ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ?

ಬಳ್ಳಾರಿ, ಫೆಬ್ರವರಿ 24: " ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ನನ್ನನ್ನು ಬದಲಾವಣೆ ಮಾಡುವುದು ಮುಖ್ಯಮಂತ್ರಿಗಳ ವಿವೇಚನಗೆ ಬಿಟ್ಟಿದ್ದು" ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಹೇಳಿದರು.

ಬಳ್ಳಾರಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ನಂತರ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.

"ನನ್ನನ್ನು ಬಳ್ಳಾರಿ ಜಿಲ್ಲಾ ಉಸ್ತುವಾರಿಯಿಂದ ಬದಲಾಯಿಸಿ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಅವರಿಗೆ ನೀಡಿದರೇ ಸ್ವತಃ ನಾನೇ ಸ್ವಾಗತಿಸುತ್ತೇನೆ"ಎಂದು ಆನಂದ್ ಸಿಂಗ್ ಸ್ಪಷ್ಟಪಡಿಸಿದರು.

Ballari District In Charge Minister May Change

"ಒಂದು ವೇಳೆ ಅವರು ಮತ್ತು ನನ್ನನ್ನು ಬಿಟ್ಟು ಬೇರೆಯವರನ್ನು ನಿಯೋಜಿಸದರೇ ಮುಖ್ಯಮಂತ್ರಿಗಳ ಬಳಿ ವಿಚಾರಿಸುತ್ತೇನೆ. ಶಾಸಕ ಸೋಮಶೇಖರ ರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡಿ ಜಿಲ್ಲಾ ಉಸ್ತುವಾರಿ ನೀಡಿದರೇ ನನ್ನ ಅಭ್ಯಂತರವೇನಿಲ್ಲ" ಎಂದರು.

ಉಸ್ತುವಾರಿ ಕೇಳಿದ್ದ ಶ್ರೀರಾಮುಲು; ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ಶಾಸಕ ಬಿ. ಶ್ರೀರಾಮುಲು ಬಳ್ಳಾರಿ ಜಿಲ್ಲಾ ಉಸ್ತುವಾರಿಯನ್ನು ಕೇಳಿದ್ದರು. ಆದರೆ, ಅದು ಸಿಕ್ಕಿರಲಿಲ್ಲ. ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಅವರಿಗೆ ಉಸ್ತುವಾರಿ ನೀಡಲಾಗಿದೆ.

ಈಗ ಬಳ್ಳಾರಿ ಮತ್ತು ವಿಜಯನಗರ ಪ್ರತ್ಯೇಕ ಜಿಲ್ಲೆಗಳಾಗಿವೆ. ಈಗ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರು ಬದಲಾಗಬಹುದು ಎಂಬ ಸುದ್ದಿ ಹಬ್ಬಿದೆ. ಉಸ್ತುವಾರಿ ಬದಲಾದರೆ ಶ್ರೀರಾಮುಲು ಅವರಿಗೆ ಉಸ್ತುವಾರಿ ನೀಡಬಹುದು ಎಂಬ ಸುದ್ದಿ ಹಬ್ಬಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+