ಬಳ್ಳಾರಿ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿವೆ
ಬಳ್ಳಾರಿ, ನವೆಂಬರ್ 14: ಇಲ್ಲಿನ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳು ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿದೆ.
ಅರ್ಹ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಡಿಸೆಂಬರ್ 12, 2017.
ಒಟ್ಟು ಹುದ್ದೆಗಳ ಸಂಖ್ಯೆ : 62
ಹುದ್ದೆಗಳ ವಿವರ:
1) ದ್ವಿತೀಯ ದರ್ಜೆ ಸಹಾಯಕರು : 33
2) ಬೆರಳಚ್ಚುಗಾರರು: 3
3) ಕಿರಿಯ ಸೇವಕರು : 26
ವಯೋಮಿತಿ : ಕನಿಷ್ಟ 18 ರಿಂದ 35 ವರ್ಷದೊಳಗಿರಬೇಕು. ನಿಯಮಾವಳಿ ಅನ್ವಯ ಮೀಸಲಾತಿ ಪಡೆಯುವವರಿಗೆ ವಯೋಮಿತಿಯಲ್ಲಿ ಸಡಿಲತೆ ನೀಡಲಾಗಿದೆ.
ವಿದ್ಯಾರ್ಹತೆ : ಮೊದಲ ಎರಡು ಕ್ರಮ ಸಂಖ್ಯೆಯ ಹುದ್ದೆಗಳಿಗೆ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು.
ಕ್ರಮ ಸಂಖ್ಯೆ 3ರ ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಾಸಾಗಿರಬೇಕು.
ಅರ್ಜಿ ಶುಲ್ಕ : ಸಾಮಾನ್ಯ ಮತ್ತು ಇತರ ಅಭ್ಯರ್ಥಿಗಳಿಗೆ 600 ರೂ, ಪರಿಶಿಷ್ಟ ಜಾತಿ, ಪರಿಶಿಷ್ಟ ಪ್ರವರ್ಗ-1ರ ಅಭ್ಯರ್ಥಿಗಳಿಗೆ 300 ರೂ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 04-12-2017
ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಹೆಚ್ಚಿನ ವಿವರಗಳನ್ನು ಕೆಳಗಿನ ನೋಟಿಫಿಕೇಷನ್ ಪಿಡಿಎಫ್ ನಿಂದ ಪಡೆಯಿರಿ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ
Download











Click it and Unblock the Notifications