• search
 • Live TV
ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹಸಿವಿನಿಂದ ಕೊರೊನಾ ಸೋಂಕಿತ ಸಾವನ್ನಪ್ಪಿದ ಪ್ರಕರಣ: ತನಿಖೆಗೆ ಬಳ್ಳಾರಿ ಡಿಸಿ ಆದೇಶ

By ಬಳ್ಳಾರಿ ಪ್ರತಿನಿಧಿ
|
Google Oneindia Kannada News

ಬಳ್ಳಾರಿ, ಆಗಸ್ಟ್ 20: ಹೋಮ್ ಐಸೋಲೇಷನ್ ನಲ್ಲಿದ್ದ ಕೊರೊನಾ ಸೋಂಕಿತ ಹಸಿವಿನಿಂದ ಬಳಲಿ ಸಾವನ್ನಪ್ಪಿರುವ ದಾರುಣ ಘಟನೆ ಬಳ್ಳಾರಿಯಲ್ಲಿ ವರದಿಯಾಗಿದೆ.

   Rama ಭಕ್ತರಿಗೆ ಕರೆಕೊಟ್ಟ ಚಂಪತ್ ರೈ | Oneindia Kannada

   ಬಳ್ಳಾರಿಯ ಬಿ.ಬೆಳಗಲ್ಲು ಗ್ರಾಮದಲ್ಲಿ ಈ ಘಟನೆ ಕಳೆದ ಮೂರು ದಿನಗಳ ಹಿಂದೆ ನಡೆದಿದ್ದು, ಮನೆಯಲ್ಲೇ ಪ್ರತ್ಯೇಕವಾಗಿದ್ದ ಕೊರೊನಾ ಸೋಂಕಿತ ವೃದ್ಧ ವ್ಯಕ್ತಿಗೆ ಸರಿಯಾಗಿ ಊಟ ಸಿಗದೇ ಸಾವನ್ನಪ್ಪಿದ್ದಾನೆ.

   ಚಿಕ್ಕಬಳ್ಳಾಪುರದಲ್ಲಿ ಜಲಾಶಯಕ್ಕೆ ಹಾರಿ ಶಿಕ್ಷಕ ಆತ್ಮಹತ್ಯೆಚಿಕ್ಕಬಳ್ಳಾಪುರದಲ್ಲಿ ಜಲಾಶಯಕ್ಕೆ ಹಾರಿ ಶಿಕ್ಷಕ ಆತ್ಮಹತ್ಯೆ

   ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾಡಳಿತ ತನಿಖೆಗೆ ಆದೇಶ ನೀಡಿದೆ. ಮೂಲಗಳ ಪ್ರಕಾರ ಬಳ್ಳಾರಿಯ ಬಿ.ಬೆಳಗಲ್ಲು ಗ್ರಾಮದ ವೃದ್ಧ ವ್ಯಕ್ತಿಗೆ ಸೋಂಕು ತಗುಲಿರುವ ವಿಚಾರ ತಿಳಿಯುತ್ತಲೇ ಆತನ ಕುಟುಂಬಸ್ಥರು ಆತನನ್ನು ಮನೆಯಲ್ಲೇ ಬಿಟ್ಟು ಪ್ರತ್ಯೇಕವಾಗಿ ಹೊರಟು ಹೋಗಿದ್ದರು.

   ಮನೆಯಲ್ಲೇ ಇದ್ದ ಸೋಂಕಿತ ವೃದ್ಧ ವ್ಯಕ್ತಿ ಕೋವಿಡ್ ಸಹಾಯವಾಣಿಗೆ ನಿರಂತರವಾಗಿ ಕರೆ ಮಾಡಿದರೂ ಯಾವುದೇ ರೀತಿಯ ಪ್ರಯೋಜನವಾಗಿರಲಿಲ್ಲ. ಅನ್ನ, ನೀರು, ಸೂಕ್ತ ಚಿಕಿತ್ಸೆ ಸಿಗದೇ ವೃದ್ಧ ವ್ಯಕ್ತಿ ಮನೆಯಲ್ಲೇ ನರಳಿ ನರಳಿ ಪ್ರಾಣ ಬಿಟ್ಟಿದ್ದಾನೆ. ಸದ್ಯ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗೆ ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ಆದೇಶ ನೀಡಿದ್ದಾರೆ.

   English summary
   Coronavirus Infected Person Died For Starvation this incident happened in Ballari District.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X