ಬಳ್ಳಾರಿ; ತುಂಗಭದ್ರಾ ಜಲಾಶಯಕ್ಕೆ ಒಂದೇ ದಿನ 6 ಟಿಎಂಸಿ ನೀರು ಸಂಗ್ರಹ
ಬಳ್ಳಾರಿ, ಆಗಸ್ಟ್ 07: ಬಳ್ಳಾರಿ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ಒಳಹರಿವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಒಂದೇ ದಿನ ಅಂದಾಜು 6 ಟಿಎಂಸಿಯಷ್ಟು ನೀರು ಸಂಗ್ರಹವಾಗಿದೆ.
ಕಳೆದ ಬಾರಿಗೆ ಹೋಲಿಕೆ ಮಾಡಿದರೆ ಈ ಬಾರಿ ದುಪ್ಪಟ್ಟು ಪ್ರಮಾಣದಲ್ಲಿ ನೀರಿನ ಒಳಹರಿವು ಹೆಚ್ಚಾಗಿದೆ. ಕಳೆದ ವರ್ಷ ಈ ದಿನಕ್ಕೆ ಅಂದಾಜು 40781 ಕ್ಯೂಸೆಕ್ ನೀರು ಹರಿದುಬಂದಿತ್ತು. ಈ ವರ್ಷ ಈ ದಿನಕ್ಕೆ 81218 ಕ್ಯೂಸೆಕ್ ನೀರು ಹರಿದುಬಂದಿದೆ.
ಅಂದರೆ ಸರಿಸುಮಾರು ಆರು ಟಿಎಂಸಿಯಷ್ಟು ನೀರು ಸಂಗ್ರಹಗೊಂಡಿದೆ. ನಿನ್ನೆಯ ದಿನಕ್ಕೆ 17858 ಕ್ಯೂಸೆಕ್ ನೀರು ಹರಿದು ಬಂದಿದೆ. ಮೊನ್ನೆಯ ದಿನಕ್ಕೆ ಕೇವಲ 4446 ಕ್ಯೂಸೆಕ್ ನೀರು ಜಲಾಶಯಕ್ಕೆ ಒಳಹರಿವು ದಾಖಲಾಗಿತ್ತು. ಕಳೆದ 11 ದಿನಗಳಿಂದಲೂ ಈ ಒಳ ಹರಿವಿನ ಪ್ರಮಾಣ ಕಡಿಮೆಯಾಗಿತ್ತು. ಈಗ ಜಲಾಶಯಕ್ಕೆ ಉತ್ತಮ ಒಳಹರಿವು ದಾಖಲಾಗಿದೆ.

ಶಿವಮೊಗ್ಗದ ಗಾಜನೂರಿನ ತುಂಗಾ ಜಲಾಶಯದಿಂದ ಆಗಸ್ಟ್ 5 ರಿಂದ 57, 600 ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗಿದ್ದು, ಈ ಜಲಾಶಯದ ಒಳಹರಿವಿನ ಪ್ರಮಾಣ ಅಧಿಕವಾಗಿದೆ. ಇನ್ನು ಕೆಲ ದಿನಗಳಲ್ಲಿ ಜಲಾಶಯದ ಒಳಹರಿವು ಇನ್ನಷ್ಟು ಹೆಚ್ಚಳವಾಗಲಿದೆ ಎಂದು ತಿಳಿದುಬಂದಿದೆ.
-
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ












Click it and Unblock the Notifications