ಬಳ್ಳಾರಿಯಲ್ಲಿ ಶುಕ್ರವಾರ 65 ಕೊರೊನಾ ವೈರಸ್ ಪ್ರಕರಣ ಪತ್ತೆ
ಬಳ್ಳಾರಿ, ಜೂನ್ 19: ಬಳ್ಳಾರಿ ಜಿಲ್ಲೆಯಲ್ಲಿ ಶುಕ್ರವಾರ ಒಂದೇ ದಿನ 65 ಹೊಸ ಕೊರೊನಾ ವೈರಸ್ ಪಾಸಿಟಿವ್ ಕೇಸ್ ಗಳು ದೃಢಪಟ್ಟಿವೆ.
Recommended Video
ಪಾಕಿಸ್ತಾನದ ಆರಂಭಿಕ ಆಟಗಾರನಿಗೆ ರೋಹಿತ್ ಶರ್ಮ ರೋಲ್ ಮಾಡೆಲ್ | Rohit Sharma | Oneindia Kannada
ಇಂದಿನ ಹೊಸ 65 ಪ್ರಕರಣಗಳ ಪೈಕಿ 45 ಕ್ಕೂ ಹೆಚ್ಚು ಜಿಂದಾಲ್ ಕಂಪನಿಯ ನೌಕರರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ.
ಆ ಮೂಲಕ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲಿನ ಜಿಂದಾಲ್ ಸಮೂಹ ಸಂಸ್ಥೆಯಲ್ಲಿ ಕೊರೊನಾ ವೈರಸ್ ಸೋಂಕಿತ ನೌಕರರ ಸಂಖ್ಯೆ 244 ಕ್ಕೆ ಮುಟ್ಟಿದೆ.

ಇಂದಿನ ಹೊಸ 65 ಪ್ರಕರಣಗಳಿಂದ ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 402 ಕ್ಕೆ ಏರಿಕೆಯಾದಂತಾಗಿದೆ. ಆದರೆ ಜಿಂದಾಲ್ ಕಂಪನಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದು ಬಳ್ಳಾರಿ ಜಿಲ್ಲಾಡಳಿತಕ್ಕೆ ದೊಡ್ಡ ಆತಂಕ ತಂದೊಡ್ಡಿದೆ.
ಬಳ್ಳಾರಿ ಜಿಲ್ಲೆಯಲ್ಲಿ ಇದುವರೆಗೆ 100 ಸೋಂಕಿತರು ಗುಣಮುಖರಾಗಿದ್ದು, ಎರಡು ಜನ ಸಾವನ್ನಪ್ಪಿದ್ದಾರೆ. 300 ಜನ ಮಹಾಮಾರಿ ಕೊರೊನಾ ವೈರಸ್ ಸೋಂಕಿತರು ಜಿಲ್ಲಾ ಕೋವಿಡ್-19 ಆಸ್ಪತ್ರೆಯ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.












Click it and Unblock the Notifications