4ನೇ ಏಷ್ಯನ್ ಪ್ಯಾರಾ ಗೇಮ್ಸ್‌ಗೆ ಆಯ್ಕೆಯಾದ ಬಳ್ಳಾರಿಯ ವಿಶೇಷ ಚೇತನ ಯುವಕ
ಬಳ್ಳಾರಿ, ಅಕ್ಟೋಬರ್ 19: ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ದರೋಜಿ ಗ್ರಾಮದ ವಿಶೇಷ ಚೇತನ ಯುವಕ ಗೋಪಿಚಂದ್.ಎಲ್ ಅವರು ಚೀನಾದ ಹ್ಯಾಂಗ್‍ಝೌನಲ್ಲಿ ನಡೆಯುವ 4ನೇಯ ಏಷ್ಯನ್ ಪ್ಯಾರಾ ಗೇಮ್ಸ್‍ನ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಪ್ರಸ್ತುತ ಸಾಲಿನಲ್ಲಿ ಅಕ್ಟೋಬರ್ 22ರಿಂದ ಅಕ್ಟೋಬರ್ 29ರವರೆಗೆ ಚೀನಾದ ಹ್ಯಾಂಗ್‍ಝೌನಲ್ಲಿ 4ನೇಯ ಏಷ್ಯನ್ ಪ್ಯಾರಾ ಗೇಮ್ಸ್ ನಡೆಯಲಿವೆ.
ಗೋಪಿಚಂದ್ ಅವರು 400 ಮೀ ಫ್ರೀ ಸ್ಟೈಲ್ ಹಾಗೂ 100 ಮೀ ಬ್ಯಾಕ್ ಸ್ಟ್ರೋಕ್ ಈಜು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದು, ಭಾರತವನ್ನು ಪ್ರತಿನಿಧಿಸುವ ತಂಡಕ್ಕಾಗಿ ಭಾರತೀಯ ಕ್ರೀಡಾ ಪ್ರಾಧಿಕಾರ ನವದೆಹಲಿಯ ಜೆಎಲ್‍ಎನ್ ಕ್ರೀಡಾ ತರಬೇತಿ ಕೇಂದ್ರದಲ್ಲಿ ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 17 ರವರೆಗೆ ತರಬೇತಿ ಪಡೆದುಕೊಂಡಿದ್ದಾರೆ.

ಗೋಪಿಚಂದ್.ಎಲ್ ಅವರು ಚಿಕ್ಕಂದಿನಿಂದ ಈಜು ಪಟುವಾಗಿದ್ದು, ಹುಟ್ಟಿನಿಂದಲೂ ವಿಶೇಷಚೇತನರಾಗಿದ್ದಾರೆ. ಅವರ ತಂದೆ ಮತ್ತು ತಾಯಿ ಇಬ್ಬರೂ ತೋರಣಗಲ್ಲಿನ ಜಿಂದಾಲ್ ಕಂಪನಿಯಲ್ಲಿ ಗುತ್ತಿಗೆ ಆಧಾರದ ಕೆಲಸಗಾರರಾಗಿದ್ದು, ತಮ್ಮ ಬಡತನದ ನಡುವೆ ಸಹ ಮಗ ಗೋಪಿಚಂದ್ ಅವರ ಹೆಚ್ಚಿನ ಅಭ್ಯಾಸಕ್ಕಾಗಿ ಬೆಂಗಳೂರಿನ ವೈಟ್‍ಫೀಲ್ಡ್‍ನ ಮೌಂಟ್ ಲಿಟೇರಾ ಜೀ ಶಾಲೆಯಲ್ಲಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಕೊಡಿಸುತ್ತಿದ್ದಾರೆ.
ಗೋಪಿಚಂದ್ ಅವರು ಅರ್ಜುನ್ ಪ್ರಶಸ್ತಿ ವಿಜೇತರಾದ ಶರತ್ ಗಾಯಕ್‍ವಾಡ್ ಮತ್ತು ರಜನಿ ಲಕ್ಕ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದು ರಾಜ್ಯ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ 25 ಚಿನ್ನದ ಪದಕ ಹಾಗೂ 08 ಬೆಳ್ಳಿ ಪದಕಗಳನ್ನು ಪಡೆದುಕೊಂಡಿದ್ದಾರೆ.

2021ರಲ್ಲಿ ಬಹ್ರೇನ್‍ನಲ್ಲಿ ನಡೆದ ಇಂಟರ್‍ನ್ಯಾಷನಲ್ ಏಷ್ಯನ್ ಯೂಥ್ ಪ್ಯಾರಾ ಗೇಮ್ಸ್, 2022ರಲ್ಲಿ ಈಜಿಪ್ಟ್‍ನ ಕೈರೋನಲ್ಲಿ ನಡೆದ ಪ್ಯಾರಾ ಸ್ವಿಮ್ಮಿಂಗ್ ಗೇಮ್ಸ್‍ನಲ್ಲಿಯೂ ಭಾಗವಹಿಸಿದ್ದಾರೆ. ಈ ಶುಭ ಸಂದರ್ಭದಲ್ಲಿ ಗೋಪಿಚಂದ್ ಅವರ ಈ ಸಾಧನೆಗೆ ಜಿಲ್ಲಾಡಳಿತವು ಪ್ರಶಂಸೆ ವ್ಯಕ್ತಪಡಿಸಿ ಶುಭ ಹಾರೈಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications