ಬಳ್ಳಾರಿಯಲ್ಲಿ ಬ್ಯಾನರ್ ಅಳವಡಿಸುವ ವಿಚಾರಕ್ಕೆ ರೆಡ್ಡಿ ಬಣಗಳ ನಡುವೆ ಘರ್ಷಣೆ: ಗುಂಡು ತಗುಲಿ ಕಾಂಗ್ರೆಸ್ ಕಾರ್ಯಕರ್ತ ಸಾವು
ಬಳ್ಳಾರಿ, ಜನವರಿ 2: ಬಳ್ಳಾರಿ ನಗರದ ಹವಂಬಾವಿ ಪ್ರದೇಶದಲ್ಲಿನ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ನಿವಾಸದ ಬಳಿ ಗುರುವಾರ ಸಂಜೆ ಬ್ಯಾನರ್ ಕಟ್ಟುವ ವಿಚಾರಕ್ಕೆ ಎರಡು ಯುವಕರ ಗುಂಪುಗಳ ನಡುವೆ ಘರ್ಷಣೆ ನಡಿದಿದೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತನೋರ್ವ ಗುಂಡು ತಗುಲಿ ಮೃತಪಟ್ಟ ಘಟನೆ ನಡೆದಿರುವ ಬಗ್ಗೆ ವರದಿ ಆಗಿದೆ.
ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮ ಹಿನ್ನೆಲೆ ಗುರುವಾರ ಸಂಜೆ ಬ್ಯಾನರ್ ಕಟ್ಟುವ ವಿಚಾರಕ್ಕೆ ರೆಡ್ಡಿ ಬಣಗಳ ನಡುವೆ ಘರ್ಷಣೆ ನಡೆದಿದೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತನೋರ್ವ ಗುಂಡು ತಗುಲಿ ಮೃತಪಟ್ಟ ಘಟನೆ ಬಳ್ಳಾರಿ ನಗರದ ಹವಂಬಾವಿಯಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.

ಮೃತಪಟ್ಟ ವ್ಯಕ್ತಿಯನ್ನು ಬಳ್ಳಾರಿ ಹುಸೇನ ನಗರದ ರಾಜಶೇಖರ (28) ಎಂದು ಗುರುತುಸಲಾಗಿದೆ. ಆತ ತಮ್ಮ ಬೆಂಬಲಿಗ ಎಂದು ಕಾಂಗ್ರೆಸ್ ಶಾಸಕ ನಾರಾ ಭರತರಡ್ಡಿ ಹೇಳಿದ್ದಾರೆ. ಬಿಜೆಪಿ ಶಾಸಕ ಜನಾರ್ದನ ರಡ್ಡಿ ಮನೆ ಬಳಿ ಈ ಘಟನೆ ನಡೆದಿದೆ. ಆದರೆ, ಈತ ಬಲಿಯಾಗಿದ್ದು ಪೊಲೀಸರ ಗುಂಡೇಟಿಗೋ ಅಥವಾ ಸತೀಶ್ ರೆಡ್ಡಿ ಖಾಸಗಿ ಅಂಗರಕ್ಷಕರ ಗುಂಡೇಟಿಗೋ ಎಂಬುದು ಇನ್ನೂ ಖಚಿತವಾಗಿಲ್ಲ.
ಮಾಜಿ ಸಚಿವ ಜನಾರ್ಧನ ರೆಡ್ಡಿ ಬೆಂಬಲಿಗರು ಹಾಗೂ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ. ಈ ವೇಳೆ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಗನ್‌ಮ್ಯಾನ್ ಫೈರಿಂಗ್ ಮಾಡಿದ್ದಾರೆ ಎಂದು ಜನಾರ್ಧನ ರೆಡ್ಡಿ ಆರೋಪ ಮಾಡಿದ್ದಾರೆ.
ಮತ್ತೊಂದೆಡೆ, ಜನವರಿ 3ರಂದು ನಗರದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಹಿನ್ನೆಲೆ ಭರತ್ ರೆಡ್ಡಿ ಬೆಂಬಲಿಗರು ಜನಾರ್ಧನ ರೆಡ್ಡಿ ಅವರ ಮನೆಯ ಮುಂಭಾಗ ಬ್ಯಾನರ್ ಅಳವಡಿಕೆ ಮಾಡಲು ಮುಂದಾಗಿದ್ದರು. ಇದಕ್ಕೆ ಜನಾರ್ಧನ ರೆಡ್ಡಿ ಅಭಿಮಾನಿಗಳು ಮತ್ತು ಬೆಂಬಲಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಬ್ಯಾನರ್ ಅಳವಡಿಗೆ ವಿಚಾರಕ್ಕೆ ಆರಂಭವಾದ ಮಾತಿನ ಚಕಮಕಿ ಕೊನೆಗೆ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಈ ವೇಳೆ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಹಿನ್ನೆಲೆ ಪೊಲೀಸರು ಲಾಠಿ ಪ್ರಹಾರ ನಡೆಸಿ ಅವರನ್ನು ಚದುರಿಸಿದ್ದಾರೆ. ಇನ್ನೂ ಘಟನೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗಿದ್ದು, 144 ಸೆಕ್ಷನ್ ಜಾರಿ ಮಾಡಲಾಗಿದೆ. ಅವಂಬಾವಿ ಪ್ರದೇಶದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.
ಜನಾರ್ಧನ್ ರೆಡ್ಡಿ ಹೇಳಿದ್ದೇನು?: ನನ್ನ ಹತ್ಯೆಗೆ ಸಂಚು ನಡೆದಿದೆ. ಬಳ್ಳಾರಿಯಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಇಲ್ಲಿನ ಪೊಲೀಸರು ಅಸಹಾಯಕರಾಗಿದ್ದಾರೆ. ಭರತ್ ರೆಡ್ಡಿ ಅವರ ತಂದೆ ನಾರಾಯಣ ರೆಡ್ಡಿ ದೊಡ್ಡ ಕ್ರಿಮಿನಲ್. ಈಗ ಅವರ ಮಗ ಭರತ್ ರೆಡ್ಡಿ ರೌಡಿ ಗ್ಯಾಂಗ್ ಕಟ್ಟಿಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಬಳ್ಳಾರಿ ಶಾಸಕ ಹೇಳಿದ್ದೇನು?: ಬಿಜೆಪಿ ಹಾಗೂ ಜನಾರ್ದನ ರೆಡ್ಡಿ ವಾಲ್ಮೀಕಿಗೆ ಅವಮಾನ ಮಾಡಿದ್ದಾರೆ. ಇದರ ಸೇಡನ್ನು ತೀರಿಸಿಕೊಳ್ಳದೇ ಬಿಡುವುದಿಲ್ಲ. ಇದೊಂದು ಪೂರ್ವ ಯೋಜಿತ ಕೃತ್ಯ. ನಾಡಿದ್ದು ಕಾರ್ಯಕ್ರಮ ನಡೆಯದಂತೆ ತಡೆಯುವ ಯತ್ನ ನಡೆದಿದೆ ಎಂದು ನಾರಾ ಬಳ್ಳಾರಿ ಶಾಸಕ ಭರತ ರೆಡ್ಡಿ ಆರೋಪ ಮಾಡಿದ್ದಾರೆ.
11 ಜನರ ಮೇಲೆ ಕೇಸ್ ದಾಖಲು: ಘಟನೆ ಸಂಬಂಧ ಬ್ರೂಸ್‌ಫೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜನಾರ್ದನ ರೆಡ್ಡಿ, ಸೋಮಶೇಖರ್ ರೆಡ್ಡಿ, ಶ್ರೀರಾಮುಲು, ಅಲಿಖಾನ್, ದಮ್ಮೂರ ಶೇಕರ್ ಸೇರಿದಂತೆ 11 ಜನರ ಮೇಲೆ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ಬ್ಯಾನರ್ ಅಳವಡಿಕೆ ವಿಚಾರಕ್ಕೆ ಗಲಾಟೆ ಆರಂಭ ಆಗಿತ್ತು. ಜನಾರ್ದನ ರೆಡ್ಡಿ ಬೆಂಬಲಿಗರು ಹಾಗೂ ಶಾಸಕ ಭರತ್ ರೆಡ್ಡಿ ಬೆಂಬಲಿಗರ ನಡುವೆ ಕಲ್ಲು ತೂರಾಟ ನಡೆದಿದೆ. ಇನ್ನೂ ಈ ಗಲಾಟೆ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪುತ್ತಿದ್ದಂತೆ ಶಾಸಕ ಭರತ್ ರೆಡ್ಡಿ ಬೆಂಬಲಿಗ ಸತೀಶ ರೆಡ್ಡಿ ಖಾಸಗಿ ಗನ್ ಮ್ಯಾನ್‌ಗಳು ಏರ್ ಫೈರ್ ನಡೆಸಿದ್ದಾರೆ. ಈ ವೇಳೆ ಭರತ್ ರೆಡ್ಡಿ ಬೆಂಬಲಿಗ ಸತೀಶ್ ರೆಡ್ಡಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ.












Click it and Unblock the Notifications