Darshan Bail: ದರ್ಶನ್‌ಗಾಗಿ ಬುಕ್ ಆಗಿದೆ ಹೆಲಿಕಾಪ್ಟರ್; ಬಳ್ಳಾರಿ to ಬೆಂಗಳೂರು ಹೇಗಿರುತ್ತೆ ಪ್ರಯಾಣ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. 100ಕ್ಕೂ ಹೆಚ್ಚು ದಿನಗಳಿಂದ ಜೈಲಿನಲ್ಲಿರುವ ದರ್ಶನ್‌ರನ್ನು ಹೊರತರಲು ಸಾಕಷ್ಟು ಪ್ರಯತ್ನ ನಡೆಯುತ್ತಿದೆ. ದರ್ಶನ ಪರ ವಕೀಲರು ಕಳೆದ ಶನಿವಾರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು, ಜಾಮೀನು ಅರ್ಜಿಯನ್ನು ಸೆಪ್ಟೆಂಬರ್ 23ಕ್ಕೆ ಮುಂದೂಡಿದ್ದ 57ನೇ ಸೆಷನ್ಸ್ ಕೋರ್ಟ್, ಮತ್ತೆ ವಿಚಾರಣೆಯನ್ನು ಸೆಪ್ಟೆಂಬರ್ 27ಕ್ಕೆ ಮುಂದೂಡಿದೆ.

ಮಂಗಳವಾರ ನಟ ದರ್ಶನ್‌ರನ್ನು ಭೇಟಿ ಮಾಡಿದ್ದ ವಕೀಲರು, ಸೆಷನ್ಸ್ ಕೋರ್ಟ್‌ನಲ್ಲೇ ಜಾಮೀನು ಸಿಗುವ ವಿಶ್ವಾಸವಿದೆ ಎಂದು ಹೇಳಿದ್ದರು. ಈ ಬೆನ್ನಲ್ಲೇ ನಟ ದರ್ಶನ್‌ಗೆ ಜಾಮೀನು ಸಿಕ್ಕ ಬಳಿಕ ಬಳ್ಳಾರಿಯಿಂದ ಬೆಂಗಳೂರಿಗೆ ಕರೆತರಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.

Actor Darshan will Travels to Bengaluru by Helicopter After Bail in Renukaswamy Case

ದರ್ಶನ್‌ ಬಿಡುಗಡೆಯಾಗುತ್ತಿದ್ದಂತೆ ಅಲ್ಲಿ ಹೋಗುತ್ತಾರೆ, ಇಲ್ಲಿ ಹೋಗುತ್ತಾರೆ ಎನ್ನುವ ಊಹಾಪೋಹಗಳಿವೆ. ದರ್ಶನ್‌ರನ್ನು ಮೆರವಣಿಗೆ ಮೂಲಕ ಮನೆಗೆ ಕರೆದುಕೊಂಡು ಹೋಗಲಾಗುತ್ತದೆ ಎಂದು ನಿರ್ದೇಶಕರೊಬ್ಬರು ಹೇಳಿದ್ದರು. ಆದರೆ, ಇದೆಲ್ಲ ಬಿಟ್ಟು, ದರ್ಶನ್‌ರನ್ನು ಹೆಲಿಕಾಪ್ಟರ್ ನಲ್ಲಿ ಬಳ್ಳಾರಯಿಂದ ಬೆಂಗಳೂರಿಗೆ ಕರೆತರಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎನ್ನುವ ಬಗ್ಗೆ ಚರ್ಚೆ ನಡೆಯುತ್ತಿದೆ.

ಹೆಲಿಕಾಪ್ಟರ್ ನಲ್ಲಿ ಬೆಂಗಳೂರಿಗೆ?

ದರ್ಶನ್‌ ಬಿಡುಗಡೆಯಾದ ಬಳಿಕ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ಬರುವುದು ತುಂಬಾ ಕಷ್ಟವಾಗಬಹುದು. ಅವರು ಬಿಡುಗಡೆಯಾದರೆ ಅವರನ್ನು ನೋಡಲು ಸಾವಿರಾರು ಅಭಿಮಾನಿಗಳು ಕಾಯುತ್ತಿದ್ದಾರೆ. ಒಂದು ವೇಳೆ ಅವರೇನಾದರೂ ರಸ್ತೆ ಮಾರ್ಗದಲ್ಲಿ ಬೆಂಗಳೂರಿಗೆ ಬಂದರೆ, ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರುವ ನಿರೀಕ್ಷೆ ಇದ್ದು, ಅದರಿಂದಾಗಿ ಅವರನ್ನು ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಕರೆ ತರಲಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ಈಗಾಗಲೇ ದರ್ಶನ್ ಆಪ್ತರು ಖಾಸಗಿ ಹೆಲಿಕಾಪ್ಟರ್ ಅನ್ನು ಬುಕ್ ಮಾಡಿಕೊಂಡಿದ್ದಾರೆ. ದರ್ಶನ್ ಬಿಡುಗಡೆಯಾಗುತ್ತಿದ್ದಂತೆ ಜೈಲಿನಿಂದ ನೇರವಾಗಿ ಹೆಲಿಪ್ಯಾಡ್‌ಗೆ ತಲುಪಿ ಅಲ್ಲಿಂದ ಬೆಂಗಳೂರಿಗೆ ಆಗಮಿಸಲಿದ್ದಾರೆ.

ಅವರು ಜಾಮೀನಿನ ಮೇಲೆ ಹೊರ ಬಂದರೆ ಮೆರವಣಿಗೆ ಮಾಡುವುದೆಲ್ಲಾ ಮಾಡುವುದು ಅನುಮಾನ ಎನ್ನಲಾಗಿದೆ. ಜಾಮೀನಿನ ಮೇಲೆ ಹೊರ ಬಂದರೆ, ಅವರು ನಿರಪರಾಧಿ ಎಂದು ಆಗುವುದಿಲ್ಲ, ನ್ಯಾಯಾಲಯ ತೀರ್ಪು ಕೊಡುವವರೆಗೂ ಅವರು ಆರೋಪಿಯಾಗಿರುತ್ತಾರೆ. ಆರೋಪಿಯೊಬ್ಬರು ಸಾರ್ವಜನಿಕವಾಗಿ ಮೆರವಣಿಗೆ ಮಾಡಿದರೆ ಮತ್ತಷ್ಟು ಕಾನೂನು ಸಮಸ್ಯೆ ಉಂಟಾಗುವ ಅಪಾಯ ಇರುವ ಕಾರಣ, ಎಚ್ಚರಿಕೆಯಿಂದ ಹೆಜ್ಜೆ ಇಡುವ ಸಾಧ್ಯತೆ ಇದೆ.

ದರ್ಶನ್ ಹೊರ ಬಂದರೆ ಹಬ್ಬ ಮಾಡಲು ಹೊರಗಡೆ ಅಭಿಮಾನಿಗಳು ಕಾಯುತ್ತಿದ್ದಾರೆ. ಆದರೆ ಜೈಲಿನಿಂದ ಹೊರ ಬಂದ ತಕ್ಷಣವೇ ದರ್ಶನ್ ಅಭಿಮಾನಿಗಳನ್ನು ಭೇಟಿ ಮಾಡುವ ಸಾಧ್ಯತೆ ಕಡಿಮೆ ಇದೆ. ಸ್ವಲ್ಪ ಬ್ರೇಕ್ ತೆಗೆದುಕೊಂಡ ಬಳಿಕ ಅಭಿಮಾನಿಗಳನ್ನು ಭೇಟಿ ಮಾಡುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+