ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಇಟಿ ಪರೀಕ್ಷೆ ಬರೆಯಲು ಬಂದ ಕೋವಿಡ್ ಸೋಂಕಿತ ವಿದ್ಯಾರ್ಥಿಗಳು

|
Google Oneindia Kannada News

ಬಳ್ಳಾರಿ, ಜುಲೈ 30: ಕೊರೊನಾ ವೈರಸ್ ಸೋಂಕಿನ ಭೀತಿಯ ನಡುವೆಯೇ ಕರ್ನಾಟಕದಲ್ಲಿ ಇಂದು ಸಿಇಟಿ ಪರೀಕ್ಷೆ ನಡೆಯುತ್ತಿದೆ. ಕೋವಿಡ್ ಸೋಂಕಿತ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದ್ದು, ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಗುರುವಾರ ಬಳ್ಳಾರಿ ಜಿಲ್ಲೆಯಲ್ಲಿಯೂ ಸಿಇಟಿ ಪರೀಕ್ಷೆಗಳು ಆರಂಭವಾಗಿದೆ. ಕೊರೊನಾ ವೈರಸ್ ಸೋಂಕು ತಗುಲಿರುವ ವಿದ್ಯಾರ್ಥಿಗಳು ಜಿಲ್ಲೆಯಲ್ಲಿದ್ದಾರೆ. ಅವರಿಗೆ ಸಿಇಟಿ ಪರೀಕ್ಷೆ ಬರೆಯಲು ಜಿಲ್ಲಾಡಳಿತ ಪ್ರತ್ಯೇಕವಾದ ವ್ಯವಸ್ಥೆ ಮಾಡಿಕೊಟ್ಟಿದೆ.

ಸಿಇಟಿ ಬರೆಯುವ ವಿದ್ಯಾರ್ಥಿಗಳಿಗೆ ಸರ್ಕಾರದ ಮಹತ್ವದ ಸೂಚನೆ!ಸಿಇಟಿ ಬರೆಯುವ ವಿದ್ಯಾರ್ಥಿಗಳಿಗೆ ಸರ್ಕಾರದ ಮಹತ್ವದ ಸೂಚನೆ!

ವಿದ್ಯಾರ್ಥಿಗಳಿಗೆ ಕೋವಿಡ್ -19 ಸೋಂಕು ಇದ್ದರೆ ಸಿಇಟಿ ಪರೀಕ್ಷೆ ಬರೆಯಲು ಬಳ್ಳಾರಿಯ ಸರ್ಕಾರಿ ದಂತ ವೈದ್ಯಕೀಯ ಕಾಲೇಜಿನಲ್ಲಿ ಅವಕಾಶ ನೀಡಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪಿಪಿಇ ಕಿಟ್, ಮಾಸ್ಕ್‌ಗಳನ್ನು ಜಿಲ್ಲಾಡಳಿತವೇ ಪೂರೈಕೆ ಮಾಡಲಿದೆ.

ಕೋವಿಡ್ ಸೋಂಕಿದ್ದರೂ ಸಿಇಟಿ ಬರೆಯಲು ಅವಕಾಶ!ಕೋವಿಡ್ ಸೋಂಕಿದ್ದರೂ ಸಿಇಟಿ ಬರೆಯಲು ಅವಕಾಶ!

6 COVID 19 Positive Students To Write CET Exam In Ballari

ಬಳ್ಳಾರಿ, ಸಿರಗುಪ್ಲ ಹಾಗೂ ಹಡಗಲಿಯ ತಲಾ‌‌ ಇಬ್ಬರು ಕೊರೊನಾ‌ ಸೋಂಕಿತ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 6 ಜನ ಕೊರೊನಾ ಪಾಸಿಟಿವ್ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಜಿಲ್ಲಾಡಳಿತ ಅನುಕೂಲ ಮಾಡಿಕೊಟ್ಟಿದೆ.

ಸಿಇಟಿ ಪರೀಕ್ಷೆಗೆ ಬರುವ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಸೂಚನೆಸಿಇಟಿ ಪರೀಕ್ಷೆಗೆ ಬರುವ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಸೂಚನೆ

ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಅಂಬ್ಯುಲೆನ್ಸ್ ಮೂಲಕ ಅವರನ್ನು ‌ಕರೆತರಲಾಗಿದೆ. ಅತ್ಯಂತ ಸುರಕ್ಷಿತವಾಗಿ ಅವರಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ.

English summary
6 COVID - 19 positive students will write CET exam in Ballari district. Ballari district administration will provide PPE kit, mask for the students.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X