ಉದ್ಯೋಗಿನಿ, ಕಿರುಸಾಲ, ಸಮೃದ್ಧಿ ಯೋಜನೆ : ಅರ್ಜಿ ಆಹ್ವಾನ
ಬಳ್ಳಾರಿ, ಮೇ 28: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ರಾಜ್ಯ ಮಹಿಳಾ ಅಭಿವೃದ್ದಿ ನಿಗಮವು ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಹಾಗೂ ಸಂಕಷ್ಟಕ್ಕೊಳಗಾದ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ರಾಜ್ಯ ಸರ್ಕಾರವು ಒದಗಿಸಿರುವ 2019-20ನೇ ಸಾಲಿನ ಪರಿಶಿಷ್ಟ ಜಾತಿ, ಪ.ಪಂಗಡ ಉಪಯೋಜನೆಯಡಿ ಉದ್ಯೋಗಿನಿ, ಕಿರುಸಾಲ, ಸಮೃದ್ಧಿ ಯೋಜನೆಗಳ ಸಹಾಯಧನ ಮತ್ತು ಬ್ಯಾಂಕ್‌ಗಳಿಂದ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಬಳ್ಳಾರಿ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.
Recommended Video
18 ರಿಂದ 50 ವರ್ಷದ ಮಹಿಳೆಯರಾಗಿರಬೇಕು, ರಾಜ್ಯದ ಖಾಯಂ ನಿವಾಸಿಯಾಗಿರಬೇಕು, ಕುಟುಂಬದ ವಾರ್ಷಿಕ ಆದಾಯ 40 ಸಾವಿರ ರೂ. ಮೀರಿರಬಾರದು. ವಿಧವೆಯರು, ಸಂಕಷ್ಟಕ್ಕೊಳಗಾದ ಮಹಿಳೆಯರು, ಅಂಗವಿಕಲ ಮಹಿಳೆಯರ ಹಾಗೂ ದೇವದಾಸಿ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು. ಸ್ವಯಂ ಉದ್ಯೋಗದಲ್ಲಿ ಸಾಕಷ್ಟು ಜ್ಞಾನ ಮತ್ತು ಅನುಭವ ಹೊಂದಿರಬೇಕು ಹಾಗೂ ಯೋಜನಾ ವರದಿ ಕಡ್ಡಾಯವಾಗಿ ಲಗತ್ತಿಸಬೇಕು. ಬ್ಯಾಂಕ್‌ನಿಂದ ಸಾಲ ನೀಡಲು ಒಪ್ಪಿದಲ್ಲಿ ಸಹಾಯಧನ ಬಿಡುಗಡೆ ಮಾಡಲಾಗುವುದು.
'ಉದ್ಯೋಗಿನಿ ಯೋಜನೆ' ಅಡಿಯಲ್ಲಿ 3 ಲಕ್ಷ ಸಾಲ ಹಾಗು 90 ಸಾವಿರ ಸಬ್ಸಿಡಿ ಪಡೆಯಿರಿ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಶೇ.75 ರಷ್ಟು ಹಾಗೂ ಘಟಕ ವೆಚ್ಚ ರೂ. 1 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗಳವರೆಗೆ ವಿಶೇಷ ವರ್ಗದ ಮಹಿಳೆಯರಿಗೆ ಸಹಾಯಧನವನ್ನು ಬ್ಯಾಂಕ್ ಮಂಜೂರು ಮಾಡಿದ ಸಾಲದ ಮೊತ್ತಕ್ಕೆ ಅನುಗುಣವಾಗಿ ಸಹಾಯಧನವನ್ನು ನೀಡಲಾಗುವುದು.

ಅಭ್ಯರ್ಥಿಯು ವಯಸ್ಸಿನ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಕೈಗೊಳ್ಳುವ ಆದಾಯೋತ್ಪನ್ನ ಚಟುವಟಿಕೆಗಳ ಯೋಜನಾ ವಿವರ, ವಾಸಸ್ಥಳ ಪ್ರಮಾಣ ಪತ್ರ, ಗುರುತಿನ ಚೀಟಿ, ಆಧಾರ ಕಾರ್ಡ್, ಬ್ಯಾಂಕ್ ಪಾಸಪುಸ್ತಕ ಪ್ರತಿ ಇತರೆ ದಾಖಲಾತಿಗಳನ್ನು ಸಲ್ಲಿಸಬೇಕು.
ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಬಳ್ಳಾರಿ ಗ್ರಾಮಾಂತರ, ದೇವಿನಗರ, ಸ್ತ್ರೀ ಸೇವಾನಿಕೇತನಾ ಆವರಣ, ಬಳ್ಳಾರಿ ಕಚೇರಿಯಲ್ಲಿ ಅರ್ಜಿಗಳನ್ನು ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಕಚೇರಿಯ ದೂ.ಸಂ.08392-266080 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಮಾಹಿತಿ ಕೃಪೆ: ಕರ್ನಾಟಕ ವಾರ್ತಾ ಇಲಾಖೆ)
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications