Mantralayam: ಮಂತ್ರಾಲಯದಲ್ಲಿ ಮತಾಂತರಕ್ಕೆ ಯತ್ನ; ಒಬ್ಬನ ಬಂಧನ, ಮತ್ತೊಬ್ಬ ಎಸ್ಕೇಪ್!
ಬಳ್ಳಾರಿ ಜುಲೈ 22: ಮಂತ್ರಾಲಯದಲ್ಲಿ ಮತಾಂತರಕ್ಕೆ ಯತ್ನಿಸಿದ್ದರಿಂದ ಓರ್ವ ವ್ಯಕ್ತಿಯನ್ನು ಬಂಧಿಸಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಬಳಿ ನಡೆದಿದೆ. ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.
ಹುಸೇನ್ ಭಾಷಾ (44), ಸಾಯಿ ಬಾಬಾ (24) ಎಂಬುವವರು ಮತಾಂತರಕ್ಕೆ ಯತ್ನ ಮಾಡಿದ್ದಾರೆ ಎನ್ನಲಾಗಿದೆ. ಮಂತ್ರಾಲಯಕ್ಕೆ ಬಂದ ಭಕ್ತರನ್ನು ಇಸ್ಲಾಂ ಧರ್ಮಕ್ಕೆ ಮತಾಂತರಿಸಲು ಪ್ರಯತ್ನಿಸಿದ ಆರೋಪ ಇವರ ಮೇಲಿದೆ. ಈ ಆರೋಪದ ಮೇಲೆ ಹುಸೇನ್ ಭಾಷಾನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೋರ್ವ ವ್ಯಕ್ತಿ ತಲೆಮರಿಸಿಕೊಂಡಿದ್ದಾನೆ. ಸದ್ಯ ಪೊಲೀಸರು ವಶಕ್ಕೆ ಪಡೆದ ವ್ಯಕ್ತಿಯ ವಿಚಾರಣೆಯನ್ನು ಶುರು ಮಾಡಿದ್ದಾರೆ.

ಜುಲೈ 18ರಂದು ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಯಾತ್ರಿಕರಿಗೆ ಇಬ್ಬರು ವ್ಯಕ್ತಿಗಳು ಇಸ್ಲಾಂ ಧರ್ಮದ ಬಗ್ಗೆ ಬೋಧನೆ ಮಾಡಿದ್ದಾರೆ ಎಂದು ದೂರಲಾಗಿದೆ. ಈ ಬಗ್ಗೆ ಗಾದಿಲಿಂಗಪ್ಪ ಎಂಬುವವರು ತೆಕ್ಕಲಕೋಟೆ ಪೊಲೀಸದ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮತಾಂತರಕ್ಕೆ ಪ್ರಯತ್ನಿಸಿರುವುದು ದೂರುದಾರರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಅನ್ಯ ಧರ್ಮದವರು ಮಾತನಾಡಿದ ಬಳಿಕ ಯಾತ್ರಾತ್ರಿಗಳಿಗೆ ಬುದ್ಧಿಹೇಳಿದ ಗಾದಿಲಿಂಗಪ್ಪ, ಅವರು ಮಾತು ನಂಬಬೇಡಿ. ಅವೆರಲ್ಲ ಮತಾಂತರ ಮಾಡುತ್ತಾರೆ ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ.

ಸದ್ಯ ಮತಾಂತರ ಮಾಡಲು ಪ್ರಯತ್ನ ಮಾಡಿದ ಆರೋಪದಲ್ಲಿ ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹುಸೇನ್ ಭಾಷ ಎಂಬಾತನನ್ನು ಬಂಧಿಸಲಾಗಿದೆ. ಮತ್ತೋರ್ವ ಆರೋಪಿ ನಾಪತ್ತೆಯಾಗಿದ್ದಾನೆ. ವಿಡಿಯೋ ದಾಖಲೆ ಆಧಾರದ ಮೇಲೆ ಮತಾಂತರ ಯತ್ನ ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ವಿಡಿಯೋದಲ್ಲಿ ಏನಿದೆ?
ಕೇಸರಿ ಧ್ವಜ ಹಿಡಿದುಕೊಂಡು ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದಿಂದ ಯಾತ್ರಾತ್ರಿಗಳಿಬ್ಬರು ಸಿರುಗುಪ್ಪ ರಾಷ್ಟ್ರೀಯ ಹೆದ್ದಾರಿ ಮೂಲಕ ಮಂತ್ರಾಲಯಕ್ಕೆ ತೆರಳುತ್ತಿದ್ರು. ಈ ವೇಳೆ ಸ್ಥಳಕ್ಕೆ ಬಂದಿರುವ ತೆಕ್ಕಲಕೋಟೆ ಪಟ್ಟಣದ ಹುಸೇನ್ ಭಾಷಾ, ಸಾಯಿ ಬಾಬಾ ಎಂದು ಗುರುತಿಸಲಾದ ಅನ್ಯಕೋಮಿನ ವ್ಯಕ್ತಿಗಳು ಮಂತ್ರಾಲಯ ಭಕ್ತರಿಗೆ ಮುಸ್ಲಿಂ ಧರ್ಮವನ್ನು ಬೋಧನೆ ಮಾಡಿದ್ದಾರೆ. ಈ ಮೂಲಕ ಭಕ್ತರನ್ನು ಮತಾಂತರಕ್ಕೆ ಯತ್ನಿಸಿದ್ದಾರೆಂದು ಆರೋಪಿಸಲಾಗಿದೆ.
ರಾಘವೇಂದ್ರ ಸ್ವಾಮಿ
ಶ್ರೀ ರಾಘವೇಂದ್ರ ಸ್ವಾಮಿ ಅಥವಾ ರಾಯರು ಭಗವಾನ್ ನಾರಾಯಣನ ಶ್ರೇಷ್ಠ ಭಕ್ತರಲ್ಲಿ ಒಬ್ಬರು ಎಂದು ಸಾರ್ವತ್ರಿಕವಾಗಿ ಒಪ್ಪಿಕೊಳ್ಳಲಾಗಿದೆ. ಶ್ರೀ ರಾಘವೇಂದ್ರ ಸ್ವಾಮಿ ಮಠದ ಆಡಳಿತವು ರಾಯರು ಮತ್ತು ಅವರ ಭಕ್ತರ ಸೇವೆಗೆ ತನ್ನನ್ನು ಅರ್ಪಿಸಿಕೊಂಡಿದೆ. ಮಂತ್ರಾಲಯಕ್ಕೆ ಭಕ್ತರು ಕೈಗೊಳ್ಳುವ ತೀರ್ಥಯಾತ್ರೆಯನ್ನು ಅತ್ಯಂತ ಅರ್ಥಪೂರ್ಣ ಯಾತ್ರೆ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಭಕ್ತರು ರಾಜ್ಯದ ಮೂಲೆ ಮೂಲೆಯಿಂದ ಪಾದಯಾತ್ರೆ ಕೈಗೊಳ್ಳುತ್ತಾರೆ.
ಆದರೆ ಈ ಘಟನೆ ಕಳವಳವನ್ನು ಹೆಚ್ಚಿಸಿದೆ. ಮಂತ್ರಾಲಯಕ್ಕೆ ಆಗಮಿಸುವ ಭಕ್ತರಿಗೆ ಇಸ್ಲಾಂ ಧರ್ಮದ ಬಗ್ಗೆ ಬೋಧಿಸುವುದು ಎಷ್ಟು ಸರಿ ಎಂದು ದೂರುದಾರರು ಪ್ರಶ್ನೆ ಮಾಡಿದ್ದಾರೆ. ಗಾದಿಲಿಂಗಪ್ಪ ಅವರ ದೂರಿನ ಆಧಾರದ ಮೇಲೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.












Click it and Unblock the Notifications