ಗಣಿಜಿಲ್ಲೆಯಲ್ಲಿ ಇಂದು ಒಂದೇ ದಿನ ಕೊರೊನಾ ಸೋಂಕಿಗೆ ಎಂಟು ಬಲಿ

ಬಳ್ಳಾರಿ, ಜೂನ್ 29: ಬಳ್ಳಾರಿ ಜಿಲ್ಲೆಯಲ್ಲಿ ಇಂದು ಒಂದೇ ದಿನ ಕೊರೊನಾ ಸೋಂಕಿಗೆ ಎಂಟು ಮಂದಿ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.

ನೆರೆಯ ಆಂಧ್ರಪ್ರದೇಶ ಮೂಲದ ಕರ್ನೂಲ್ ಜಿಲ್ಲೆಯ 52 ವರ್ಷದ ಮಹಿಳೆ, ಕೊಪ್ಪಳ ಜಿಲ್ಲೆಯ ರಂಗಾಪುರ ಕ್ಯಾಂಪಿನ 43 ವರ್ಷದ ಪುರುಷ, ಹೊಸಪೇಟೆ ತಾಲೂಕಿನ ಧರ್ಮಸಾಗರದ 56 ವರ್ಷದ ಪುರುಷ, ಹೊಸಪೇಟೆಯ ಆಜಾದ ನಗರದ 66ರ ವೃದ್ಧ ಸೇರಿದಂತೆ ಇಂದು ಒಂದೇ ದಿನ ಎಂಟು ಮಂದಿ ಸಾವನ್ನಪ್ಪಿದ್ದಾರೆಂದು ಜಿಲ್ಲಾಧಿಕಾರಿ ನಕುಲ್ ಮಾಹಿತಿ ನೀಡಿದ್ದಾರೆ.

8 Deaths Cases Reported In Single Day At Ballari Due To Coronavirus

ತೀವ್ರ ಉಸಿರಾಟದ ತೊಂದರೆ, ಜ್ವರ ಮತ್ತು ಕೆಮ್ಮು- ನೆಗಡಿಯಿಂದ ಬಳಲುತ್ತಿದ್ದ ಈ ಎಂಟು ಮಂದಿಯನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಎಸ್ ಒಪಿ ಪ್ರಕಾರ ಈ ಎಂಟು ಮಂದಿ ಅಂತ್ಯಕ್ರಿಯೆಯನ್ನು ನಡೆಸಲಾಗುವುದೆಂದು ಜಿಲ್ಲಾಧಿಕಾರಿ ನಕುಲ್ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+