ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಳ್ಳಾರಿ ವಿಮ್ಸ್ ಆಸ್ಪತ್ರೆಯ ದುರಂತ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

|
Google Oneindia Kannada News

ಬಳ್ಳಾರಿ ಸೆಪ್ಟೆಂಬರ್ 15: ''ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಬುಧವಾರ (ಸೆಪ್ಟೆಂಬರ್ 14) ಸಂಭವಿಸಿದ ಘಟನೆ ಅತ್ಯಂತ ದುರದೃಷ್ಟಕರವಾಗಿದ್ದು, ಘಟನೆಯ ಬಗ್ಗೆ ಸೂಕ್ತ ಇಲಾಖಾ ತನಿಖೆ ನಡೆಸಿ ಆಡಳಿತಾತ್ಮಕ ಹಾಗೂ ತಾಂತ್ರಿಕ ಲೋಪದೋಷಗಳ ಬಗ್ಗೆ ವರದಿ ನೀಡಲು ಬಿಎಂಸಿಆರ್‌ಐ ಸಂಸ್ಥೆಯ ಡಾ.ಸ್ಮಿತಾ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಲಾಗಿದೆ'' ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ಸಂಭವಿಸಿದ ಎರಡು ಅನಿರೀಕ್ಷಿತ ಸಾವುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ತನಿಖೆ ನಡೆಸುವ ಸಲುವಾಗಿ ಐದು ಸದಸ್ಯರನ್ನೊಳಗೊಂಡಂತೆ ಸಮಿತಿಯೊಂದನ್ನು ರಚಿಸಲಾಗಿದೆ. ಜೊತೆಗೆ ಈ ಸದಸ್ಯರಿಗೆ ತುರ್ತಾಗಿ ವರದಿಯನ್ನು ನೀಡುವಂತೆ ಕೋರಲಾಗಿದೆ.

Vims Hospital Bellary : ವಿದ್ಯುತ್‌ ವ್ಯತ್ಯಯ, ಆಕ್ಸಿಜನ್‌ ಕೊರತೆಯುಂಟಾಗಿ ಇಬ್ಬರ ಸಾವು; ವಿಮ್ಸ್‌ ನಿರ್ದೇಶಕ ಹೇಳಿದ್ದೇನು?Vims Hospital Bellary : ವಿದ್ಯುತ್‌ ವ್ಯತ್ಯಯ, ಆಕ್ಸಿಜನ್‌ ಕೊರತೆಯುಂಟಾಗಿ ಇಬ್ಬರ ಸಾವು; ವಿಮ್ಸ್‌ ನಿರ್ದೇಶಕ ಹೇಳಿದ್ದೇನು?

ಈ ಉನ್ನತಮಟ್ಟದ ಸಮಿತಿಯಲ್ಲಿ ಪ್ಲಾಸ್ಟಿಕ್ ಸರ್ಜರಿ ವಿಭಾಗದ ಡಾ. ಸ್ಮಿತಾ ಅವರನ್ನು ಅಧ್ಯಕ್ಷರಾಗಿ, ಜಂಟಿ ನಿರ್ದೇಶಕ ಡಾ. ಸಿದ್ದಿಕಿ, ಜನರಲ್ ಮೆಡಿಸಿನ್ ವಿಭಾಗದ ಡಾ. ದಿವಾಕರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಪಾಲಕ ಅಭಿಯಂತರು ಯೋಗೇಶ್ ಹಾಗೂ ವೈದ್ಯಕೀಯ ಶಕ್ಷಿಣ ನಿರ್ದೇಶಶನಾಲಯ ಮುಖ್ಯ ಆಡಳಿತಾಧಿಕಾರಿ ಶ್ರೀಮತಿ ಉಮಾ ಅವರನ್ನು ಸದಸ್ಯರಾಗಿದ್ದಾರೆ.

Ballari Vims Hospital Tragedy: Govt forms High Level Committee to probe

ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಸಮಸ್ಯೆಯಿಂದ ವೆಂಟಿಲೇಟರ್ ಸ್ಥಗಿತಗೊಂಡ ಪರಿಣಾಮ ಮೂವರು ರೋಗಿಗಳು ಸಾವನ್ನಪ್ಪಿದ್ದಾರೆ. ವೆಂಟಿಲೇಟರ್​ ಮೇಲ್ಲಿದ್ದ ರೋಗಿಗಳಾದ ಮೌಲಾ ಹುಸೇನ್ ಹಾಗೂ ಚೆಟ್ಟೆಮ್ಮ ಕೊನೆಯುಸಿರೆಳೆದಿದ್ದಾರೆ. ಮೂತ್ರಕೋಶ ವೈಫಲ್ಯದಿಂದ ಬಳಲುತ್ತಿದ್ದ ಮತ್ತೊಬ್ಬ ರೋಗಿ ಸಹ ಸಾವನ್ನಪ್ಪಿದ್ದಾರೆ. ಐಸಿಯುನಲ್ಲಿದ್ದ 10 ರೋಗಿಗಳ ಪೈಕಿ, ಈ ಮೂವರು ರೋಗಿಗಳು ಅಸುನೀಗಿದ್ದಾರೆ. ಘಟನೆ ನಡೆದ ಬಳಿಕ ವಿಮ್ಸ್ ಆಸ್ಪತ್ರೆಯವಿರುದ್ಧ ಮೃತರ ಸಂಬಂಧಿಕರು ಆಕ್ರೋಶ ಹೊರಹಾಕಿದ್ದಾರೆ. ತಮ್ಮ ಸಂಬಂಧಿಕರ ಸಾವಿಗೆ ಆಸ್ಪತ್ರೆಯ ನಿರ್ಲಕ್ಷ್ಯವೇ ಕಾರಣ ಎಂದು ದೂರಿದ್ದಾರೆ. ಜೊತೆಗೆ ಆಸ್ಪತ್ರೆಯ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಆದರೆ ಆರಂಭದಲ್ಲಿ ಮೃತ ಸಂಬಂಧಿಕರ ಆರೋಪಕ್ಕೆ ಆಸ್ಪತ್ರೆ ಆಡಳಿತಾಧಿಕಾರಿಗಳು ಸ್ಪಷ್ಟನೆ ನೀಡಲು ನಿರಾಕರಿಸಿದ್ದಾರೆ. ಬಳಿಕ ಬಳ್ಳಾರಿ ವಿಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ. ಗಂಗಾಧರ ಗೌಡ ಮಾತನಾಡಿ ಮೃತ ಸಂಬಂಧಿಕರ ಆರೋಪವನ್ನು ತಳ್ಳಿ ಹಾಕಿದ್ದಾರೆ.

ವಿಮ್ಸ್‌ನಲ್ಲಿ ವಿದ್ಯುತ್‌ ವ್ಯತ್ಯಯ, ಆಕ್ಸಿಜನ್‌ ಕೊರತೆ: ಇಬ್ಬರ ಸಾವು?ವಿಮ್ಸ್‌ನಲ್ಲಿ ವಿದ್ಯುತ್‌ ವ್ಯತ್ಯಯ, ಆಕ್ಸಿಜನ್‌ ಕೊರತೆ: ಇಬ್ಬರ ಸಾವು?

ನಿರ್ದೇಶಕ ಡಾ. ಗಂಗಾಧರ ಗೌಡ ಮಾತನಾಡಿ, 'ವಿಮ್ಸ್ ಆಸ್ಪತ್ರೆಯಲ್ಲಿ ಆಗಿರುವ ಸಾವುಗಳು ವಿವಿಧ ತೀವ್ರತರದ ಆರೋಗ್ಯ ಸಮಸ್ಯೆ ಗಳಿಂದ ಸಂಭವಿಸಿವೆ. ಒಬ್ಬ ರೋಗಿಯು ವಿಷಪೂರಿತ ಹಾವಿನ ಕಡಿತದಿಂದ ದೇಹದಲ್ಲಿ ಆಂತರಿಕ ರಕ್ತಸ್ರಾವವಾಗಿ ಸಾವಿಗೀಡಾಗಿದ್ದರೆ; ಇನ್ನೊಬ್ಬ ಮೃತರು ಬಹು ಅಂಗಾಗ ವೈಫಲ್ಯದಿಂದ ನಮ್ಮ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿ, ಕೊನೆಗೆ ಮೆದುಳಿನ ರಕ್ತಸ್ರಾವದಿಂದ ಮೃತಪಟ್ಟಿರುತ್ತಾರೆ. ಹಾಗೆಯೇ ಮತ್ತೊಬ್ಬ ರೋಗಿಯು ಹಲವಾರು ದಿನಗಳಿಂದ ಮೂತ್ರಕೋಶ ವೈಫಲ್ಯದಿಂದ ಬಳಲುತ್ತಿದ್ದು ಕೊನೆಗೆ ಬಹು ಅಂಗಾಗಳ ಸೋಂಕಿನಿಂದ ಸಹಜ ಸಾವನ್ನಪ್ಪಿದ್ದಾರೆ. ವಿಮ್ಸ್ ಆಸ್ಪತ್ರೆಯು ಉನ್ನತ ಚಿಕಿತ್ಸಾ ಕೇಂದ್ರವಾಗಿದ್ದು ಎಲ್ಲಾ ಕೇಂದ್ರಗಳಲ್ಲಿ ಚಿಕಿತ್ಸೆ ಫಲಕಾರಿಯಾಗದಿದ್ದಲ್ಲಿ ಕೊನೆಗೆ ಪರಿಸ್ಥಿತಿ ಉಲ್ಬಣಗೊಂಡ ನಂತರ ವಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ಬರುವುದರಿಂದ ಸಾವುಗಳು ಆಗುವ ಸಂಭವನೀಯತೆ ಹೆಚ್ಚಾಗುತ್ತದೆ. ಬೆಳಗ್ಗೆ ಅದೇ ಸಮಯದಲ್ಲಿ ವಿದ್ಯುತ್ ಸಂಪರ್ಕ ಕೈಕೊಟ್ಟಿರುವುದು ಕಾಕತಾಳೀಯವಾಗಿದ್ದು, ವಿಮ್ಸ್ ಆಸ್ಪತ್ರೆ ಯಾವಾಗಲೂ ರೋಗಿಗಳ ಹಿತಕ್ಕಾಗಿ ಕಾರ್ಯನಿರ್ವಹಿಸುತ್ತದೆ' ಎಂದು ಈ ಮೂಲಕ ಸಾರ್ವಜನಿಕರಿಗೆ ಹಾಗೂ ಮಾಧ್ಯಮಗಳಿಗೆ ಸ್ಪಷ್ಟೀಕರಣ ನೀಡುತ್ತೇನೆ ಎಂದಿದ್ದಾರೆ.

ಗಂಗಾಧರ ಮೃತರ ಆರೋಪಗಳನ್ನು ತಳ್ಳಿಹಾಕಿದ ಕೂಡಲೆ ಪ್ರಕರಣ ಮತ್ತಷ್ಟು ಅನುಮಾನಗಳಿಗೆ ಎಡೆ ಮಾಡಿದೆ. ಹೀಗಾಗಿ ಘಟನೆಯ ತನಿಖಗೆ ಒತ್ತಡಗಳು ಹೆಚ್ಚಾಗಿದೆ. ಇದರ ಬೆನ್ನಲ್ಲೇ ಸರ್ಕಾರ ಸಮಿತಿ ರಚಿಸುವ ಮೂಲಕ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಕೋಡಿದೆ.

English summary
A five-member committee has been constituted to conduct a high-level investigation into the case of two unexpected deaths at Vims Hospital, Ballari.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X