• search
 • Live TV
ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಳ್ಳಾರಿ ಮಹಾನಗರ ಪಾಲಿಕೆ ಕಚೇರಿ ಸೀಲ್ ಡೌನ್

|

ಬಳ್ಳಾರಿ, ಆಗಸ್ಟ್ 05 : ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಕಚೇರಿಯಲ್ಲಿ ಅನೇಕರಿಗೆ ಕೊರೊ‌ನಾ ವೈರಸ್ ಸೋಂಕು ದೃಢಪಟ್ಟಿದೆ. ಕಚೇರಿಯನ್ನು ಸ್ಯಾನಿಟೈಸ್ ಮಾಡಲು ಆಗಸ್ಟ್ 6ರಂದು ಕಚೇರಿಯನ್ನು ಮುಚ್ಚಲಾಗುತ್ತದೆ ಎಂದು ಪ್ರಕಟಣೆ ಹೇಳಿದೆ.

   Yediyurappa watched Ram mandir bhumi puja at Manipal hospital | Oneindia Kannada

   ಮಹಾನಗರ ಪಾಲಿಕೆ ಆಯುಕ್ತರಾದ ತುಷಾರಮಣಿ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ. ಗುರುವಾರ ಪಾಲಿಕೆಯನ್ನು ಸೀಲ್ ಡೌನ್ ಮಾಡಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಚೇರಿಯಲ್ಲಿ ಹಲವು ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ.

   ಬಳ್ಳಾರಿ ಜಿಲ್ಲೆಯಲ್ಲಿ ಇಂದು 375 ಜನರಿಗೆ ಕೊರೊನಾ ಸೋಂಕು ದೃಢ, 4 ಜನ ಸಾವು

   ಗುರುವಾರ ಪಾಲಿಕೆ ಕಚೇರಿ ಸಂಪೂರ್ಣ ಸೀಲ್ ಡೌನ್ ಮಾಡಲಾಗುತ್ತಿದೆ. ಶುಕ್ರವಾರದಿಂದ ಕಚೇರಿ ಎಂದಿನಂತೆ ಕಾರ್ಯನಿರ್ವಹಿಸಲಿದೆ. ಜನರು ಸಹಕಾರ ನೀಡಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ. ಬಳ್ಳಾರಿ ನಾಗರಿಕರು ಗಮನಹರಿಸಬೇಕು ಎಂದು ಅವರು ತಿಳಿಸಿದ್ದಾರೆ.

   ಬಳ್ಳಾರಿ; ವಾರದ ಹಿಂದೆ ಹೆಂಡತಿ ಕೊಂದು ಜೈಲು ಸೇರಿದ್ದವನಿಗೆ ಕೊರೊನಾ

   ಬಳ್ಳಾರಿ ಜಿಲ್ಲೆಯಲ್ಲಿ ಬುಧವಾರ 631ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8,161ಕ್ಕೆ ಏರಿಕೆಯಾಗಿದೆ. ಇಂದು 237 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 3,801.

   ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಹೆರಿಗೆ; ತಾಯಿ, ಮಗು ಸುರಕ್ಷಿತ

   ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆದ್ದರಿಂದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವಗಳನ್ನು ರದ್ದುಪಡಿಸಲಾಗಿದೆ.

   ಆಗಸ್ಟ್ 16ರಿಂದ ನಡೆಯಬೇಕಿದ್ದ ಸಿರಗುಪ್ಪ ತಾಲೂಕಿನ ದರೂರು ಗ್ರಾಮದ ವೀರಭದ್ರೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ಮತ್ತು ಆಗಸ್ಟ್ 16 ರಿಂದ 19ರ ತನಕ ನಡೆಯಬೇಕಿದ್ದ ಏತ್ತಿನ ಬೂದಿಹಾಳ್ ಗ್ರಾಮದ ಕಟ್ಟೆಬಸವೇಶ್ವರಸ್ವಾಮಿ ಜಾತ್ರೆ ರದ್ದಾಗಿದೆ.

   English summary
   After several staff tested positive for COVID 19 Ballari municipal corporation office closed for August 6, 2020 for sanitization.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X