ಬಳ್ಳಾರಿ: ಲಾರಿ ಮತ್ತು ಎರಡು ಆಟೋಗಳ ನಡುವೆ ಭೀಕರ ಅಪಘಾತ, 7 ಜನ ದುರರ್ಮಣ

ಬಳ್ಳಾರಿ, ಜೂನ್‌, 30: ಬಳ್ಳಾರಿ ನಗರದಿಂದ ಹೊಸಪೇಟೆ ಬಳಿಯಿರುವ ತುಂಗಭದ್ರಾ ಜಲಾಶಯ ನೋಡಲು ಆಗಮಿಸಿದ್ದ ಪ್ರವಾಸಿಗರ ಆಟೋಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ 7 ಜನ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರಿಡ್ಜ್ ಬಳಿ ಈ ಅಪಘಾತ ನಡೆದಿದೆ. ಎರಡು ಆಟೋ ಮತ್ತು ಲಾರಿ ನಡುವೆ ಡಿಕ್ಕಿ ಆಗಿ ಈ ಅಪಘಾತ ಸಂಭವಿಸಿದ್ದು, ಒಂದು ಆಟೋ ಡಿಕ್ಕಿಯ ರಭಸಕ್ಕೆ ಹಲವು ಮೀಟರ್ ದೂರ ಹೋಗಿ ಬಿದ್ದಿದೆ. ಇನ್ನು ಈ ಆಟೋದಲ್ಲಿದ್ದ ಇಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಹೊಸಪೇಟೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Accident between lorry and two autos near ballari, seven people death

ಅಪಘಾತಕ್ಕೀಡಾದ ಎರಡು ಆಟೋಗಳ ಪೈಕಿ ಒಂದು ಬಳ್ಳಾರಿಯಿಂದ ಹೊಸಪೇಟೆಗೆ ಹೊರಟಿತ್ತು. ಒಂದೇ ಆಟೋದಲ್ಲಿ 20 ಜನರಿದ್ದರು ಎನ್ನಲಾಗಿದೆ. ಈ ಇಪ್ಪತ್ತು ಜನರ ಪೈಕಿ ಶಾಶಮ್ಮ ಎಂಬ ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಮತ್ತೊಂದು ಆಟೋದಲ್ಲಿದ್ದ ಮೂವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕೆಲವು ಗಾಯಾಳುಗಳನ್ನು ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಇಬ್ಬರು ತೀವ್ರವಾಗಿ ಗಾಯಗೊಂಡವವರನ್ನು ಬಳ್ಳಾರಿಯ ವಿಮ್ಸ್‌ಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

Accident between lorry and two autos near ballari, seven people death
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+