ಹೊಸಪೇಟೆ; ಒಂದೇ ಗ್ರಾಮದ 57 ಜನರಿಗೆ ಕೋವಿಡ್ ಸೋಂಕು
ಹೊಸಪೇಟೆ, ಏಪ್ರಿಲ್ 21; ಕರ್ನಾಟಕ ಸೇರಿ ವಿವಿಧ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ರಾಜ್ಯ ಸರ್ಕಾರ ಕೋವಿಡ್ ಹರಡುವಿಕೆ ತಡೆಯಲು ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಒಂದೇ ಗ್ರಾಮದಲ್ಲಿ 57 ಜನರಿಗೆ ಕೊರೊನಾ ಸೋಂಕು ಧೃಢಪಟ್ಟಿದೆ. ಮರಿಯಮ್ಮನಹಳ್ಳಿ ಹೋಬಳಿಯ ವೆಂಕಟಾಪುರ ಗ್ರಾಮದಲ್ಲಿ ಸೋಂಕು ಕಾಣಿಸಿಕೊಂಡಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಈ ಹಿಂದೆ ಒಂದೇ ಕುಟುಂಬದ 11 ಜನರಿಗೆ ಕೊರೊನಾ ಸೋಂಕು ತಗುಲಿತ್ತು. ಇದರ ಭಾಗವಾಗಿ ಅವರ ಪ್ರಾಥಮಿಕ ಸೋಂಕಿತರಿಗೆ ಪರೀಕ್ಷೆ ಮಾಡಿಸಿದಾಗ ಮತ್ತಷ್ಟು ಜನರಿಗೆ ಸೋಂಕು ಧೃಢಪಟ್ಟಿದೆ.

ಆರೋಗ್ಯ ಇಲಾಖೆ ಅಧಿಕಾರಿಗಳು ವೆಂಕಟಾಪುರ ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ.
ಇಡೀ ಗ್ರಾಮದ ತುಂಬೆಲ್ಲ ಹೊರಗೂ, ಒಳಗೂ ಸ್ಯಾನಿಟೈಸ್ ಮಾಡಲಾಗುತ್ತಿದೆ. ಬ್ಲೀಚಿಂಗ್ ಪೌಡರ್ ಸಿಂಪಡಣೆ ಮಾಡುತ್ತಿದ್ದಾರೆ.

ವೆಂಕಟಾಪುರ ಗ್ರಾಮವನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಸೀಲ್ ಡೌನ್ ಮಾಡಲಾಗಿದೆ. ಗ್ರಾಮಕ್ಕೆ ಯಾರೂ ಸಹ ಬರದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.












Click it and Unblock the Notifications