ಬಳ್ಳಾರಿ ಸ್ಥಳೀಯ ಸಂಸ್ಥೆ ಚುನಾವಣೆ: ಒಂದು ಕಮಲ, ಒಂದು ಹಸ್ತ

ಬಳ್ಳಾರಿ, ಫೆಬ್ರವರಿ 11: ಜಿಲ್ಲೆಯ ಸಿರಗುಪ್ಪ ನಗರಸಭೆ ಮತ್ತು ತೆಕ್ಕಲಕೋಟೆ ಪಟ್ಟಣ ಪಂಚಾಯಿತಿಗಳ ಪೈಕಿ ಒಂದನ್ನು ಉಳಿಸಿಕೊಂಡಿರುವ ಬಿಜೆಪಿ, ಇನ್ನೊಂದರಲ್ಲಿ 'ಕೈ'ಗೆ ಮಣಿದಿದೆ.

ಸಿರಗುಪ್ಪ ನಗರಸಭೆ ಮತ್ತು ತೆಕ್ಕಲಕೋಟೆ ಪಟ್ಟಣ ಪಂಚಾಯಿತಿ ಸ್ಥಳೀಯ ಸಂಸ್ಥೆ ಚುನಾವಣೆಗಳ ಫಲಿತಾಂಶ ಮಂಗಳವಾರ ಹೊರಬಿದ್ದಿದೆ. ಇದರಲ್ಲಿ ಸಿರಗುಪ್ಪ ನಗರಸಭೆ ಕಾಂಗ್ರೆಸ್ ಪಾಲಾಗಿದ್ದರೆ, ತೆಕ್ಕಲಕೋಟೆ ಪಟ್ಟಣ ಪಂಚಾಯಿತಿಯನ್ನು ಉಳಿಸಿಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಈ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ದಿಗ್ವಿಜಯ ಸಾಧಿಸಿತ್ತು.

ಸಿರಗುಪ್ಪ ನಗರಸಭೆಯ 31 ವಾರ್ಡ್‌ಗಳಲ್ಲಿ ಬಿಜೆಪಿ ಎಂಟರಲ್ಲಿ ಗೆದ್ದಿದ್ದರೆ, ಕಾಂಗ್ರೆಸ್ 16 ಕ್ಷೇತ್ರಗಳಲ್ಲಿ ಮತ್ತು ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಜಯಗಳಿಸಿದ್ದಾರೆ. ಇದರಿಂದ ಕಾಂಗ್ರೆಸ್ ಅತ್ಯಧಿಕ ಸೀಟುಗಳೊಂದಿಗೆ ನಗರಸಭೆಯನ್ನು ತನ್ನ ಹಿಡಿತಕ್ಕೆ ತೆಗೆದುಕೊಂಡಿದೆ.

 Ballari Local Body Elections Siruguppa Congress tekkalakote BJP

ತೆಕ್ಕಲಕೋಟೆ ಪಟ್ಟಣ ಪಂಚಾಯಿತಿಯಲ್ಲಿ 20 ವಾರ್ಡ್‌ಗಳಿಗೆ ಚುನಾವಣೆ ನಡೆದಿದ್ದು, ಬಿಜೆಪಿ 11ರಲ್ಲಿ ಗೆದ್ದು ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ಉಳಿದ 9 ಕ್ಷೇತ್ರಗಳನ್ನು ಗೆದ್ದುಕೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+