• search
  • Live TV
ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಜ್ಯದ ಅತೀ ದೊಡ್ಡ ಗಣಿ ಕಂಪನಿಯಲ್ಲಿ ಕಾಣಿಸಿಕೊಂಡ ಸೋಂಕು

By ಬಳ್ಳಾರಿ ಪ್ರತಿನಿಧಿ
|

ಬಳ್ಳಾರಿ, ಜೂನ್ 05: ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲಿರುವ ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಮತ್ತೊಬ್ಬ ಕಾರ್ಮಿಕನಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 54ಕ್ಕೆ ಏರಿಕೆಯಾಗಿದೆ.

ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆಯ ಸಿಎಂಬಿ ಸೆಂಟರ್ ನಲ್ಲಿ ಕೆಲಸ‌ ಮಾಡುತ್ತಿದ್ದ 42 ವರ್ಷದ ಉದ್ಯೋಗಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಸಹೊದ್ಯೋಗಿಗಳಲ್ಲಿ ಆತಂಕ ಸೃಷ್ಟಿಯಾಗಿದೆ.

.

ಮಹಾರಾಷ್ಟ್ರದ ಸೊಲ್ಲಾಪುರ ಜೈಲಿನಲ್ಲಿ 60 ಮಂದಿಗೆ ಕೊರೊನಾ ಸೋಂಕು

ಇದೀಗ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾದ ವ್ಯಕ್ತಿಯು ಯಾವುದೇ ಸಾಂಸ್ಥಿಕ ಅಥವಾ ಹೋಂ ಕ್ವಾರಂಟೈನ್ ನಲ್ಲಿರಲಿಲ್ಲ. ಸೋಂಕಿತನ ಟ್ರಾವೆಲ್ ಹಿಸ್ಟರಿಯನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಲು ಮುಂದಾಗಿದ್ದಾರೆ. ಸೋಂಕಿತ ವ್ಯಕ್ತಿಯನ್ನ ಜಿಲ್ಲಾ ಕೋವಿಡ್-19 ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಜಿಂದಾಲ್ ಕಂಪನಿಯಲ್ಲಿ ಇದುವರೆಗೆ ಇಬ್ಬರಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಜಿಂದಾಲ್ ಕಂಪನಿಯಲ್ಲಿ ಇತರೆ ಉದ್ಯೋಗಿಗಳಲ್ಲಿ ಆತಂಕ‌ ಹೆಚ್ಚಿಸಿದೆ.

English summary
Two labours of jindal company in ballary tested coronavirus positive
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X