ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಳ್ಳಾರಿ; ತುಂಗಭದ್ರಾ ಜಲಾಶಯಕ್ಕೆ ಒಂದೇ ದಿನ 6 ಟಿಎಂಸಿ ನೀರು ಸಂಗ್ರಹ

By ಬಳ್ಳಾರಿ ಪ್ರತಿನಿಧಿ
|
Google Oneindia Kannada News

ಬಳ್ಳಾರಿ, ಆಗಸ್ಟ್‌ 07: ಬಳ್ಳಾರಿ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ಒಳಹರಿವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಒಂದೇ ದಿನ ಅಂದಾಜು 6 ಟಿಎಂಸಿಯಷ್ಟು ನೀರು ಸಂಗ್ರಹವಾಗಿದೆ.

ಕಳೆದ ಬಾರಿಗೆ ಹೋಲಿಕೆ ಮಾಡಿದರೆ ಈ ಬಾರಿ ದುಪ್ಪಟ್ಟು ಪ್ರಮಾಣದಲ್ಲಿ ನೀರಿನ ಒಳಹರಿವು ಹೆಚ್ಚಾಗಿದೆ.‌ ಕಳೆದ ವರ್ಷ ಈ ದಿನಕ್ಕೆ ಅಂದಾಜು 40781 ಕ್ಯೂಸೆಕ್ ನೀರು ಹರಿದುಬಂದಿತ್ತು.‌‌ ಈ ವರ್ಷ ಈ‌ ದಿನಕ್ಕೆ 81218 ಕ್ಯೂಸೆಕ್ ನೀರು ಹರಿದುಬಂದಿದೆ.

ಹರಿಹರದಲ್ಲಿ ಪ್ರವಾಹ ಭೀತಿ; ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆಹರಿಹರದಲ್ಲಿ ಪ್ರವಾಹ ಭೀತಿ; ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

ಅಂದರೆ ಸರಿಸುಮಾರು ಆರು ಟಿಎಂಸಿಯಷ್ಟು ನೀರು ಸಂಗ್ರಹಗೊಂಡಿದೆ. ನಿನ್ನೆಯ ದಿನಕ್ಕೆ 17858 ಕ್ಯೂಸೆಕ್ ನೀರು ಹರಿದು ಬಂದಿದೆ.‌ ಮೊನ್ನೆಯ ದಿನಕ್ಕೆ ಕೇವಲ 4446 ಕ್ಯೂಸೆಕ್ ನೀರು ಜಲಾಶಯಕ್ಕೆ ಒಳಹರಿವು ದಾಖಲಾಗಿತ್ತು. ಕಳೆದ 11 ದಿನಗಳಿಂದಲೂ ಈ ಒಳ ಹರಿವಿನ ಪ್ರಮಾಣ ಕಡಿಮೆಯಾಗಿತ್ತು. ಈಗ ಜಲಾಶಯಕ್ಕೆ ಉತ್ತಮ ಒಳಹರಿವು ದಾಖಲಾಗಿದೆ.

 Ballari: 81218 Cusecs Of Water Inflow At Tungabhadra Dam

ಶಿವಮೊಗ್ಗದ ಗಾಜನೂರಿನ ತುಂಗಾ ಜಲಾಶಯದಿಂದ ಆಗಸ್ಟ್ 5 ರಿಂದ 57, 600 ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗಿದ್ದು, ಈ‌ ಜಲಾಶಯದ ಒಳಹರಿವಿನ ಪ್ರಮಾಣ ಅಧಿಕವಾಗಿದೆ. ಇನ್ನು ಕೆಲ ದಿನಗಳಲ್ಲಿ ಜಲಾಶಯದ ಒಳಹರಿವು ಇನ್ನಷ್ಟು ಹೆಚ್ಚಳವಾಗಲಿದೆ ಎಂದು ತಿಳಿದುಬಂದಿದೆ.

English summary
6 TMC of water flowed into tungabhadra dam in ballari today
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X