ಸಂಡೂರಿನ ನೂರಾರು ಎಕರೆ ಅರಣ್ಯ ಭೂಮಿಯಲ್ಲಿ ರೈತರ ಉಳುಮೆ: ಸಂಸದರಿಂದ ಅಭಯ
ಬಳ್ಳಾರಿ, ಸೆಪ್ಟೆಂಬರ್ 10: ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಎಂ.ಲಕ್ಲಹಳ್ಳಿ ಸುತ್ತಲೂ ಇರುವ ನೂರಾರು ಎಕರೆ ಅರಣ್ಯ ಭೂಮಿಯಲ್ಲಿ ರೈತರು ಉಳುಮೆ ಮಾಡುತ್ತಿರುವುದನ್ನು ಮನಗಂಡ ಅರಣ್ಯ ಇಲಾಖೆಯ ಅಧಿಕಾರಿಗಳು, ಉಳುಮೆ ಮಾಡುವುದನ್ನು ತಡೆದು ಆ ಭೂಮಿಯಲ್ಲಿ ಗಿಡ ನೆಡುವ ಕಾರ್ಯಕ್ಕೆ ಮುಂದಾಗಿದ್ದಾರೆ.
ಇದರಿಂದ ನೂರಾರು ರೈತ ಕುಟುಂಬಗಳು ಬೀದಿ ಪಾಲಾಗುವುದನ್ನು ಸೂಕ್ಷ್ಮವಾಗಿ ಅರಿತುಕೊಂಡ ಬಳ್ಳಾರಿಯ ಸಂಸದ ವೈ.ದೇವೇಂದ್ರಪ್ಪ, ಕೂಡಲೇ ಎಂ.ಲಕ್ಲಹಳ್ಳಿ ಗ್ರಾಮಕ್ಕೆ ಭೇಟಿ ಕೊಟ್ಟು, ರೈತರನ್ನು ಒಕ್ಕಲೆಬ್ಬಿಸುವುದು ಬೇಡ ಎಂದು ಅರಣ್ಯ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ಸತತ 60 ವರ್ಷಗಳಿಂದಲೂ ಈ ಭೂಮಿಯಲ್ಲಿ ರೈತರು ಉಳುಮೆ ಮಾಡುತ್ತಾ ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಈಗ ದಿಢೀರನೆ ಉಳುಮೆ ಮಾಡೋದನ್ನು ಬಿಡಿಸಿ ಗಿಡ-ಮರಗಳನ್ನು ನೆಡಲು ಮುಂದಾಗಿರುವುದು ತರವಲ್ಲ ಎಂದು ಸಂಸದರು ಹೇಳಿದರು.

ಈ ಸಂಬಂಧ ಅರಣ್ಯ ಸಚಿವ ಆನಂದಸಿಂಗ್ ಅವರೊಂದಿಗೆ ಚರ್ಚಿಸಿ, ಅರಣ್ಯ ಇಲಾಖೆಯ ಸುಪರ್ದಿಗೆ ಒಳಪಡುವ ಈ ಭೂಮಿಯನ್ನ ರೈತರ ಉಳುಮೆಗೆ ಅವಕಾಶ ನೀಡುವಂತೆ ಕೋರುವೆ. ಅಂದಾಜು 150 ಎಕರೆಯ ಭೂಮಿಯಲ್ಲಿ ನಾನಾ ಬೆಳೆಗಳನ್ನು ರೈತರು ಬೆಳೆಯುತ್ತಿದ್ದಾರೆ ಎಂದರು.

ಹೀಗಾಗಿ, ಅರಣ್ಯ ಅಧಿಕಾರಿಗಳು ರೈತರೊಂದಿಗೆ ಗೌರವಯುತವಾಗಿ ನಡೆದುಕೊಳ್ಳಬೇಕು. ನಾನು ಸಚಿವರೊಂದಿಗೆ ಚರ್ಚಿಸಿ ಉಳುಮೆ ಮಾಡಲು ಅವಕಾಶ ಕಲ್ಪಿಸಿಕೊಡುವುದಾಗಿ ಅಲ್ಲಿ ನೆರೆದಿದ್ದ ರೈತರಿಗೆ ಸಂಸದ ವೈ.ದೇವೇಂದ್ರಪ್ಪ ಭರವಸೆ ನೀಡಿದರು.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ










Click it and Unblock the Notifications