ್ಚಳವಾಗುವುದನ್ನು ಗಮನಿಸಿದ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಜಿಂದಾಲ್ ಓಪಿಜಿ ಸೆಂಟರ್ ಗೆ ಅನಿರ್ದಿಷ್ಟ ಕಾಲ ರಜೆ ನೀಡುವಂತೆ ಆದೇಶಿಸಿದ್ದಾರೆ.

   ಜಿಂದಾಲ್ ನಲ್ಲಿ ಸೋಂಕಿತರ ಸಂಖ್ಯೆ ಇನ್ನೂ ಹೆಚ್ಚಳ ಆಗುವ ಮುನ್ಸೂಚನೆಯನ್ನು ಜಿಲ್ಲಾಧಿಕಾರಿ ನೀಡಿದ್ದಾರೆ. ಜಿಂದಾಲ್ ನ ಕಾರ್ಮಿಕರ ಸಂಖ್ಯೆಯನ್ನು ಕಡಿತಗೊಳಿಸಲು ಆದೇಶಿಸಿದ್ದಾರೆ. ಜಿಂದಾಲ್ ಓಪಿಜಿ ಸೆಂಟರ್ ನಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ರಜೆ ನೀಡುವುದರ ಜೊತೆಗೆ ಎಲ್ಲಾ ಸಿಬ್ಬಂದಿ ಹೋಂ ಕ್ವಾರೆಂಟೈನ್ ಆಗಲು ಸೂಚನೆ ನೀಡಲಾಗಿದೆ. ಈಗಾಗಲೇ ಜಿಲ್ಲಾಧಿಕಾರಿ ಜಿಂದಾಲ್‌ ಆಡಳಿತ ಮಂಡಳಿಯ ಜೊತೆ ಸಭೆ ನಡೆಸಿದ್ದು, ಸೋಂಕು ತಡೆಯುವ ನಿಟ್ಟಿನಲ್ಲಿ ಸೂಚನೆ ನೀಡಿದ್ದಾರೆ.

   English summary
   The number of coronavirus positive cases in ballary Jindal employees has so far increased to 86, with 46 cases being reported today.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X