ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಪ್ಪಾರ ಹೊಸಹಳ್ಳಿಯಲ್ಲಿ ದೇವರಿಗೆ ತನ್ನ ನಾಲಿಗೆಯನ್ನೇ ಕತ್ತರಿಸಿ ದಾನ ಕೊಟ್ಟ ಭೂಪ

ಸಾಮಾನ್ಯವಾಗಿ ಭಕ್ತರು ದೇವರಿಗೆ ಹಣ, ಒಡವೆಗಳನ್ನ ದಾನ ಕೊಡುವುದನ್ನು ನೋಡಿದ್ದೇವೆ. ಆದರೆ ಬಳ್ಳಾರಿ ಜಿಲ್ಲೆಯ "ಆ" ಒಂದು ಹಳ್ಳಿಯಲ್ಲಿ ಭೂಪನೊಬ್ಬ ದೇವರನ್ನು ಒಲಿಸಿಕೊಳ್ಳಲು ತನ್ನ ನಾಲಿಗೆಯನ್ನೇ ಕತ್ತರಿಸಿಕೊಂಡು ದಾನ ಮಾಡಿದ್ದಾನೆ.

By ಬಳ್ಳಾರಿ ಪ್ರತಿನಿಧಿ
|
Google Oneindia Kannada News

ಬಳ್ಳಾರಿ, ಜನವರಿ, 29: ದೇವರನ್ನು ಒಲಿಸಿಕೊಳ್ಳಲು ಭೂಪನೊಬ್ಬ ತನ್ನ ನಾಲಿಗೆಯನ್ನೇ ಕತ್ತರಿಸಿ ದಾನ ಕೊಟ್ಟ ವಿಚಿತ್ರ ಘಟನೆ ಸಿರುಗುಪ್ಪ ತಾಲೂಕಿನ‌ ಉಪ್ಪಾರ ಹೊಸಹಳ್ಳಿಯಲ್ಲಿ ನಡೆದಿದೆ.

ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಉಪ್ಪಾರ ಹೊಸಹಳ್ಳಿ ಗ್ರಾಮದ ವೀರೇಶ್ (24) ಎಂಬಾತ ತನ್ನ ನಾಲಿಗೆಯನ್ನು ಕತ್ತರಿಸಿ ದಾನ ಕೊಟ್ಟಿದ್ದಾನೆ. ಈತ ದೇವರನ್ನು ಒಲಿಸಿಕೊಳ್ಳಲು ಗ್ರಾಮದ ಸಮೀಪದ ಗುಡ್ಡದಲ್ಲಿರುವ ದಂಡೆ ಮಹಂಕಳಿ ಗುಡಿ ಹತ್ತಿರ ಹೋಗಿ ಶಂಕರಪ್ಪ ತಾತನಿಗಾಗಿ ತನ್ನ ನಾಲಿಗೆಯನ್ನು ಚಾಕುವಿನಿಂದ ಕತ್ತರಿಸಿಕೊಂಡಿದ್ದಾನೆ. ಬಳಿಕ ತನ್ನ ತುಂಡಾದ ನಾಲಿಗೆ ಸಮೇತ ವಿಮ್ಸ್ ಆಸ್ಪತ್ರೆಗೆ ಧಾವಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಗಿದೆ. ವೀರೇಶ್‌ ಕುಡಿದ ಅಮಲಿನಲ್ಲಿ ನಾಲಿಗೆ ಕತ್ತರಿಸಿಕೊಂಡಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಈ ಘಟನೆಗೆ ಮಾನಸಿಕ ಖಿನ್ನತೆಯೇ ಕಾರಣ ಎನ್ನಲಾಗಿದೆ.

ಕಳಪೆ ಊಟದ ವಿರುದ್ಧ ಪ್ರತಿಭಟನೆ; ಬಳ್ಳಾರಿಯಲ್ಲಿ ಎಸ್‌ಟಿ ಎಸ್‌ಸಿ ವಿದ್ಯಾರ್ಥಿಗಳು ಹಾಸ್ಟೆಲ್‌ನಿಂದ ಹೊರಕ್ಕೆ, ಜೆಡಿಎಸ್ ಆಕ್ರೋಶಕಳಪೆ ಊಟದ ವಿರುದ್ಧ ಪ್ರತಿಭಟನೆ; ಬಳ್ಳಾರಿಯಲ್ಲಿ ಎಸ್‌ಟಿ ಎಸ್‌ಸಿ ವಿದ್ಯಾರ್ಥಿಗಳು ಹಾಸ್ಟೆಲ್‌ನಿಂದ ಹೊರಕ್ಕೆ, ಜೆಡಿಎಸ್ ಆಕ್ರೋಶ

ಗಾಯಕಿ ಮಂಗ್ಲಿ ಕೊಟ್ಟ ಸ್ಪಷ್ಟನೆ ಏನು?

ಬಳ್ಳಾರಿ ಉತ್ಸವದಲ್ಲಿ ಪಾಲ್ಗೊಂಡಿದ್ದ ಜನಪ್ರಿಯ ಗಾಯಕಿ ಮಂಗ್ಲಿ ಅವರ ಕಾರಿನ ಮೇಲೆ ದಾಳಿ ನಡೆದಿದೆ ಎಂದು ವರದಿಯಾಗಿತ್ತು. ಈ ವರದಿಗಳನ್ನು ಗಾಯಕಿ ನಿರಾಕರಿಸಿ ಸ್ಪಷ್ಟಿಕರಣ ನೀಡಿದ್ದರು. ಬಳ್ಳಾರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ತಮ್ಮ ಮೇಲೆ ಹಲ್ಲೆ ನಡೆದಿದೆ ಎಂಬ ವರದಿಯನ್ನು ಅಲ್ಲಗಳೆದಿದ್ದು, ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಗಳು ತನ್ನನ್ನು ನೋಡಿಕೊಳ್ಳುತ್ತಿದ್ದರು. ತಾನು ಭಾಗವಹಿಸಿದ್ದ ಬಳ್ಳಾರಿಯ ಕಾರ್ಯಕ್ರಮವೂ ಯಶಸ್ವಿಯಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸುಳ್ಳು ಸುದ್ದಿಯನ್ನ ನಿರಾಕರಿಸುತ್ತೇನೆ

ಕೆಲ ದುಷ್ಕರ್ಮಿಗಳು ಬಳ್ಳಾರಿಯಲ್ಲಿ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಮಂಗ್ಲಿ ಅವರ ಕಾರಿಗೂ ಹಾನಿಯಾಗಿದೆ ಎಂದು ಹಲವು ವರದಿಗಳು ತಿಳಿಸಿವೆ. ಘಟನೆ ನಡೆದಾಗ ತಾನು ಕಾರಿನಲ್ಲಿ ಇರಲಿಲ್ಲ ಮತ್ತು ಅದು ತನ್ನ ಕಾರಲ್ಲ ಎಂದು ಮಂಗ್ಲಿ ತಿಳಿಸಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸಿರುವ ಅವರು, "ಬಳ್ಳಾರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನನ್ನ ಮೇಲೆ ಹಲ್ಲೆ ನಡೆದಿದೆ ಎಂದು ಕೆಲವು ಸಾಮಾಜಿಕ ಮಾಧ್ಯಮಗಳು ಹರಡಿದ ತಪ್ಪು ಸುದ್ದಿಯನ್ನು ನಾನು ಸಂಪೂರ್ಣವಾಗಿ ನಿರಾಕರಿಸುತ್ತೇನೆ" ಎಂದಿದ್ದರು.

A Man donated tongue to god at Uppara hosahalli

" ನಾನು ಭಾಗವಹಿಸಿದ್ದ ಕಾರ್ಯಕ್ರಮ ಒಂದು ದೊಡ್ಡ ಯಶಸ್ಸನ್ನು ಪಡೆದಿದೆ ಎಂಬುದನ್ನು ನೀವು ಫೋಟೋಗಳು ಮತ್ತು ವಿಡಿಯೋಗಳಲ್ಲಿ ನೋಡಿದ್ದಿರಿ, ಕನ್ನಡದ ಜನರು ನನ್ನ ಮೇಲೆ ಅಪಾರ ಪ್ರೀತಿ ಮತ್ತು ಬೆಂಬಲವನ್ನು ನೀಡಿದ್ದಾರೆ. ನನ್ನನ್ನು ತುಂಬಾ ಚೆನ್ನಾಗಿ ನೋಡಿಕೊಂಡ ಅಧಿಕಾರಿಗಳ ಬಗ್ಗೆ ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ನನ್ನ ಇಮೇಜ್ ಹಾಳು ಮಾಡಲು ಇದೆಲ್ಲವನ್ನೂ ಮಾಡಲಾಗುತ್ತಿದೆ. ಈ ರೀತಿಯ ಸುಳ್ಳು ಪ್ರಚಾರವನ್ನು ನಾನು ಖಂಡಿಸುತ್ತೇನೆ" ಎಂದು ಟ್ವೀಟ್ ಮಾಡಿದ್ದಾರೆ.

ಇತ್ತೀಚೆಗಷ್ಟೇ ಚಿಕ್ಕಬಳ್ಳಾಪುರ ಉತ್ಸವದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಮಂಗ್ಲಿ ವೇದಿಕೆಯಲ್ಲಿ ತೆಲುಗು ಭಾಷೆಯಲ್ಲಿ ಮಾತನಾಡಲು ಆರಂಭಿಸಿದ್ದರು. ಈ ವೇಳೆ ನಿರೂಪಕಿ ಅನುಶ್ರೀ ಆಕೆಯನ್ನು ಕನ್ನಡದಲ್ಲಿ ಮಾತನಾಡುವಂತೆ ತಿಳಿಸಿದಾಗ, "ನಾನು ತೆಲುಗಿನಲ್ಲಿ ಮಾತನಾಡುತ್ತೇನೆ. ಏಕೆಂದರೆ ಅನಂತಪುರ (ಆಂಧ್ರಪ್ರದೇಶ) ಹತ್ತಿರದಲ್ಲಿದೆ. ಆದ್ದರಿಂದ ಇಲ್ಲಿ ಎಲ್ಲರೂ ತೆಲುಗು ಅರ್ಥಮಾಡಿಕೊಳ್ಳುತ್ತಾರೆ " ಎಂದು ಹೇಳಿದ್ದರು. ಅವರ ಹೇಳಿಕೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಆಕ್ರೋಶ ಉಂಟಾಗಿತ್ತು. ಹೊಗಿನವರನ್ನು ಕರೆಸಿ ಕನ್ನಡಕ್ಕೆ ಅಪಮಾನ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿತ್ತು. ಅನೇಕ ಕನ್ನಡ ಪರ

English summary
A man donated tongue to god at Uppara hosahalli of siruguppa taluk, know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X