ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆ ದಿನಾಂಕ ಘೋಷಣೆ
ಬಳ್ಳಾರಿ, ಮಾರ್ಚ್ 29: ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಗೆ ಕೊನೆಗೂ ದಿನಾಂಕ ಘೋಷಣೆಯಾಗಿದೆ. ಏಪ್ರಿಲ್ 27ರಂದು ಚುನಾವಣೆ ನಡೆಯಲಿದ್ದು, ಏಪ್ರಿಲ್ 30ರಂದು ಫಲಿತಾಂಶ ಪ್ರಕಟವಾಗಲಿದೆ.
ಮಹಾನಗರ ಪಾಲಿಕೆಯ ಐದು ವರ್ಷಗಳ ಅವಧಿ ಪೂರ್ಣಗೊಂಡು ಎರಡು ವರ್ಷಗಳು ಕಳೆದಿತ್ತು. ಮಹಾನಗರ ಪಾಲಿಕೆ ಚುನಾವಣೆ ದಿನಾಂಕ ಘೋಷಣೆಗಾಗಿ ಜನರು ನಿರೀಕ್ಷೆಯಲ್ಲಿದ್ದರು. ವಾರ್ಡ್‌ಗಳನ್ನು ಪುನರ್ ವಿಂಗಡನೆ ಮಾಡಿ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಲಾಗಿದೆ.
ಏಪ್ರಿಲ್ 8ರಂದು ಚುನಾವಣೆ ಅಧಿಸೂಚನೆ ಪ್ರಕಟವಾಗಲಿದೆ. ಏಪ್ರಿಲ್ 8 ರಿಂದ 15ರ ತನಕ ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಕೆ ಮಾಡಬಹುದಾಗಿದೆ. ಏಪ್ರಿಲ್ 16ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.

ಅಭ್ಯರ್ಥಿಗಳು ನಾಮಪತ್ರಗಳನ್ನು ವಾಪಸ್ ಪಡೆಯಲು ಏಪ್ರಿಲ್ 19ರ ತನಕ ಅವಕಾಶವನ್ನು ನೀಡಲಾಗಿದೆ. ಏಪ್ರಿಲ್ 27ರಂದು ಬೆಳಗ್ಗೆ 7 ರಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ. ಏಪ್ರಿಲ್ 30ರಂದು ಫಲಿತಾಂಶ ಪ್ರಕಟವಾಗಲಿದೆ.
ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ 35 ವಾರ್ಡ್‌ಗಳಿತ್ತು. ವಾರ್ಡ್ ಪುನರ್ ವಿಂಗಡನೆ ಬಳಿಕ ವಾರ್ಡ್‌ಗಳ ಸಂಖ್ಯೆ 39ಕ್ಕೆ ಏರಿಕೆಯಾಗಿದೆ.
2019ರಲ್ಲಿಯೇ ಬಳ್ಳಾರಿ ಮಹಾನಗರ ಪಾಲಿಕೆಗೆ ಚುನಾವಣೆ ನಡೆಯಬೇಕಿತ್ತು. ವಾರ್ಡ್‌ವಾರು ಮೀಸಲಾತಿಯನ್ನು ಪ್ರಶ್ನಿಸಿ ಹಲವರು ಕೋರ್ಟ್ ಮೆಟ್ಟಿಲೇರಿದ್ದರಿಂದ ಚುನಾವಣೆ ವಿಳಂಬವಾಯಿತು. ಅಂತಿಮವಾಗಿ ಚುನಾವಣೆ ದಿನಾಂಕ ಘೋಷಣೆಯಾಗಿದೆ.












Click it and Unblock the Notifications