ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಸ್ಪೋಟ: ಬಳ್ಳಾರಿಯಲ್ಲಿ 840, ರಾಮನಗರದಲ್ಲಿ 100 ಪ್ರಕರಣ ದೃಢ

By ಬಳ್ಳಾರಿ ಪ್ರತಿನಿಧಿ
|
Google Oneindia Kannada News

ಬಳ್ಳಾರಿ, ಜುಲೈ 27: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ವೈರಸ್ ದಾಖಲೆ ಬರೆದಿದ್ದು, ಜಿಲ್ಲೆಯಲ್ಲಿ ಇಂದು ಒಂದೇ ದಿನ 840 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಇಂದಿನ ಕೊರೊನಾ ವೈರಸ್ ಸ್ಪೋಟದಿಂದಾಗಿ ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4886 ಕ್ಕೆ ಏರಿಕೆಯಾಗಿದೆ. ಇದರ ಜೊತೆ ಸಾವಿನ ಸರಣಿಯೂ ಮುಂದುವರಿದಿದ್ದು, ಇಂದು ಕೊರೊನಾ ಮಹಾಮಾರಿಗೆ 7 ಜನರು ಅಸುನೀಗಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 82 ಕ್ಕೆ ಏರಿದೆ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ಅವರು ಅಧಿಕೃತ ಮಾಹಿತಿ ನೀಡಿದ್ದಾರೆ.

ಅರಣ್ಯ ಸಚಿವ ಅನಂದ್ ಸಿಂಗ್ ಅವರಿಗೂ ಕೊರೊನಾ ಸೋಂಕು ದೃಢಅರಣ್ಯ ಸಚಿವ ಅನಂದ್ ಸಿಂಗ್ ಅವರಿಗೂ ಕೊರೊನಾ ಸೋಂಕು ದೃಢ

ರಾಮನಗರದಲ್ಲಿ ಇಂದು ಶತಕ ಬಾರಿಸಿದ ಕೊರೊನಾ ವೈರಸ್

ರಾಮನಗರ ಜಿಲ್ಲೆಯಲ್ಲಿ ಕೊರೊನಾ ವೈರಸ್ ಆರ್ಭಟ ಜೋರಾಗಿದ್ದು, ಇಂದು ಒಂದೇ ದಿನ 100 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಮನಗರ ಜಿಲ್ಲಾ ಹೆಲ್ತ್ ಬುಲೆಟಿನ್ ಬಿಡುಗಡೆಯಲ್ಲಿ ಈ ವರದಿ ಬಂದಿದ್ದು, ಜಿಲ್ಲೆಯ ಜನತೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

840 New Coronavirus Infection Cases Reported In Ballary District

ಇಂದು ಚನ್ನಪಟ್ಟಣ ತಾಲ್ಲೂಕಿನಲ್ಲಿ-15, ರಾಮನಗರ ತಾಲೂಕಿನಲ್ಲಿ-51, ಮಾಗಡಿ ತಾಲೂಕಿನಲ್ಲಿ-20, ಕನಕಪುರ ತಾಲೂಕಿನಲ್ಲಿ-14 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 830 ಕ್ಕೆ ಏರಿಕೆಯಾಗಿದ್ದು, ಇಂದು ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ.

ಕೊರೊನಾ ಸೋಂಕು ಗೆದ್ದ ಬಳ್ಳಾರಿಯ ಶತಾಯುಷಿ ಅಜ್ಜಿಕೊರೊನಾ ಸೋಂಕು ಗೆದ್ದ ಬಳ್ಳಾರಿಯ ಶತಾಯುಷಿ ಅಜ್ಜಿ

ಇದರಿಂದ ರಾಮನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ 15 ಕ್ಕೆ ಏರಿಕೆಯಾದಂತಾಗಿದೆ. ಇಂದು ಜಿಲ್ಲೆಯಲ್ಲಿ 39 ಮಂದಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

English summary
In Bellary district, 840 Coronavirus Infection cases were reported in a single day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X