Ballari Airport: ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾದ್ರೆ ಗಾಲಿ ಜನಾರ್ದನ ರೆಡ್ಡಿ ಮೊದಲ ಆಸೆ ಏನು ಗೊತ್ತಾ?

ಬೆಳಗಾವಿ, ಡಿಸೆಂಬರ್‌, 13: ರಾಜ್ಯದ ಹಲವು ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣಗಳಿವೆ. ಹಾಗೆಯೇ ಬಳ್ಳಾರಿಯಲ್ಲಿ ಏನಾದ್ರೂ ವಿಮಾನ ನಿಲ್ದಾಣ ಆದ್ರೆ ಅದಕ್ಕೆ ಶ್ರೀ ಹನುಮಾನ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಂತಾ ನಾಮಕಾರಣ ಮಾಡಬೇಕು ಎಂಬುದು ನನ್ನ ಆಸೆಯಾಗಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಬೆಳಗಾವಿ ಅಧಿವೇಶನದ ವೇಳೆ ಹೇಳಿದರು.

ಅಯೋಧ್ಯೆಯಲ್ಲಿ ಶ್ರೀರಾಮ ಇಂಟರ್ ನ್ಯಾಷನಲ್ ಏರ್‌ಪೋರ್ಟ್ ಇದೆ. ಇನ್ನು ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ಆದ್ರೆ ಅದಕ್ಕೆ ಶ್ರೀ ಹನುಮಾನ್ ಇಂಟರ್ ನ್ಯಾಷನಲ್ ಏರ್‌ಪೋರ್ಟ್ ಎಂದು ನಾಮಕರಣ ಮಾಡಲಿ ಅಂತಾ ನನ್ನ ಆಸೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

Ballari Airport: What did G.Janardhana Reddy say on Ballari Airport construction?

ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ ವಿಮಾನ ನಿಲ್ದಾಣಗಳಲ್ಲಿ ಏರ್ ಬಸ್​ಗಳು ಇವತ್ತು ಬರುತ್ತಿವೆ ಅಂದರೆ ನಾನು ಮಾಡಿದ ಕೆಲಸವೇ ಕಾರಣ. ದುರಾದೃಷ್ಟ ಅಂದರೆ ನಾನು ಹುಟ್ಟಿ ಬೆಳೆದ ಗಣಿ ನಾಡು ಬಳ್ಳಾರಿಯಲ್ಲಿ ಇದುವರೆಗೂ ವಿಮಾನ ನಿಲ್ದಾಣವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ವಿಜಯನಗರದಲ್ಲಿ ಅಟಲ್ ಬಿಹಾರಿ ವಾಜಪೇಯಿ ಹೆಸರಲ್ಲಿ ನಾನು ಜೂವಾಲಾಜಿಕಲ್ ಪಾರ್ಕ್ ಕಟ್ಟಿದ್ದೆ. ಅಲ್ಲಿ ನೈಟ್ ಸಫಾರಿ, ಥೀಮ್ ಪಾರ್ಕ್, ಶ್ರೀಕೃಷ್ಣದೇವರಾಯನ ಪ್ರತಿಮೆಯನ್ನು ಇಂಗ್ಲೆಂಡಿನ ಲೇಡಿ ಲಿಬರ್ಟಿ ಪ್ರತಿಮೆ ತರಹ ಮಾಡಬೇಕೆಂಬ ಆಸೆ ಇತ್ತು. ತುಂಗಭದ್ರ ನದಿಯಲ್ಲಿ ಸೌಂಡ್ ಅಂಡ್ ಲೈಟ್ ಮಾಡಬೇಕೆಂಬ ಆಸೆಯಿತ್ತು. ಈ ಕನಸುಗಳನ್ನು 13-14 ವರ್ಷಗಳ ಹಿಂದೆಯೇ ನಾನು ಕಂಡಿದ್ದೆ. ಈಗಿನ ಸರ್ಕಾರ ಈ ಅಭಿವೃದ್ಧಿ ಕೆಲಸಗಳನ್ನು ಮಾಡಲಿ ಎಂದರು.

ಬಳ್ಳಾರಿಗೆ ಯಾರ್ಯಾರು ಏನೇನು ಕೆಲಸ ಮಾಡಿದ್ದಾರೆ ಅಂತಾ ಎದೆ ಮೇಲೆ ಕೈ ಇಟ್ಟು ಮಾತಾಡಲಿ. ರಾಜಕೀಯಕ್ಕಾಗಿ ವಿರೋಧ ಮಾಡುವವರು ಮಾಡಬಹುದು. ಅವರು ಮನೆಯಲ್ಲಿ ಹೋಗಿ ಬಳ್ಳಾರಿ ಅಭಿವೃದ್ಧಿಗೋಸ್ಕರ ಜನಾರ್ದನ ರೆಡ್ಡಿ ಕೆಲಸ ಮಾಡಿದ್ದಾನೋ ಇಲ್ಲವೋ ಅಂತಾ ದೇವರ ಮುಂದೆ ಕೇಳಿಕೊಳ್ಳಲಿ ಎಂದರು.

ನಾನು ಹೇಳಿದ್ದನ್ನು ತಪ್ಪಾಗಿ ಅರ್ಥ ಮಾಡಿಕೊಂಡರೆ ಅದು ಅವರ ಕರ್ಮ. ನನ್ನ ವಿರುದ್ಧ ಗಣಿ ಕೇಸ್​ಗಳನ್ನು ಹಾಕಲಾಗಿದೆ. ನ್ಯಾಯಾಲಯ ಇದೆ, ನಾನು ಪ್ರಕರಣಗಳಿಗೆ ಹೆದರುವುದಿಲ್ಲ ಎಂದರು. ಇನ್ನು ಸರ್ಕಾರ ಅಂಜನಾದ್ರಿ ಬೆಟ್ಟ ಅಭಿವೃದ್ಧಿ ಮಾಡಬೇಕು. ಬಳ್ಳಾರಿಯಲ್ಲಿ ಅಂತಾರಾಷ್ಟ್ರೀಯ ಸ್ಟೇಡಿಯಂ ಕಟ್ಟಬೇಕಿದೆ. ಸರ್ಕಾರ ಈ ವಿಷಯದ ಕಲೆ ಗಮನಹರಿಸಬೇಕು ಎಂದು ಮನವಿ ಮಾಡಿಕೊಂಡರು.

ಬಳ್ಳಾರಿಯಲ್ಲಿ ಮೈನಿಂಗ್ ಟ್ಯಾಕ್ಸ್​ನಿಂದ 17 ಸಾವಿರ ಕೋಟಿ ಸಂಗ್ರಹ ಆಗಿದೆ. ಈ‌ ಹಣ ಬಳ್ಳಾರಿ ಅಭಿವೃದ್ಧಿಗೆ ಬಳಕೆ ಮಾಡಬೇಕು ಎಂದು ಕೋರ್ಟ್ ಆದೇಶ ನೀಡಿದೆ. ಈ ಬಗ್ಗೆ ಕೋರ್ಟ್‌ನಲ್ಲಿ ಗಣಿ ಮಾಲೀಕರು 13 ವರ್ಷಗಳಿಂದ ಹೋರಾಟ ಮಾಡಿದ್ದಾರೆ. ಈಗ ಆ ಹಣ 24 ಸಾವಿರ ಕೋಟಿಯಾಗಿದೆ. ಈ ಹಣದಿಂದ ಬಳ್ಳಾರಿ ಅಭಿವೃದ್ಧಿ ಮಾಡಬಹುದು ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+