• search
  • Live TV
ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅನಾರೋಗ್ಯದಿಂದ ಬಳ್ಳಾರಿಯಲ್ಲಿ ಆಶಾ ಕಾರ್ಯಕರ್ತೆ ಸಾವು

By ಬಳ್ಳಾರಿ ಪ್ರತಿನಿಧಿ
|

ಬಳ್ಳಾರಿ, ಮೇ 12: ಮೂರು ದಿನಗಳ ಹಿಂದೆ ಮನೆಯಲ್ಲಿ ಕುಸಿದು ಬಿದ್ದು, ಅನಾರೋಗ್ಯಕ್ಕೆ ಒಳಗಾಗಿ ಆಶಾ ಕಾರ್ಯಕರ್ತೆಯೊಬ್ಬರು ಸಾವನ್ನಪ್ಪಿದ್ದಾರೆ.

ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಬಾದನಟ್ಟಿ ಗ್ರಾಮದ ಸಾಕಮ್ಮ ಎಂಬ ಆಶಾ ಕಾರ್ಯಕರ್ತೆ ಇಂದು ಸಾವನ್ನಪ್ಪಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಮಧುಮೇಹದಿಂದ ಬಳಲುತ್ತಿದ್ದ ಅವರು, ಮೂರು ದಿನಗಳಿಂದ ಹಿಂದೆ ಮನೆಯಲ್ಲಿ ಜಾರಿ ಬಿದ್ದಿದ್ದರು. ಜೊತೆಗೆ ಅನಾರೋಗ್ಯಕ್ಕೆ ಒಳಗಾಗಿದ್ದರು.

ಮಾನಸಿಕ ಅಸ್ವಸ್ಥ ಗರ್ಭಿಣಿಯ ಸಹಾಯಕ್ಕೆ ನಿಂತ ಬಳ್ಳಾರಿ ಡಿಸಿ

ಅನಾರೋಗ್ಯದ ಹಿನ್ನೆಲೆಯಲ್ಲಿ ಕೊರೊನಾ ಕೆಲಸದಿಂದ ಜಿಲ್ಲಾಡಳಿತ ಇವರನ್ನು ಕೈ ಬಿಟ್ಟಿತ್ತು. ಕಳೆದ ಕೆಲ ದಿನಗಳಿಂದ ಇವರು ಕೆಲಸಕ್ಕೆ ಗೈರಾಗಿದ್ದರು. ಮುಂಜಾಗ್ರತಾ ಕ್ರಮವಾಗಿ ಆಶಾ ಕಾರ್ಯಕರ್ತೆಯ ಕೊರೊನಾ ಪರೀಕ್ಷೆ ನಡೆಸುವುದಾಗಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಎಚ್.ಎಲ್. ಜನಾರ್ದನ ಮಾಹಿತಿ ನೀಡಿದ್ದಾರೆ.

English summary
Asha worker died by illness in Kurugodu of ballari district,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X