ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಳ್ಳಾರಿಯಲ್ಲಿ ಬುಧವಾರ 69 ಕೊರೊನಾ ವೈರಸ್ ಸೋಂಕು ಪತ್ತೆ

By ಬಳ್ಳಾರಿ ಪ್ರತಿನಿಧಿ
|
Google Oneindia Kannada News

ಬಳ್ಳಾರಿ, ಜೂನ್ 17: ಬಳ್ಳಾರಿ ಜಿಲ್ಲೆಯಲ್ಲಿ ಬುಧವಾರ 69 ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು, ಬಳ್ಳಾರಿ ಜಿಲ್ಲೆಯ ಜನರ ಆತಂಕ ಇನ್ನಷ್ಟು ಹೆಚ್ಚಾಗಿದೆ.

ಈ ಬಗ್ಗೆ ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ಹೆಲ್ತ್ ಬುಲೆಟಿನ್ ನಲ್ಲಿ ಅಧಿಕೃತ ಮಾಹಿತಿ ನೀಡಿದ್ದು, ಇಂದು ಪತ್ತೆಯಾಗಿರುವ ೬೯ ಕೊರೊನಾ ವೈರಸ್ ಸೋಂಕುಗಳಲ್ಲಿ ಜಿಂದಾಲ್ ಕಾರ್ಖಾನೆಯದ್ದು ಸಿಂಹಪಾಲು ಇದೆ ಎಂದಿದ್ದಾರೆ.

ಬೆಳಗಾವಿ ಜಿಲ್ಲೆಯಾದ್ಯಂತ ಮುಂಗಾರು ಅಬ್ಬರ: ಕರ್ನಾಟಕ-ಗೋವಾ ರಸ್ತೆ ಸಂಪರ್ಕ ಕಡಿತಬೆಳಗಾವಿ ಜಿಲ್ಲೆಯಾದ್ಯಂತ ಮುಂಗಾರು ಅಬ್ಬರ: ಕರ್ನಾಟಕ-ಗೋವಾ ರಸ್ತೆ ಸಂಪರ್ಕ ಕಡಿತ

ನಿನ್ನೆ 146 ಸೋಂಕು ಪ್ರಕರಣಗಳು ಇದ್ದ ಜಿಂದಾಲ್ ನಲ್ಲಿ ಇಂದು 22 ಹೊಸ ಕೊರೊನಾ ಸೋಂಕುಗಳು ಪತ್ತೆಯಾಗಿವೆ. ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 319 ಕೊರೊನಾ ಪಾಸಿಟಿವ್ ಪ್ರಕರಣಗಳು ಇದ್ದು, ಅದರಲ್ಲಿ ಜಿಂದಾಲ್ ಕಾರ್ಖಾನೆಯ ಸೋಂಕಿತರ ಸಂಖ್ಯೆ 178.

69 New Coronavirus Infection Detected In Ballary District On Wednesday

ಈ ನಡುವೆಯೇ ಬಳ್ಳಾರಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 37 ಜನರು ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ 225 ಪ್ರಕರಣಗಳು ಸಕ್ರಿಯವಾಗಿವೆ. ಬುಧವಾರ ಕೋವಿಡ್ ಜಿಲ್ಲಾಸ್ಪತ್ರೆಯಿಂದ 37 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೆ ಬಳ್ಳಾರಿಯಲ್ಲಿ 92 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

English summary
69 New Coronavirus infection was detected in Ballary district on Wednesday and people in Bellary district are worried.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X