ಬಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಸ್ಥಾನಕ್ಕೆ ಆನಂದ್ ಸಿಂಗ್ ದಿಢೀರ್ ರಾಜೀನಾಮೆ, ಅಭಿಮಾನಿಗಳು ಹೇಳಿದ್ದೇನು?
ವಿಜಯನಗರ, ಜುಲೈ, 15: ಮಾಜಿ ಸಚಿವ ಆನಂದ್ ಸಿಂಗ್ ಬಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಆನಂದ್ ಸಿಂಗ್ ಅವರ ಈ ದಿಢೀರ್ ನಿರ್ಧಾರದಿಂದ ಅವಳಿ ಜಿಲ್ಲೆಯಲ್ಲಿರುವ ಸಹಕಾರಿ ಕ್ಷೇತ್ರದ ಹಾಗೂ ರಾಜಕೀಯ ಕ್ಷೇತ್ರದ ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಅವರ ಪುತ್ರ ಸಿದ್ಧಾರ್ಥ ಸಿಂಗ್ ವಿಧಾನಸಭೆ ಚುನಾವಣೆಯಲ್ಲಿ ಸೋಲುಂಡಿದ್ದು, ರಾಜಕೀಯ ನಿರಾಸಕ್ತಿ ಮೂಡಲು ಕಾರಣವಾಯಿತೇ? ಎಂಬ ಅನುಮಾನಗಳನ್ನು ಹಲವರು ವ್ಯಕ್ತಪಡಿಸಿದ್ದಾರೆ.

ಮೂರು ಬಾರಿ ಬಿಜೆಪಿಯಿಂದ, ಒಮ್ಮೆ ಕಾಂಗ್ರೆಸ್‌ನಿಂದ ಗೆದ್ದಿದ್ದ ಆನಂದ ಸಿಂಗ್ ಇದೀಗ ರಾಜಕೀಯ ನಿವೃತ್ತಿಗೆ ಮುಂದಾಗಿದ್ದಾರೆಯೇ? ಎಂಬ ಅನುಮಾನಗಳನ್ನೂ ಕೂಡ ಹಲವರು ವ್ಯಕ್ತಪಡಿಸಿದ್ದಾರೆ. ಮೊದಲು ಚುನಾವಣೆಯಿಂದ ಹಿಂದೆ ಸರಿದ ಸಿಂಗ್, ಇದೀಗ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಗೆ ಪಟ್ಟು
ಹಾಗೆಯೇ ಕರ್ನಾಟಕದಲ್ಲಿ ಬಿಜೆಪಿಗೆ ಸೋಲಾಗಿಲ್ಲ. ಕೆಲವು ವ್ಯಕ್ತಿಗಳ ನಿರ್ಧಾರದಿಂದ ಹೀನಾಯವಾಗಿ ಸೋಲು ಕಂಡೆವು. ಪಕ್ಷದೊಳಗಿನ ಒಳ ಹೊಡೆತದಿಂದ ಕಾಂಗ್ರೆಸ್‌ಗೆ ಲಾಭ ಆಯಿತು. ಕೂಡಲೇ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಮಾಡಬೇಕು. ಎಲ್ಲಾ ಸಮಾಜದವರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ನಾಯಕನನ್ನು ನೇಮಿಸಿ. ಅವಕಾಶ ಸಿಕ್ಕರೆ ನಾನು ರಾಜ್ಯಾಧ್ಯಕ್ಷ ಸ್ಥಾನ ನಿಭಾಯಿಸಲು ಸಿದ್ಧ ಎಂದು ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಇತ್ತೀಚೆಗಷ್ಟೇ ಹೇಳಿದ್ದರು.
ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅವರು, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪರ ಪರ ಹಲವು ಬಾರಿ ಮಾತನಾಡಿದ್ದೇನೆ. ಸೈಕಲ್ ತುಳಿದು ಪಕ್ಷ ಕಟ್ಟಿದ್ದರು ಬಿಎಸ್ ವೈ. ಆದರೆ ಈಗ ಕೆಲವರು ಹೈಫೈ ಕಾರಿನಲ್ಲಿ ಓಡಾಡುತ್ತಾರೆ. ಇಂಥವರಿಂದ ಪಕ್ಷ ಕಟ್ಟಲು ಸಾಧ್ಯವಿಲ್ಲ ಎಂದು ಗುಡುಗಿದ್ದರು.
ಶಿಕಾರಿಪುರದಲ್ಲಿ ಯಡಿಯೂರಪ್ಪರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದರು. ಆದರೂ ಹೆದರಲಿಲ್ಲ. ಪಕ್ಷ ಕಟ್ಟಿದ್ದರು. ಇಬ್ಬರು ಶಾಸಕರಾಗಿದ್ದಾಗ ಒಬ್ಬರು ರಾಜೀನಾಮೆ ಕೊಟ್ಟು ಹೋದರು. ಆಗಲೂ ಯಡಿಯೂರಪ್ಪ ಅವರೂ ಪಕ್ಷ ಕಟ್ಟಿ ಸೈ ಎನಿಸಿಕೊಂಡ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬಾರದಿತ್ತು. ನಾವು ಹಲವು ಬಾರಿ ಹೇಳಿದೆವು. ಆದರೂ ನಮ್ಮ ಮಾತು ಗಣನೆಗೆ ತೆಗೆದುಕೊಳ್ಳಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು.
ಯಡಿಯೂರಪ್ಪರ ಬಿಟ್ಟು ಬಿಜೆಪಿ ಕಟ್ಟುತ್ತೇವೆಂದು ಕೆಲವರು ಹೋದರು. ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ಕರ್ನಾಟಕದಲ್ಲಿ ಯಡಿಯೂರಪ್ಪರ ಕಣ್ಣೀರಲ್ಲಿ ಬಿಜೆಪಿ ತೊಳೆದು ಹೋಗುತ್ತದೆ ಎಂದು. ಚುನಾವಣೆಯಲ್ಲಿ ಇದು ಸತ್ಯವಾಗಿದೆ. ನಮ್ಮ ಪಕ್ಷದವರು ಅರ್ಥ ಮಾಡಿಕೊಳ್ಳಲಿಲ್ಲ ಎಂದು ವಾಗ್ದಾಳಿ ನಡೆಸಿದ್ದರು.
ಅನಂತ್ ಕುಮಾರ್ ಹಾಗೂ ಯಡಿಯೂರಪ್ಪ ಪಕ್ಷ ಕಟ್ಟಿದ್ದರು. ಜಗದೀಶ್ ಶೆಟ್ಟರ್ ಕೈಕಾಲು ಗಟ್ಟಿ ಇರಲಿಲ್ವಾ. ಜಗದೀಶ್ ಶೆಟ್ಟರ್‌ಗೆ ಟಿಕೆಟ್ ಯಾಕೆ ಕೊಡಲಿಲ್ಲ. ಕೆ.ಎಸ್. ಈಶ್ವರಪ್ಪರಿಗೆ ಯಾಕೆ ಟಿಕೆಟ್ ಕೊಡಲಿಲ್ಲ. ಅವರಿಬ್ಬರೂ ಸಮರ್ಥರಿದ್ದರೂ ಕಡೆಗಣಿಸಿದರು. ಪತ್ನಿಗೆ ಟಿಕೆಟ್ ಕೊಡ್ತೇವೆ ಅಂದ್ರು. ಜಗದೀಶ್ ಶೆಟ್ಟರ್‌ಗೆ ಟಿಕೆಟ್ ಕೊಟ್ಟಿದ್ದರೆ ಏನಾಗುತಿತ್ತು ಎಂದು ರೇಣುಕಾಚಾರ್ಯ ಪ್ರಶ್ನಿಸಿದ್ದರು.












Click it and Unblock the Notifications