Ballari Lok Sabha Election 2024 Result Live: ಶ್ರೀರಾಮುಲುಗೆ ಮುಖಭಂಗ; ಕಾಂಗ್ರೆಸ್ ಅಭ್ಯರ್ಥಿಗೆ ಭರ್ಜರಿ ಜಯ
ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರಿಗೆ ಸೋಲಿನ ಆಘಾತ ಸಿಕ್ಕಿದ್ದು, ಕಾಂಗ್ರೆಸ್ ಅಭ್ಯರ್ಥಿ ಇ. ತುಕಾರಾಂ ಗೆಲುವಿನ ನಗೆ ಬೀರಿದ್ದಾರೆ.
ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಶೇಕಡಾ 73.59 ರಷ್ಟು ಮತದಾನವಾಗಿತ್ತು. ಒಟ್ಟು 18,84,040 ಮತದಾರರಿದ್ದು, 13,86,553 ಮತದಾರರು ಮತ ಚಲಾಯಿಸಿದ್ದರು.

2019ರ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಸೋತಿದ್ದ ಕಾಂಗ್ರೆಸ್ ಈಗ ಗೆದ್ದು ಬೀಗಿದೆ. ಇ ತುಕಾರಾಂ ಗೆಲುವು ಖಚಿತವಾಗಿದ್ದು ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.












Click it and Unblock the Notifications