ಬಳ್ಳಾರಿಯಲ್ಲಿ 7 ಲಕ್ಷ ರೂ ಮೌಲ್ಯದ ಮದ್ಯ ವಶಪಡಿಸಿಕೊಂಡ ಪೊಲೀಸರು
ಬಳ್ಳಾರಿ, ಏಪ್ರಿಲ್ 17: ಬಳ್ಳಾರಿಯಲ್ಲಿ ಲಾಕ್‌ಡೌನ್ ನಡುವೆ ಮದ್ಯ ಮಾರಾಟ ಮಾಡುತ್ತಿದ್ದು, ಪೊಲೀಸರು ಅದನ್ನು ವಶಕ್ಕೆ ಪಡೆದಿದ್ದಾರೆ. ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿಯಲ್ಲಿ ಈ ಘಟನೆ ನಡೆದಿದೆ.
ಲಾಕ್‌ಡೌನ್ ನಡುವೆ ಹ್ಯಾರಡ ಎಂಬ ಗ್ರಾಮದಲ್ಲಿ ಶಾಂತಿ ಬಾರ್ ಮತ್ತು ರೆಸ್ಟೊರೆಂಟ್ ತೆರೆಯಲಾಗಿತ್ತು. ಮಾಹಿತಿಯನ್ನು ಆಧರಿಸಿ ಅಬಕಾರಿ ಅಧಿಕಾರಿಗಳು ಹಾಗೂ ಪೊಲೀಸರು ನಿನ್ನೆ ರಾತ್ರಿ ದಾಳಿ ನಡೆಸಿದ್ದಾರೆ. ದಾಳಿ ಸಮಯದಲ್ಲಿ 7 ಲಕ್ಷದ 32 ಸಾವಿರ ಮೌಲ್ಯದ ಮದ್ಯವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಾರ್ ಮಾಲೀಕ ಪ್ರಭಾಕರ್ ಲಕ್ಕಪ್ಪ ಬಂಧನ ಭೀತಿಯಲ್ಲಿ ತಲೆಮರೆಸಿಕೊಂಡಿದ್ದಾನೆ. ಮದ್ಯ ಸಾಗಾಟಕ್ಕೆ ಬಳಸಿಕೊಂಡಿದ್ದ ವಾಹನವನ್ನು ಸಹ ವಶಕ್ಕೆ ಪಡೆಯಲಾಗಿದೆ. ಅಬಕಾರಿ ಉಪ ನಿರೀಕ್ಷಕಿ ನೇತ್ರಾ ಉಪ್ಪಾರ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

ಲಾಕ್‌ಡೌನ್ ಸಮಯದಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಏರಲಾಗಿದೆ. ಮೇ 3ರವರೆಗೆ ರಾಜ್ಯದಲ್ಲಿ ಮದ್ಯ ಮಾರಾಟ ಮಾಡುವಂತಿಲ್ಲ.












Click it and Unblock the Notifications