ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಳ್ಳಾರಿಯಲ್ಲಿ ಮೂವರು ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು!

By ಬಳ್ಳಾರಿ ಪ್ರತಿನಿಧಿ
|
Google Oneindia Kannada News

ಬಳ್ಳಾರಿ, ಜೂನ್ 7: ಗಣಿನಾಡು ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಮೂವರು ಪೊಲೀಸ್ ಸಿಬ್ಬಂದಿಗೆ ಮಹಾಮಾರಿ ಕೊರೊನಾ ವೈರಸ್ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 60 ಕ್ಕೆ ಏರಿಕೆಯಾಗಿದೆ.

ಹೊಸಪೇಟೆ ತಾಲೂಕಿನ ತುಂಗಭದ್ರಾ ಡ್ಯಾಂ ಪೊಲೀಸ್ ಠಾಣೆಯ ಸಿಪಿಐ, ಹೊಸಪೇಟೆ ನಗರದ ಬಡಾವಣೆ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್ ಸ್ಟೆಬಲ್, ಮರಿಯಮ್ಮನಹಳ್ಳಿ ಠಾಣೆಯ ಪೊಲೀಸ್ ಕಾನ್ಸ್ ಸ್ಟೆಬಲ್ ಗೆ ಕೊರೊನಾ ವೈರಸ್ ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ಮೂವರು ಸೋಂಕಿತರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ತಿಳಿಸಿದ್ದಾರೆ.

 ಮತ್ತೊಂದು ಜುಬಿಲಿಯಂಟ್ ಆಗಲಿದೆಯಾ ಬಳ್ಳಾರಿಯ ಜಿಂದಾಲ್... ಮತ್ತೊಂದು ಜುಬಿಲಿಯಂಟ್ ಆಗಲಿದೆಯಾ ಬಳ್ಳಾರಿಯ ಜಿಂದಾಲ್...

ಈ ಮೂರು ಪೊಲೀಸ್ ಠಾಣೆಗಳಲ್ಲಿ ಸೋಂಕಿತರೊಂದಿಗೆ ಮೊದಲ ಸಂಪರ್ಕ ಹೊಂದಿದವರನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು ಪತ್ತೆ ಮಾಡುತ್ತಿದ್ದಾರೆ. ಮೊದಲ ಸಂಪರ್ಕ ಹೊಂದಿದವರನ್ನು ಕ್ವಾರಂಟೈನ್ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ಕಂಟೈನ್ಮೆಂಟ್ ಏರಿಯಾದಲ್ಲಿ ಕೆಲಸ ಮಾಡುತ್ತಿರುವಾಗಲೇ ಅಥವಾ ಬೇರೆ ಯಾವ ಮೂಲದಿಂದ ಈ ಸೋಂಕು ಹರಡಿದೆ ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ ಎಂದಿದ್ದಾರೆ.

Ballary: Coronavirus Infection Detected In 3 Police Constables

ಹೀಗಾಗಿ, ಜಿಲ್ಲೆಯಲ್ಲಿ ಈವರೆಗೂ 43 ಮಂದಿ ಗುಣಮುಖರಾಗಿದ್ದು, ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಉಳಿದ 16 ಮಂದಿಯನ್ನು ಐಸೋಲೇಷನ್ ವಾರ್ಡ್ ನಲ್ಲಿರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ತಿಳಿಸಿದರು.

English summary
Three policemen from Hosapete Taluk in Bellary district have been diagnosed with the Coronavirus Positive Case and the number of infected people has increased to 60.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X