ಸಿರುಗುಪ್ಪ: ಆಟೋ ಪಲ್ಟಿಯಾಗಿ 30ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಬಳ್ಳಾರಿ, ಆಗಸ್ಟ್‌, 24: ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದಲ್ಲಿ ಕೂಲಿಯಾಳುಗಳು ತೆರಳುತ್ತಿದ್ದ ಆಟೋ ಪಲ್ಟಿಯಾಗಿ ಸುಮಾರು 30 ಜನರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ತೆಕ್ಕಲಕೋಟೆ ಪಟ್ಟಣದಿಂದ ಕೂಲಿ ಕೆಲಸಕ್ಕಾಗಿ 40 ಜನ ತುಂಬಿದ ಆಟೋ ಪಲ್ಟಿಯಾಗಿದೆ. ಸಿರಿಗೇರಿಯಿಂದ ತೆಕ್ಕಲಕೋಟೆಗೆ ಬರುವ ಮಾರ್ಗದ ಸುಂಕ್ಲಮ್ಮ ದೇವಸ್ಥಾನದ ಬಳಿಯ ತಿರುವಿನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಈ ವೇಳೆ ಸುಮಾರು 30ಕ್ಕೂ ಹೆಚ್ಚು ಜನ ಗಾಯ ಗೊಂಡಿದ್ದಾರೆ.

Accident: More than 30 people seriously injured due to auto overturn near Siruguppa

ಇನ್ನು ಘಟನೆಯಲ್ಲಿ ಗಾಯ ಗೊಂಡವರಿಗೆ ಪಟ್ಟಣದ ಸಮುದಾಯದ ಆರೋಗ್ಯ ಕೇಂದ್ರದಲ್ಲಿ ಪ್ರಥಮಿಕ ಚಿಕಿತ್ಸೆ ನೀಡಿದ್ದು, ಗಂಭೀರವಾಗಿ ಗಾಯಗೊಂಡಿರುವ 25ಕ್ಕೂ ಹೆಚ್ಚು ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ಟ್ರಮಾ ಕೇರ್ ಸೇಂಟರ್‌ಗೆ ಕಳುಹಿಸಿಕೊಡಲಾಗಿದೆ ಎಂದು ತಿಳಿದುಬಂದಿದೆ.

ಆಟೋ - ಸಾರಿಗೆ ಬಸ್ ನಡುವೆ ಭೀಕರ ಅಪಘಾತ

ಇತ್ತೀಚೆಗಷ್ಟೇ ಆಟೋ - ಸಾರಿಗೆ (KSRTC) ಬಸ್ ನಡುವೆ ಭೀಕರ ಅಪಘಾತವಾಗಿದ್ದು, ಈ ವೇಳೆ ಆಟೋ ಚಾಲಕ (52) ಸಾವನ್ನಪ್ಪಿರುವ ಘಟನೆ ಹಾಸನದ ಕೆಐಎಡಿಬಿ ಏರಿಯಾದ ಹಾಸನ- ಮೈಸೂರು ರಸ್ತೆಯಲ್ಲಿ ನಡೆದಿತ್ತು.

ಹಾಸನ- ಮೈಸೂರು ರಸ್ತೆಯಲ್ಲಿ ಆಟೋ-ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತವಾಗಿದೆ. ಇನ್ನು ಬಸ್‌ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಸಂಪೂರ್ಣವಾಗಿ ನುಜ್ಜುಗುಜ್ಜಾಗಿತ್ತು. ಪರಿಣಾಮ ಆಟೋ ಚಾಲಕ ಸ್ಥಳದಲ್ಲೆ ಸಾವನ್ನಪ್ಪಿದ್ದು, ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ ಎನ್ನುವ ಮಾಹಿತಿ ಲಭ್ಯವಾಗಿತ್ತು.

ಸಾರಿಗೆ ಬಸ್ ಆಟೋಗೆ ಹಿಂಬದಿಯಿಂದ ಡಿಕ್ಕಿ ಹೊಡೆಯೋ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬಸ್ ಚಾಲಕನ ಅಜಾಗರೂಕತೆಯೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿತ್ತು.

ಮರಕ್ಕೆ ಡಿಕ್ಕಿ ಹೊಡೆದ ಸಾರಿಗೆ ಬಸ್‌

ಇನ್ನು ಇತ್ತೀಚೆಗಷ್ಟೇ ಎದುರು ಬಂದ ಲಾರಿಗೆ ಜಾಗ ಬಿಡಲು ಹೋಗಿ ಸಾರಿಗೆ ಬಸ್‌ವೊಂದು ಮರಕ್ಕೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಬಸ್‌ನ ಹಿಂಬದಿಯ ಕಿಟಕಿ ಪಕ್ಕ ಕುಳಿತಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ ಬೇಲೂರಿನ ನಿಡಗೋಡು ಗ್ರಾಮದ ಬಳಿ ನಡೆದಿತ್ತು.

ಹಾಸನದಿಂದ ಮಂಗಳೂರು ಕಡೆ ತೆರಳುತ್ತಿದ್ದ ಸಾರಿಗೆ ಬಸ್ ಬೇಲೂರಿನ ನಿಡಗೋಡು ಗ್ರಾಮದ ಬಳಿ ಎದುರು ಬಂದ ಲಾರಿಗೆ ಜಾಗ ಬಿಡಲು ಎಡ ಬದಿಗೆ ಬಂದಿದೆ. ಈ ವೇಳೆ ಎಡದಲ್ಲಿದ್ದ ಮರಕ್ಕೆ ಹಿಂಬದಿಯಿಂದ ಬಸ್ ಹೊಡೆದಿದ್ದು, ಬಸ್‌ನ ಕಿಟಕಿ ಪಕ್ಕ ಕುಳಿತಿದ್ದ ಪ್ರಯಾಣಿಕನಿಗೆ ಮರ ತಗುಲಿ ಗಂಭೀರ ಗಾಯವಾಗಿ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದ. ಈ ಪ್ರಕರಣ ಬೇಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇನ್ನು ಸಾವಿಗೀಡಾದ ವ್ಯಕ್ತಿ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ ಎಂದು ತಿಳಿದುಬಂದಿತ್ತು.

ರಸ್ತೆ ಪಕ್ಕದಲ್ಲೇ ಮರಗಳು ಇರುವುದರಿಂದ ಸಂಚಾರಕ್ಕೆ ಅಡಚಣೆಯಾಗುವುದಲ್ಲದೆ, ಅಪಘಾತಗಳು ಕೂಡ ಸಂಭವಿಸುತ್ತಿವೆ. ಈ ಹಿಂದೆಯೇ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಮರ ತೆರವುಗೊಳಿಸಿಲ್ಲ. ಶೀಘ್ರವೇ ರಸ್ತೆಗೆ ಹತ್ತಿರವಿರುವ ಮರಗಳನ್ನು ತೆರವುಗೊಳಿಸಿ ಮುಂದಾಗುವ ಅನಾಹುತಗಳನ್ನು ತಪ್ಪಿಸಬೇಕಿದೆ ಎಂದು ಸ್ಥಳೀಯರು ಒತ್ತಾಯಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+