ಬಳ್ಳಾರಿ; 828 ಮದ್ರಾಸ್ ಐ ಪ್ರಕರಣ ದಾಖಲು, ಮುಂಜಾಗ್ರತಾ ಕ್ರಮಗಳು
ಬಳ್ಳಾರಿ, ಆಗಸ್ಟ್ 07; ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿರುವ ಕಣ್ಣಿನ ಉರಿಊತ (ಮದ್ರಾಸ್ ಐ) ಸೋಂಕಿನ ಪ್ರಕರಣಗಳು ಬಳ್ಳಾರಿ ಜಿಲ್ಲೆಯಲ್ಲಿಯೂ ಪತ್ತೆಯಾಗಿವೆ. ಸಾರ್ವಜನಿಕರು ಅಗತ್ಯ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಹೆಚ್. ಎಲ್. ಜನಾರ್ಧನ ಕರೆ ನೀಡಿದ್ದಾರೆ.
ಆರೋಗ್ಯ ಇಲಾಖೆಯ ಮಾಹಿತಿಯಂತೆ ಜಿಲ್ಲೆಯಲ್ಲಿ ಇಲ್ಲಿಯವರೆಗೆ 828 ಪ್ರಕರಣಗಳು ವರದಿಯಾಗಿವೆ. ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗದಿಂದ ನಿರಂತರವಾಗಿ ಈ ಬಗ್ಗೆ ನಿಗಾವಹಿಸಲಾಗಿದೆ. ಯಾವುದೇ ಗಂಭೀರ ಪ್ರಕರಣಗಳು ಇಲ್ಲಿಯವರೆಗೂ ವರದಿಯಾಗಿಲ್ಲ. ಜನರಿಗೆ ಜಾಗೃತಿ ಮೂಡಿಸಲು ಕ್ಷೇತ್ರ ಮಟ್ಟದ ಸಿಬ್ಬಂದಿಯವರು ಸಭೆ, ಸಮಾರಂಭಗಳಲ್ಲಿ, ಗುಂಪುಸಭೆಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ನೀಡುತ್ತಿದ್ದಾರೆ.

ಬಳ್ಳಾರಿ ಜಿಲ್ಲೆಯಲ್ಲಿ ಇಲ್ಲಿಯವರೆಗೆ 828 ಪ್ರಕರಣಗಳು ವರದಿಯಾಗಿವೆ. ಇವುಗಳಲ್ಲಿ ಬಳ್ಳಾರಿ 335, ಸಿರುಗುಪ್ಪ109, ಕುರುಗೋಡು 56, ಸಂಡೂರು 186, ಕಂಪ್ಲಿ 142 ಪ್ರಕರಣಗಳು ವರದಿಯಾಗಿವೆ. ಜನರು ಸೋಂಕಿನಿಂದ ಪಾರಾಗಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಡಾ. ಹೆಚ್. ಎಲ್. ಜನಾರ್ಧನ ಮಾಹಿತಿ ನೀಡಿದ್ದಾರೆ.
ಮುಂಜಾಗ್ರತಾ ಕ್ರಮಗಳು; ಮದ್ರಾಸ್ ಐ ಎಂದು ಬಳಕೆಯಲ್ಲಿರುವ conjunctivitis ಒಂದು ವೈರಸ್‍ನಿಂದ ಹರಡುವ ಕಾಯಿಲೆಯಾಗಿದೆ. ಸೋಂಕು ಬಹುತೇಕ ತೇವಾಂಶ ಹೆಚ್ಚಾದಾಗ ಅಥವಾ ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ಈ ಸಮಸ್ಯೆ ಪ್ರಸ್ತುತ ಕಂಡುಬಂದಿದೆ. ಚಳಿಯ ವಾತಾವರಣದಲ್ಲಿ ಹುಟ್ಟಿಕೊಳ್ಳುವ ಈ ವೈರಾಣುಗಳು ವೇಗವಾಗಿ ಹರಡುತ್ತವೆ. ಹಿರಿಯರಿಗಿಂತಲೂ ಮಕ್ಕಳಲ್ಲಿ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ.
ಸಾಮಾನ್ಯವಾಗಿ 3 ರಿಂದ 5 ದಿನಗಳವರೆಗೆ ಕಣ್ಣಿನ ಸೋಂಕು ಕಂಡುಬಂದು ಕಡಿಮೆಯಾಗುತ್ತದೆ. ಮುಂಜಾಗೃತ ಕ್ರಮವಾಗಿ ಜಿಲ್ಲೆಯ ಎಲ್ಲಾ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಔಷಧಿ ದಾಸ್ತಾನು ಮಾಡಿಕೊಳ್ಳಲಾಗಿದೆ. ಸಾರ್ವಜನಿಕರು ಕಣ್ಣಿನ ಸೋಂಕು ಕಂಡುಬಂದಲ್ಲಿ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯಬೇಕು ಎಂದು ಮನವಿ ಮಾಡಲಾಗಿದೆ.
ಕಣ್ಣಿನ ಬಿಳಿಭಾಗವನ್ನು ಆವರಿಸುವ ಕಣ್ಣಿನ ಮುಂಭಾಗದಲ್ಲಿ ಇರುವ ಪದರದ ಸೋಂಕಿಗೆ (ಉರಿಊತ) ಇದಕ್ಕೆ ಕಂಜಕ್ಟವೈಟೀಸ್ ಎನ್ನುತ್ತಾರೆ. ಸೋಂಕಿತ ವ್ಯಕ್ತಿಯ ಕಣ್ಣಿನಿಂದ ಬರುವ ದ್ರವದ ಸಂಪರ್ಕದಿಂದ ಆರೋಗ್ಯವಂತ ವ್ಯಕ್ತಿಗೆ ಹರಡುತ್ತದೆ. ಸೋಂಕಿತ ವ್ಯಕ್ತಿಗಳು ಕಪ್ಪು ಕನ್ನಡಕ ಬಳಸುವುದರಿಂದ ಬೇರೆಯವರಿಗೆ ಸೋಂಕು ಹರಡುವುದನ್ನು ತಡೆಗಟ್ಟಬಹುದು.
ಹೆಚ್ಚು ಜನಸಂದಣಿ ಇರುವ ಪ್ರದೇಶಗಳಲ್ಲಿ ಕಂಡುಬರುತ್ತಿದ್ದು, ವಿಶೇಷವಾಗಿ ಶಾಲಾ, ಕಾಲೇಜು ವಸತಿ ನಿಲಯಗಳಲ್ಲಿ ಮತ್ತು ಅತಿಥಿ ಗೃಹಗಳಲ್ಲಿ (ಪಿಜಿ) ಈ ಸೋಂಕು ಬೇಗ ಹರಡುವ ಸಾಧ್ಯತೆ ಹೆಚ್ಚು ಇರುತ್ತದೆ. 3 ರಿಂದ 5 ದಿನಗಳಲ್ಲಿ ಗುಣಮುಖವಾಗುತ್ತದೆ ಹಾಗೂ ಎಲ್ಲಾ ವಯಸ್ಸಿನವರಲ್ಲಿ ಈ ಸೋಂಕು ಕಂಡುಬರುತ್ತದೆ.
ಕಣ್ಣು ಕೆಂಪಾಗುವಿಕೆ, ನೀರು ಸೋರುವಿಕೆ, ಅತಿಯಾದ ಕಣ್ಣೀರು, ಕಣ್ಣಿನಲ್ಲಿ ತುರಿಕೆ, ಸತತ ಕಣ್ಣು ನೋವು ಹಾಗೂ ಚುಚ್ಚುವಿಕೆ, ಬೆಳಕನ್ನು ನೋಡಲು ಸಾಧ್ಯವಾಗದಿರುವುದು, ದೃಷ್ಟಿ ಮುಸುಕಾಗುವುದು ಅಥವಾ ಮಂಜಾಗುವುದು, ಕಣ್ಣಿನ ಎರಡು ರೆಪ್ಪೆಗಳು ಕೀವು ಮಿಶ್ರಿತ ದ್ರವದಿಂದ ಅಂಟಿರುವುದು ಈ ಸೋಂಕಿನ ಲಕ್ಷಣಗಳು.
ಜನರು ಶುಚಿಯಾದ ಒದ್ದೆ ಮಾಡಿದ ಬಟ್ಟೆ ಅಥವಾ ಹತ್ತಿಯ ಉಂಡೆಗಳಿಂದ ಉಗುರು ಬೆಚ್ಚಗಿನ ನೀರಿನಿಂದ ಕಣ್ಣುಗಳನ್ನು ಸ್ವಚ್ಛಗೊಳಿಸಬೇಕು. ವೈದ್ಯರ ಸಲಹೆ ಮೇರೆಗೆ ಔಷಧಿಗಳನ್ನು ಬಳಸಬೇಕು. ಮುಖ್ಯೋಪಾಧ್ಯಯರುಗಳು ಶಾಲಾ ವಿದ್ಯಾರ್ಥಿ ಅಥವಾ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸೋಂಕು ಕಂಡುಬಂದಲ್ಲಿ ಅವರನ್ನು ಶಾಲೆಯಿಂದ ಪ್ರತ್ಯೇಕಿಸಿ ಚಿಕಿತ್ಸೆ ನೀಡಬೇಕು. ಸೋಂಕಿತ ವ್ಯಕ್ತಿಯು ಬಳಸಿದ ಕರವಸ್ತ್ರ ಹಾಗೂ ಇತರೆ ವಸ್ತುಗಳನ್ನು ಬೇರೆಯವರು ಬಳಸಬಾರದು. ಪದೇ ಪದೇ ಕಣ್ಣುಗಳನ್ನು ಮುಟ್ಟಬಾರದು.
ಸ್ವಚ್ಛವಾದ ನೀರಿನಿಂದ ಕಣ್ಣುಗಳನ್ನು ಶುಚಿಗೊಳಿಸಬೇಕು, ಸೋಂಕು ಕಂಡುಬಂದ ತಕ್ಷಣ ವೈದ್ಯರಿಂದ ಚಿಕಿತ್ಸೆ/ ಸಲಹೆ ಪಡೆಯಬೇಕು, ಸೋಂಕಿತ ವ್ಯಕ್ತಿಗಳು ಪೌಷ್ಠಿಕ ಆಹಾರ ಸೇವನೆ ಮಾಡಬೇಕು, ಸೋಂಕಿತ ವ್ಯಕ್ತಿಗಳು ಬಳಸಿದ ಕರವಸ್ತ್ರ, ಟವೆಲ್, ಇನ್ನಿತರೆ ವಸ್ತುಗಳನ್ನು ಸಂಸ್ಕರಿಸಿ ಬಳಸಬೇಕು. ಕೈಗಳಿಂದ ಪದೇ ಪದೇ ಕಣ್ಣುಗಳನ್ನು ಮುಟ್ಟಬಾರದು, ಸ್ವಯಂ ಚಿಕಿತ್ಸಾ ವಿಧಾನಗಳನ್ನು ಮಾಡಬಾರದು, ಸೋಂಕಿತ ವ್ಯಕ್ತಿಯ ಸನಿಹದಿಂದ ದೂರವಿರಬೇಕು, ಸೋಂಕಿತ ವ್ಯಕ್ತಿಗಳು ಬಳಸಿದ ವಸ್ತುಗಳನ್ನು ಮುಟ್ಟಬಾರದು ಎಂದು ಸಲಹೆ ನೀಡಲಾಗಿದೆ.
-
Vastu Tips: ಈ ವಾಸ್ತು ಟಿಪ್ಸ್ ಪಾಲಿಸಿದರೆ ಧನ ಮತ್ತು ಯಶಸ್ಸು ನಿಮ್ಮದೇ -
Vastu Tips: ವಾಸ್ತು ಪ್ರಕಾರ ನಮ್ಮ ಮನೆಯ ಸುತ್ತಮುತ್ತಲಿನ ವಿನ್ಯಾಸ ಹೇಗಿರಬೇಕು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ












Click it and Unblock the Notifications