ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿಗೆ ರಾಜೀನಾಮೆ ನೀಡಿದ ಜನಾರ್ದನ ರೆಡ್ಡಿ ಬೆಂಬಲಿಗ ದಮ್ಮೂರು ಶೇಖರ್

By ಬಳ್ಳಾರಿ ಪ್ರತಿನಿಧಿ
|
Google Oneindia Kannada News

ಬಳ್ಳಾರಿ, ಡಿಸೆಂಬರ್‌ 27: ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಜನಾರ್ದನರೆಡ್ಡಿ ಬೆಂಬಲಿಗ ದಮ್ಮೂರು ಶೇಖರ್, ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ದಮ್ಮೂರು ಶೇಖರ್, ಹಲವಾರು ವರ್ಷಗಳಿಂದ ಭಾರತೀಯ ಜನತಾ ಪಾರ್ಟಿಯಲ್ಲಿ ಸಕ್ರಿಯ ಕಾರ್ಯಕರ್ತನಾಗಿ ಹಲವಾರು ಜವಬ್ದಾರಿಗಳನ್ನು ನಿಭಾಯಿಸಿದ್ದೇನೆ. ಪಕ್ಷವನ್ನು ಕಟ್ಟುವಲ್ಲಿ ನನ್ನ ಅಳಿಲು ಸೇವೆಯನ್ನು ಸಲ್ಲಿಸಿದ್ದೇನೆ. ಇಷ್ಟು ವರ್ಷ ಭಾರತೀಯ ಜನತಾ ಪಾರ್ಟಿಯಲ್ಲಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿದ್ದಕ್ಕಾಗಿ ಧನ್ಯವಾದ ತಿಳಿಸುತ್ತೇನೆ ಎಂದಿದ್ದಾರೆ.

ಜನಾರ್ದನ್ ರೆಡ್ಡಿ ಹೊಸಪಕ್ಷ ಘೋಷಣೆ ಬಗ್ಗೆ ಆಪ್ತ ಸ್ನೇಹಿತ ಬಿ. ಶ್ರೀರಾಮುಲು ಪ್ರತಿಕ್ರಿಯೆಜನಾರ್ದನ್ ರೆಡ್ಡಿ ಹೊಸಪಕ್ಷ ಘೋಷಣೆ ಬಗ್ಗೆ ಆಪ್ತ ಸ್ನೇಹಿತ ಬಿ. ಶ್ರೀರಾಮುಲು ಪ್ರತಿಕ್ರಿಯೆ

ಇತ್ತೀಚೆಗೆ ಜನಾರ್ದನ ರೆಡ್ಡಿ ಅವರು ಬೆಂಗಳೂರಿನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯನ್ನು ನೋಡಿ ತುಂಬಾ ವಿಚಲಿತನಾಗಿದ್ದೇನೆ. ದಕ್ಷಿಣ ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ಭಾರತೀಯ ಜನತಾ ಪಾರ್ಟಿಯು ಅಧಿಕಾರ ಪಡೆಯುವಲ್ಲಿ ಹಾಗೂ ದಶಕಗಳಿಂದ ಹೋರಾಟ ನಡೆಸಿದ ಯಡಿಯೂರಪ್ಪರವರನ್ನು ಮುಖ್ಯಮಂತ್ರಿಯನ್ನಾಗಿಸಿದ ಕೀರ್ತಿ ಜನಾರ್ದನ ರೆಡ್ಡಿ ಅವರಿಗೆ ಸಲ್ಲುತ್ತದೆ. ಜನಾರ್ದನ ರೆಡ್ಡಿ ಅವರು ಪಕ್ಷಕ್ಕಾಗಿ ತಮ್ಮನ್ನು ತೊಡಗಿಸಿಕೊಂಡು, ಅದರಿಂದಾಗಿಯೇ ರೆಡ್ಡಿಯವರು ಹಾಗೂ ಅವರ ಕುಟುಂಬ ಸಾಕಷ್ಟು ಕಷ್ಟಗಳನ್ನು ಅನುಭವಿಸಿರುವ ರೀತಿಯಿಂದ ತುಂಬಾ ಮನನೊಂದಿದ್ದೇನೆ. ಜನಾರ್ದನ ರೆಡ್ಡಿ ಅವರು ನನ್ನಂತಹ ಸಹಸ್ರಾರು ಕಾರ್ಯಕರ್ತರನ್ನು ಬೆಳೆಸಿ, ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಳ್ಳಲು ಕಾರಣೀಭೂತರಾಗಿದ್ದಾರೆ ಎಂದು ಜನಾರ್ದನ ರೆಡ್ಡಿ ಬಗ್ಗೆ ಅಭಿಮಾನ ವ್ಯಕ್ತಪಡಿಸಿದರು.

Ballari BJP Vice President Dammur Shekar Has Resigned To Party

ಇನ್ನು ಮೊಟ್ಟ ಮೊದಲಬಾರಿಗೆ ಕುರುಬ ಸಮಾಜಕ್ಕಾಗಿ ಹೋರಾಡಿ ನನ್ನನ್ನು ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ (ಬುಡಾ) ಅಧ್ಯಕ್ಷನನ್ನಾಗಿಸಿ ಸೇವೆ ಕೈಗೊಳ್ಳಲು ಅವಕಾಶ ಕಲ್ಪಿಸಿ ಕೊಟ್ಟಿದ್ದ ಜನಾರ್ದನ ರೆಡ್ಡಿ ಅವರನ್ನು ಈ ಸಮಯದಲ್ಲಿ ಕೃತಜ್ಞತಾ ಭಾವದಿಂದ ಸ್ಮರಿಸುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಜನಾರ್ದನ ರೆಡ್ಡಿ ಅವರನ್ನು ಪಕ್ಷ ನಡೆಸಿಕೊಂಡ ರೀತಿಯಿಂದ ತುಂಬಾ ಬೇಸರಗೊಂಡು ಹಾಗೂ ಈ ಕುರಿತು ಪಕ್ಷದ ಮೇಲಿಟ್ಟಿದ್ದ ವಿಶ್ವಾಸವನ್ನು ಕಳೆದುಕೊಂಡಿದ್ದೇನೆ. ಹಾಗಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗೂ ಬಳ್ಳಾರಿ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದೇನೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಜಿ ಸಚಿವ ಜನಾರ್ದನ ರೆಡ್ಡಿ ಇತ್ತೀಚಿಗೆ ಬಿಜೆಪಿ ಪಕ್ಷವನ್ನು ತೊರೆದು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಎನ್ನುವ ಹೊಸ ಪಕ್ಷ ಸ್ಥಾಪಿಸುವುದಾಗಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಅವರ ಬೆಂಬಗಲಿಗರು ಒಬ್ಬೊಬ್ಬರಾಗಿಯೇ ಬಿಜೆಪಿಗೆ ಗುಡ್‌ ಬೈ ಹೇಳುತ್ತಿದ್ದಾರೆ.

English summary
Ballari BJP vice president Dammur Shekar has resigned to Party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X