ಬಳ್ಳಾರಿ : ಮನೆಯ ಗೋಡೆ ಕುಸಿದು 6 ಜನರ ಸಾವು

ಬಳ್ಳಾರಿ, ಜ.10 : ಶಿಥಿಲಗೊಂಡಿದ್ದ ಮನೆಯ ಮೇಲ್ಛಾವಣಿ ಮತ್ತು ಗೋಡೆ ಕುಸಿದು ಬಿದ್ದು ಮನೆಯಲ್ಲಿ ಮಲಗಿದ್ದ 6 ಜನರು ಸಾವನ್ನಪ್ಪಿದ ಘಟನೆ ಕೊಟ್ಟೂರಿನಲ್ಲಿ ನಡೆದಿದೆ. ಮೃತರಲ್ಲಿ ನಾಲ್ವರು ಮಕ್ಕಳು ಸೇರಿದ್ದು, ಎಲ್ಲರ ಶವಗಳನ್ನು ಹೊರತೆಗೆಯಲಾಗಿದೆ.

ಶನಿವಾರ ಮುಂಜಾನೆ 3 ಗಂಟೆ ಸುಮಾರಿಗೆ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೊಟ್ಟೂರು ಪಟ್ಟಣದಲ್ಲಿ ಈ ದಾರುಣ ಘಟನೆ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಅವಶೇಷಗಳ ಅಡಿ ಸಿಲುಕಿದ್ದ 6 ಶವಗಳನ್ನು ಹೊರತೆಗೆದಿದ್ದಾರೆ.

House

ಮೃತರನ್ನು ಖುಷಿ (2), ಹುಲಿಗೆಮ್ಮ (3), ತನು (5), ನೇತ್ರಾ (12), ಮಂಜಮ್ಮ (35) ಹಾಗೂ ಹನುಮಂತಮ್ಮ (65) ಎಂದು ಗುರುತಿಸಲಾಗಿದೆ. ಕೊಟ್ಟೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು,ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿದ್ದಾರೆ.

ಈ ಮನೆ ಸುಮಾರು 60 ವರ್ಷ ಹಳೆಯದು ಎಂದು ಸ್ಥಳೀಯರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಮನೆಯ ಮೇಲ್ಛಾವಣಿ ಮತ್ತು ಗೋಡೆಗಳು ಶಿಥಿಲಗೊಂಡಿದ್ದವು. ಇಂದು ಏಕಾಏಕಿ ಮನೆಯ ಗೋಡೆ ಮತ್ತು ಮೇಲ್ಛಾವಣಿ ಕುಸಿದು ಬಿದಿದ್ದು, ಮನೆಯಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+