ಕಗ್ಗಂಟಾದ ಅಭ್ಯರ್ಥಿ ಆಯ್ಕೆ : ಬಳ್ಳಾರಿಗೆ ಡಿ.ಕೆ.ಶಿವಕುಮಾರ್!
Recommended Video

ಬಳ್ಳಾರಿ, ಅಕ್ಟೋಬರ್ 15 : ಹಲವು ಸುತ್ತಿನ ಸಭೆ, ಕೆಪಿಸಿಸಿ ಕಚೇರಿಯಲ್ಲಿ ಶಾಸಕರ ಸಭೆಗಳ ಬಳಿಕವೂ ಕರ್ನಾಟಕ ಕಾಂಗ್ರೆಸ್ ಬಳ್ಳಾರಿ ಲೋಕಸಭೆ ಉಪ ಚುನಾವಣೆಗೆ ಅಭ್ಯರ್ಥಿ ಘೋಷಣೆ ಮಾಡಲು ವಿಫಲವಾಗಿದೆ. ನವೆಂಬರ್ 3ರಂದು ಉಪ ಚುನಾವಣೆ ನಡೆಯಲಿದೆ.
ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಬಳ್ಳಾರಿಯ 6 ಕಾಂಗ್ರೆಸ್ ಶಾಸಕರ ನಡುವೆ ಸಹಮತ ಮೂಡಿಲ್ಲ. ಉಪ ಚುನಾವಣೆಗೆ ನಾಮಪತ್ರವನ್ನು ಸಲ್ಲಿಸಲು ಅಕ್ಟೋಬರ್ 16ರ ಮಂಗಳವಾರ ಕೊನೆಯ ದಿನವಾಗಿದೆ. ಆದ್ದರಿಂದ, ಇಂದು ಅಭ್ಯರ್ಥಿ ಘೋಷಣೆ ಮಾಡಬೇಕಾದ ಒತ್ತಡದಲ್ಲಿ ಪಕ್ಷವಿದೆ.
ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಬಳ್ಳಾರಿ ಉಪ ಚುನಾವಣೆಯ ಉಸ್ತುವಾರಿ. ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಅವರು ಸೋಮವಾರ ಬಳ್ಳಾರಿಗೆ ಭೇಟಿ ನೀಡಿದ್ದಾರೆ. ಇಂದು ಸಂಜೆಯ ವೇಳೆಗೆ ಅಭ್ಯರ್ಥಿ ಅಂತಿಮಗೊಳ್ಳುವ ಸಾಧ್ಯತೆ ಇದೆ.
ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಸಹೋದರ ವೆಂಕಟೇಶ ಪ್ರಸಾದ್, ವಿಧಾನ ಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ, ಬಳ್ಳಾರಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ದೇವೇಂದ್ರಪ್ಪ ಹೆಸರುಗಳು ಕೇಳಿಬರುತ್ತಿವೆ. ಯಾರು ಅಭ್ಯರ್ಥಿ? ಕಾದು ನೋಡಬೇಕು...

ಡಿ.ಕೆ.ಶಿವಕುಮಾರ್ ವಿರುದ್ಧ ಅಸಮಾಧಾನ
ಬಳ್ಳಾರಿ ಕಾಂಗ್ರೆಸ್ ಅಭ್ಯರ್ಥಿ ಅಂತಿಮಗೊಳಿಸಲು ಬೆಂಗಳೂರಿನಲ್ಲಿ ನಡೆದ ಸರಣಿ ಸಭೆಗಳು ವಿಫಲವಾಗಿವೆ. ಡಿ.ಕೆ.ಶಿವಕುಮಾರ್ ಅವರಿಗೆ ಅಭ್ಯರ್ಥಿ ಆಯ್ಕೆಯ ಜವಾಬ್ದಾರಿ ವಹಿಸಿರುವುದು ಕೆಲವು ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ. ಆದ್ದರಿಂದ, ಒಮ್ಮತದ ಅಭ್ಯರ್ಥಿ ಕಗ್ಗಂಟಾಗಿದೆ.

ಶನಿವಾರವೂ ಸಭೆ
ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಬಳ್ಳಾರಿ ಕಾಂಗ್ರೆಸ್ ಶಾಸಕರ ಸಭೆ ನಡೆಯಿತು.
ಸಭೆಯಲ್ಲಿ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಸಹೋದರ ವೆಂಕಟೇಶ ಪ್ರಸಾದ್, ವಿಧಾನ ಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ, ಬಳ್ಳಾರಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ದೇವೇಂದ್ರಪ್ಪ ಅವರು ಹೆಸರು ಅಂತಿಮಗೊಳಿಸಲಾಯಿತು.

ಬಳ್ಳಾರಿಗೆ ಡಿ.ಕೆ.ಶಿವಕುಮಾರ್
ಬಳ್ಳಾರಿ ಲೋಕಸಭೆ ಉಪ ಚುನಾವಣೆ ಉಸ್ತುವಾರಿಯನ್ನು ಡಿ.ಕೆ.ಶಿವಕುಮಾರ್ ಅವರಿಗೆ ನೀಡಲಾಗಿದೆ. ಇಂದು ಬಳ್ಳಾರಿ ಶಾಸಕರ ಜೊತೆ ಅವರು ಸಭೆ ನಡೆಸಿ, ಅಭ್ಯರ್ಥಿ ಅಂತಿಮಗೊಳಿಸಲಿದ್ದಾರೆ. ಮಂಗಳವಾರ ನಾಮಪತ್ರ ಸಲ್ಲಿಕೆಗೆ ಕೊನೆ ದಿನ. ಆದ್ದರಿಂದ, ಇಂದು ಅಭ್ಯರ್ಥಿ ಅಂತಿಮಗೊಳಿಸಬೇಕಾಗಿದೆ.

ಜೆ.ಶಾಂತ ಎದುರಾಳಿ
ಬಿಜೆಪಿ ಉಪ ಚುನಾವಣೆಗೆ ಈಗಾಗಲೇ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಮಾಜಿ ಸಂಸದ, ಹಾಲಿ ಮೊಳಕಾಲ್ಮೂರು ಕ್ಷೇತ್ರದ ಶಾಸಕ ಬಿ.ಶ್ರೀರಾಮುಲು ಅವರು ಸಹೋದರಿ ಶಾಂತ ಅವರು ಅಭ್ಯರ್ಥಿಯಾಗಿದ್ದಾರೆ. ಅವರ ಎದುರಾಳಿ ಯಾರು? ಎಂದು ಕಾದು ನೋಡಬೇಕು.












Click it and Unblock the Notifications