Get Updates
Get notified of breaking news, exclusive insights, and must-see stories!

ಬಳ್ಳಾರಿ ನಗರ ಚುನಾವಣಾ ಫಲಿತಾಂಶ 2023: ಕಾಂಗ್ರೆಸ್‌ ಅಭ್ಯರ್ಥಿ ನಾರಾ ಭರತ್ ರೆಡ್ಡಿ ಗೆಲುವು

ಬಳ್ಳಾರಿ ಮೇ. 13: ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಮತ ಎಣಿಕೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್‌ ಅಭ್ಯರ್ಥಿ ನಾರಾ ಭರತ್ ರೆಡ್ಡಿ ಗೆಲುವು ಸಾಧಿಸಿದ್ದಾರೆ.

ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಎರಡನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, ಬೆಳಗ್ಗೆ 10:12 ಸಮಯಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ನಾರಾ ಭರತ್ ರೆಡ್ಡಿ 2926 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಮತ ಎಣಿಕೆ ಆರಂಭವಾಗಿದ್ದು, ಬೆಳಗ್ಗೆ 8:37ರ ಸಮಯಕ್ಕೆ ಬಿಜೆಪಿ ಪಕ್ಷದ ಅಭ್ಯರ್ಥಿ ಸೋಮಶೇಖರ್‌ ರೆಡ್ಡಿ ಮುನ್ನಡೆ ಸಾಧಿಸಿದ್ದಾರೆ.

ಬೆಳಗ್ಗೆ 8:15 ಸಮಯಕ್ಕೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಅರುಣಾ ಲಕ್ಷ್ಮೀ ಮುನ್ನಡೆ ಸಾಧಿಸಿದ್ದಾರೆ.

ತೀವ್ರ ಕುತೂಹಲ ಮೂಡಿಸಿದ್ದ ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಮತ ಎಣಿಕೆ ಇನ್ನೇನು ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಒಟ್ಟು 2615 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.

ಗಣಿ ನಾಡು ಬಳ್ಳಾರಿಯಲ್ಲಿ ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯ ಹೈವೋಲ್ಟೇಜ್‌ ಕ್ಷೇತ್ರಗಳಲ್ಲಿ ಒಂದು. ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಆರಂಭದ ದಿನಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ಪೈಪೋಟಿ ಎಂಬಂತೆ ಕಂಡು ಬಂದರೂ ತನನಂತರ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಆರಂಭವಾಯಿತು.

Ballari Assembly Election Result 2023

ಬಿಜೆಪಿ ಅಭ್ಯರ್ಥಿ ಜಿ.ಸೋಮಶೇಖರ ರೆಡ್ಡಿ ಹಾಗೂ ಕಾಂಗ್ರೆಸ್‌ನ ನಾರಾ ಭರತ್ ರೆಡ್ಡಿ ನಡುವೆ ನೇರಾನೇರಾ ಪೈಪೋಟಿ ಇದ್ದ ಸಂದರ್ಭದಲ್ಲಿ ರಾಜ್ಯ ರಾಜಕೀಯದಲ್ಲಿ ಸೆಂಕೆಂಡ್‌ ಇನ್ನಿಂಗ್ಸ್‌ ಆರಂಭಿಸಿದ ಗಾಲಿ ಜನಾರ್ದನ ರೆಡ್ಡಿ ರಾಷ್ಟ್ರೀಯ ಪಕ್ಷಗಳಿಗೆ ಸವಾಲುವೊಡ್ಡಿದಂತೆ ತಮ್ಮ ಹೊಸ ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಸ್ಥಾಪಿಸಿದರು. ತಮ್ಮ ತವರು ಕ್ಷೇತ್ರ ಬಳ್ಳಾರಿಯನ್ನು ಮರಳಿ ಪಡೆಯಲು ತಮ್ಮ ಪತ್ನಿ ಅರುಣಾ ಲಕ್ಷೀಯನ್ನು ಕಣಕ್ಕಿಳಿಸಿದರು. ಅಂದಿನಿಂದ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಅತ್ತಿಗೆ-ಮೈದುನನ ನಡುವೆ ಪೈಪೋಟಿ ಜೊತೆಗೆ ಕಾಂಗ್ರೆಸ್‌ ಅಭ್ಯರ್ಥಿ ಹೋರಾಟದಿಂದ ಕ್ಷೇತ್ರದಲ್ಲಿ ತ್ರೀಕೋನ ಸ್ಪರ್ಧೆ ಆರಂಭವಾಯಿತು.

ಇನ್ನು ಬಳ್ಳಾರಿ ನಗರ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್ ಕೈ ತಪ್ಪಿದ ಕಾರಣ ಅಸಮಾಧಾನಗೊಂಡಿದ್ದ ಅನಿಲ್ ಲಾಡ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡು ಕಣದಲ್ಲಿದ್ದಾರೆ. ಜೊತೆಗೆ ಆಮ್‌ ಆದ್ಮಿ ಪಕ್ಷದ ವಿ.ದೊಡ್ಡ ಕೇಶವ ರೆಡ್ಡಿ ಕೂಡ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಕಣದಲ್ಲಿದ್ದು, ಕ್ಷೇತ್ರದಲ್ಲಿ ಈ ಬಾರಿ ಹಣಾಹಣಿ ಜೋರಾಗಿದೆ.

Ballari Assembly Election Result 2023

ಬಿಜೆಪಿ ಭದ್ರಕೋಟೆಯಾಗಿದ್ದ ಬಳ್ಳಾರಿ ವಿಧಾನಸಭಾ ಕ್ಷೇತ್ರದಲ್ಲಿ 2008ರ ವಿಧಾನಸಭಾ ಚುನಾವಣೆಯಲ್ಲಿ ಗಾಲಿ ಸೋಮಶೇಖರ ರೆಡ್ಡಿ 61,991 ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್‌ ಅಭ್ಯರ್ಥಿ ಅನಿಲ್‌ ಲಾಡ್‌ಗೆ ಸೋಲುಣಿಸಿದರು. ಬಳಿಕ ನಡೆದ 2013 ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತೆಕ್ಕೆಯಲ್ಲಿದ್ದ ಕ್ಷೇತ್ರದಲ್ಲಿ ಅನಿಲ್‌ ಲಾಡ್ ಗೆಲುವು ಸಾಧಿಸುವಲ್ಲಿ ಯಶಸ್ವಿಯಾದರು. 74,854 ಮತಗಳನ್ನು ಪಡೆಯುವ ಮೂಲಕ 33,294 ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಗಾಲಿ ಸೋಮಶೇಖರ ರೆಡ್ಡಿ ಅವರನ್ನು ಸೋಲಿಸಿದರು.

ಸೋಲಿನ ಬಳಿಕ ಕಂಗೆಡದ ಗಾಲಿ ಸೋಮಶೇಖರ ರೆಡ್ಡಿ ಜನರ ಸಂಪರ್ಕದಲ್ಲೇ ಇದ್ದು, 2018ರ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರವನ್ನು ಮರಳಿ ಪಡೆದರು. 76, 589 ಮತಗಳನ್ನು ಗಳಿಸುವ ಮೂಲಕ 16,155 ಮತಗಳ ಅಂತರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನಿಲ್‌ ಲಾಡ್‌ಗೆ ಸೋಲುಣಿಸಿದರು. ಸದ್ಯ ಕಾಂಗ್ರೆಸ್‌ ಪಕ್ಷ ತೊರೆದಿರುವ ಅನಿಲ್‌ ಲಾಡ್ ಜೆಡಿಎಸ್‌ ಪಕ್ಷದ ಅಭ್ಯರ್ಥಿಯಾಗಿ ಕಣದಲ್ಲಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್‌ ಎರಡೂ ರಾಷ್ಟ್ರೀಯ ಪಕ್ಷಗಳನ್ನು ಎದುರಿಸುತ್ತಿದ್ದಾರೆ.

ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,28,051 ಮತಗಳಿದ್ದು, 112,738 ಪುರುಷ ಮತಗಳು ಹಾಗೂ 115,295 ಮಹಿಳಾ ಮತಗಳಿವೆ. ಇನ್ನು 18 ತೃತೀಯಲಿಂಗಿ ಮತಗಳಿವೆ. ಲಿಂಗಾಯತ ಮತದಾರರ ಪ್ರಾಬಲ್ಯ ಇರುವ ಈ ಕ್ಷೇತ್ರದಲ್ಲಿ ಮುಸ್ಲಿಂ, ಕುರುಬ ಸಮದಾಯದ ಮತಗಳು ಹೆಚ್ಚಿವೆ. ಆದರೆ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಹಾಗೂ ಬಲಿಜ ಜೊತೆಗೆ ರೆಡ್ಡಿ ಮತಗಳು ಇಲ್ಲಿ ನಿರ್ಣಾಯಕ ಮತಗಳೆನಿಸಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+