ಪ್ರತಿಭಟನೆ ನೆಪದಲ್ಲಿ ಸಾಮಾಜಿಕ ಅಂತರ ಮರೆತ ಕೈ ನಾಯಕರು

ಬಳ್ಳಾರಿ, ಅಕ್ಟೋಬರ್ 9: ಉತ್ತರಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಸಾಮಾಜಿಕ ಅಂತರ ಮಾಯವಾಗಿತ್ತು. ‌

ಬಳ್ಳಾರಿ ಜಿಲ್ಲೆಯ ಕಂಪ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಜೆ.ಎನ್ ಗಣೇಶ್ ನೇತೃತ್ವದಲ್ಲಿ ಇಂದು ಸಂಜೆ ನಡೆದ ಪಂಜಿನ ಮೆರವಣಿಗೆಯಲ್ಲಿ ಸಾವಿರಾರು ಜನ ಪಂಜು ಹಿಡಿದು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಆದರೆ ಪ್ರತಿಭಟನೆಯ ನೆಪದಲ್ಲಿ ಸಾಮಾಜಿಕ ಅಂತರವನ್ನು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮರೆತಿದ್ದರು. ಇನ್ನು ನಿನ್ನೆ ರಾತ್ರಿ ಕಂಪ್ಲಿ ಕ್ಷೇತ್ರದ ಕುರಗೋಡು ತಾಲೂಕಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಇಂದು ಕಂಪ್ಲಿ ಪಟ್ಟಣದಲ್ಲಿ ಸಾವಿರಾರು ಜನ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Ballari: Congress Leaders Forgotten The Social Gap In Protest

ಕಂಪ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಂಜಿನ ಮೆರವಣಿಗೆ ಮಾಡುವ ಮೂಲಕ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

Ballari: Congress Leaders Forgotten The Social Gap In Protest

ಬಳಿಕ ಸಿಎಂ ಯೋಗಿ ಆದಿತ್ಯನಾಥ್ ಪ್ರತಿಕೃತಿ ದಹಿಸಿ ಆಕ್ರೋಶ ಹೊರ ಹಾಕಿದರು. ಅಲ್ಲದೇ ಪ್ರತಿಭಟನಾ ನಿರತರನ್ನು ಕುರಿತು ಮಾತನಾಡಿದ ಕಾಂಗ್ರೆಸ್ ಶಾಸಕ ಜೆ ಎನ್ ಗಣೇಶ್ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+