ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಳ್ಳಾರಿ ಜಿಲ್ಲೆ ವಿಭಜನೆ ಬೆಂಬಲಿಸಿ ಪಶ್ಚಿಮ ತಾಲೂಕುಗಳ ಜನರಿಂದ ಪತ್ರ ಚಳುವಳಿ

|
Google Oneindia Kannada News

ಹಗರಿಬೊಮ್ಮನಹಳ್ಳಿ, ಡಿ. 20 : ಬಳ್ಳಾರಿ ಜಿಲ್ಲೆ ವಿಭಜನೆ ಬೆಂಬಲಿಸಿ ಪಶ್ಚಿಮ ತಾಲೂಕಗಳ ಸಾರ್ವಜನಿಕರು ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಪತ್ರ ಚಳುವಳಿ ನಡೆಸಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಮಾಧ್ಯಮ ವಕ್ತಾರ ಪತ್ರೇಶ್ ಹಿರೇಮಠ್ ತಿಳಿಸಿದ್ದಾರೆ.

ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಳ್ಳಾರಿ ಜಿಲ್ಲಾ ಕೇಂದ್ರಕ್ಕೆ ತೆರಳಲು ಪಶ್ಚಿಮ ತಾಲೂಕುಗಳ ಜನ ಪಟ್ಟ ಪರಿಪಾಟಲು ಹೇಳತೀರದಾಗಿದ್ದು ಬಳ್ಳಾರಿ ಜಿಲ್ಲೆ ವಿಭಜನೆ ಸೂಕ್ತವಾಗಿದ್ದು ಕೊಟ್ಟೂರು ಕೂಡ್ಲಿಗಿ ಹಗರಿಬೊಮ್ಮನಹಳ್ಳಿ ಹಡಗಲಿ ಹರಪನಹಳ್ಳಿ ತಾಲೂಕುಗಳ ಜನತೆ, ಮತ್ತು ಸಂಘಸಂಸ್ಥೆಗಳು ವಿಭಜನೆ ಬೆಂಬಲಿಸಿ ಪತ್ರ ಚಳುವಳಿ ನಡೆಸಲಿದ್ದೇವೆ ಎಂದು ಪತ್ರೇಶ್ ತಿಳಿಸಿದರು.

ಕರ್ನಾಟಕ ರಾಜ್ಯದ 31ನೇ ಜಿಲ್ಲೆ ವಿಜಯನಗರ ಭೂಪಟಕರ್ನಾಟಕ ರಾಜ್ಯದ 31ನೇ ಜಿಲ್ಲೆ ವಿಜಯನಗರ ಭೂಪಟ

ಬಳ್ಳಾರಿ ಜಿಲ್ಲೆಯ ಅಖಂಡ ತಾಲೂಕುಗಳ ಅಭಿವೃದ್ಧಿ ಮಾಡದಿರುವುದೇ ವಿಭಜನೆಗೆ ಕಾರಣವಾಗಿದ್ದು ಅಖಂಡತೆ ಎಲ್ಲಾ ಕ್ಷೇತ್ರಗಳಲ್ಲೂ ಇದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಪಶ್ಚಿಮ ತಾಲೂಕುಗಳ ಜನರ ನಿರಂತರ ಹೋರಾಟ ಹಾಗೂ ಸಚಿವ ಆನಂದ್ ಸಿಂಗ್ ಪ್ರಬಲ ಇಚ್ಛಾಶಕ್ತಿಯಿಂದ ಜಿಲ್ಲೆ ವಿಭಜನೆಗೊಳಿಸಿ ಅಧಿಸೂಚನೆ ಹೊರಡಿಸಿ ಆಕ್ಷೇಪಣೆಗೆ ಸಮಯಾವಕಾಶ ನೀಡಿದ್ದು ಇದನ್ನು ಬೆಂಬಲಿಸಿ ರಾಜ್ಯ ಕಂದಾಯ ಇಲಾಖೆ ಅಪರ ಕಾರ್ಯದರ್ಶಿಗಳಿಗೆ ಪತ್ರ ಬರೆಯುವ ಚಳುವಳಿ ನಡೆಸಲು ಪತ್ರೇಶ್ ಪಶ್ಚಿಮ ತಾಲೂಕುಗಳ ಜನರಲ್ಲಿ ಮನವಿ ಮಾಡಿದರು.

Ballari bifurcation: District West taluk citizen letter movement

ಆನಂದ್ ಸಿಂಗ್‌ಗೆ ಹೊಸ ಬೇಡಿಕೆ ಇಟ್ಟ ಕಂಪ್ಲಿಯ ಜನರು ಆನಂದ್ ಸಿಂಗ್‌ಗೆ ಹೊಸ ಬೇಡಿಕೆ ಇಟ್ಟ ಕಂಪ್ಲಿಯ ಜನರು

ರೈತರಿಗೆ, ಬಡವರಿಗೆ, ಕೂಲಿ ಕಾರ್ಮಿಕರಿಗೆ ಹಾಗೂ ಜನಸಾಮಾನ್ಯರೆಲ್ಲರಿಗೂ ತಮ್ಮ ಕೆಲಸ ಕಾರ್ಯಗಳಿಗೆ ಜಿಲ್ಲಾ ಕೇಂದ್ರ ತಲುಪುವುದು ಸದ್ಯದ ಪರಿಸ್ಥಿತಿಯಲ್ಲಿ ಕಷ್ಟಕರವಾಗಿತ್ತು. ಸುಮಾರು 200 ಕಿ.ಮೀ ದೂರ ಕ್ರಮಿಸಬೇಕಾಗಿತ್ತು. ಈ ನಿಟ್ಟಿನಲ್ಲಿ ಸರ್ಕಾರ ಬೇಡಿಕೆಗೆಯನ್ನು ಮನ್ನಿಸಿ ಹೊಸ ಜಿಲ್ಲೆ ಉದಯಕ್ಕೆ ನಾಂದಿ ಹಾಡಿದೆ. ಕರ್ನಾಟಕದ 31ನೇ ಜಿಲ್ಲೆಯಾಗಿ ವಿಜಯನಗರವನ್ನು ಘೋಷಿಸಲಾಗಿದೆ.

English summary
Ballari bifurcation: Ballari District West taluk citizens will start letter movement addressing to GoK said KPPCC spokesperson Pathresh Hiremath.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X