ಕೊರೊನಾ ವೈರಸ್: ಬಳ್ಳಾರಿ 874, ರಾಮನಗರ 104, ಚಿತ್ರದುರ್ಗದಲ್ಲಿ 51 ಕೇಸ್ ಪತ್ತೆ

ಬಳ್ಳಾರಿ, ಆಗಸ್ಟ್ 11: ಬಳ್ಳಾರಿ ಜಿಲ್ಲೆಯಲ್ಲಿ ಮಂಗಳವಾರ ಹೊಸದಾಗಿ 874 ಕೊರೊನಾ ವೈರಸ್ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 11,551 ಕ್ಕೆ ಏರಿಕೆಯಾಗಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಮಂಗಳವಾರ ಒಂದೇ ದಿನ 874 ಜನರಿಗೆ ಮಹಾಮಾರಿ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಹೀಗಾಗಿ, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 11 ಸಾವಿರ ಗಡಿ ದಾಟಿದೆ. ಜಿಲ್ಲೆಯಲ್ಲಿ ಈವರೆಗೂ 6258 ಮಂದಿ ಗುಣಮುಖರಾಗಿದ್ದಾರೆ. 121 ಮಂದಿ ಸಾವನ್ನಪ್ಪಿದ್ದಾರೆ. 5172 ಸಕ್ರಿಯ ಪ್ರಕರಣಗಳಿವೆ.

ಇಂದು ಸಹ ಕೊರೊನಾ ಸೋಂಕಿಗೆ ನಾಲ್ಕು ಜನರು ಸಾವನ್ನಪ್ಪಿದ್ದು, 404 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ತಿಳಿಸಿದ್ದಾರೆ.

874 Coronavirus Infection Cases Reported In Ballari District On Tuesday

ರಾಮನಗರ ಜಿಲ್ಲೆಯಲ್ಲಿ 104 ಕೋವಿಡ್-19 ಪ್ರಕರಣ ದೃಢ

ರಾಮನಗರ ಜಿಲ್ಲೆಯಲ್ಲಿ ಇಂದು 104 ಕೊರೊನಾ ಸೋಂಕಿತ ಪ್ರಕರಣ‌ ದೃಢಪಟ್ಟಿದ್ದು, ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಶತಕ ಬಾರಿಸಿದ್ದು ಜಿಲ್ಲೆಯ ಜನರಲ್ಲಿ ಅತಂಕ ಮೂಡಿಸಿದೆ.

ರಾಮನಗರ ಜಿಲ್ಲೆಯ ನಾಲ್ಕು ತಾಲ್ಲೂಕುಗಳಾದ ಚನ್ನಪಟ್ಟಣ-10, ಕನಕಪುರ -28, ಮಾಗಡಿ-4 ಮತ್ತು ರಾಮನಗರ-62 ಕೊರೊನಾ ಸೋಂಕು ಪ್ರಕರಣಗಳು ಸೇರಿ, ಇಂದು ಒಟ್ಟು 104 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ.

ಎಲ್ಲಾ ಸೋಂಕಿತರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ 1850 ಕೊರೊನಾ ಸೋಂಕಿತ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ-405, ಕನಕಪುರ-374, ಮಾಗಡಿ-317 ಮತ್ತು ರಾಮನಗರ-754 ಪ್ರಕರಣಗಳು ದೃಢಪಟ್ಟಿವೆ.

874 Coronavirus Infection Cases Reported In Ballari District On Tuesday

ಚಿತ್ರದುರ್ಗ ಜಿಲ್ಲೆಯಲ್ಲಿ 51 ಜನರಿಗೆ ಕೋವಿಡ್ ಸೋಂಕು ದೃಢ

ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ಗೆ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ ಮತ್ತೆ 51 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1213 ಕ್ಕೆ ಏರಿಕೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ-07, ಹೊಳಲ್ಕೆರೆ-05, ಹಿರಿಯೂರು-11, ಚಳ್ಳಕೆರೆ-21, ಹೊಸದುರ್ಗ-03 ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 04 ಸೇರಿದಂತೆ ಒಟ್ಟು 51 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದರಿಂದಾಗಿ ಸೋಂಕಿತರ ಸಂಖ್ಯೆ 1213 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 18 ಜನ ಮೃತಪಟ್ಟಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಲವೆಡೆ ಕೋವಿಡ್ ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಮಂಗಳವಾರ 24 ಮಂದಿ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಒಟ್ಟು ಸೋಂಕಿತರ ಪೈಕಿ ಈಗಾಗಲೇ 577 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಜಿಲ್ಲೆಯಲ್ಲಿ ಸದ್ಯ 617 ಸಕ್ರಿಯ ಪ್ರಕರಣಗಳಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+