ಆನಂದ್ ಸಿಂಗ್ ಮೇಲೆ ಹಲ್ಲೆ, ಜ.23ರಂದು ಹೊಸಪೇಟೆ ಬಂದ್
ಬಳ್ಳಾರಿ, ಜನವರಿ 22 : ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನೆಡೆಸಿರುವುದನ್ನು ಖಂಡಿಸಿ ಹೊಸಪೇಟೆ ಬಂದ್‌ಗೆ ಕರೆ ನೀಡಲಾಗಿದೆ. ಆನಂದ್ ಸಿಂಗ್ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.
ಶಾಸಕ ಆನಂದ್ ಸಿಂಗ್ ಬೆಂಬಲಿಗರು ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿದ್ದಾರೆ. ಜೆ.ಎನ್.ಗಣೇಶ್ ಅವರ ವಿರುದ್ಧ ಪ್ರತಿಭಟನೆ ನಡೆಸಲು ಜನವರಿ 23ರಂದು ಹೊಸಪೇಟೆ ಬಂದ್‌ಗೆ ಕರೆ ನೀಡಿದ್ದಾರೆ.
ಆನಂದ್ ಸಿಂಗ್ ಬೆಂಬಲಿಗರು ಹೊಸಪೇಟೆ ಬಂದ್‌ಗೆ ಕರೆ ನೀಡಿದ್ದು, ಈ ಕುರಿತು ಪೋಸ್ಟರ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಗಣೇಶ್ ಅವರಿಂದ ಹಲ್ಲೆಗೊಳಗಾದ ಆನಂದ್ ಸಿಂಗ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಬಲಿಗರ ಪ್ರತಿಭಟನೆ : ಮತ್ತೊಂದು ಕಡೆ ಜೆ.ಎನ್.ಗಣೇಶ್ ಬೆಂಬಲಿಗರು ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆ.ಎನ್.ಗಣೇಶ್ ಅವರನ್ನು ಕಾಂಗ್ರೆಸ್‌ನಿಂದ ಅಮಾನತು ಮಾಡಲಾಗಿದೆ.
ಜೆ.ಎನ್.ಗಣೇಶ್ ಅವರ ಅಭಿಮಾನಿಗಳು ಅಮಾನತು ಆದೇಶವನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಒಟ್ಟಿನಲ್ಲಿ ಇಬ್ಬರು ಶಾಸಕರ ಬೆಂಬಲಿಗರು ಹೋರಾಟ ಆರಂಭಿಸಿದ್ದಾರೆ.












Click it and Unblock the Notifications